ಎರಡನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಈ ಕ್ರಮಾಂಕದಲ್ಲಿ ಬ್ಯಾಟ್ ಮಾಡಬೇಕು
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಹಾಗೂ ನಾಯಕ ರೋಹಿತ್ ಶರ್ಮಾ ಎರಡನೇ ಟೆಸ್ಟ್‌ನಲ್ಲಿ ಯಾವ ಕ್ರಮಾಂಕದಲ್ಲಿ ಆಡಬೇಕು ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಈ ನಿಟ್ಟಿನಲ್ಲಿ ಹಲವರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾದ ನಾಯಕ ರೋಹಿತ್ ಯಾವ ಸ್ಥಾನದಲ್ಲಿ ಆಡಿದರೆ ಸೂಕ್ತ ಎಂಬ ಲೆಕ್ಕಾಚಾರ ಆರಂಭವಾಗಿದೆ.
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಆಡದ ಕಾರಣ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಯಾವ ಸಂಖ್ಯೆಯಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬ ಚರ್ಚೆ ತೀವ್ರವಾಗಿದೆ.

ಅನುಭವದ ಕೊರತೆಯಿರುವ ಕಾರಣ ರೋಹಿತ್ ಶರ್ಮಾ ಎರಡನೇ ಟೆಸ್ಟ್‌ನಲ್ಲಿ ಓಪನಿಂಗ್ ಮಾಡುವ ಬದಲು ಮಧ್ಯಮ ಕ್ರಮಾಂಕದಲ್ಲಿ ಆಡಬೇಕು ಎಂದು ಅನುಭವಿ ಆಟಗಾರರು ನಂಬಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ 4 ನೇ ಸ್ಥಾನದಲ್ಲಿ ಕಣಕ್ಕೆ ಇಳಿಯಬೇಕು ಎಂದು ಮಾಜಿ ಕ್ರಿಕೆಟಿಗ ದೀಪ್ ದಾಸ್ ಗುಪ್ತಾ ಹೇಳಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಳೆದ ಹಲವು ಪಂದ್ಯಗಳಲ್ಲಿ ಉತ್ತಮ ಆರಂಭವನ್ನು ನೀಡುತ್ತಿದ್ದರೂ, ದೊಡ್ಡ ಇನ್ನಿಂಗ್ಸ್ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ 24 ಮತ್ತು 39 ರನ್‌ಗಳ ಇನ್ನಿಂಗ್ಸ್ ಕಟ್ಟಿದ್ದರು. ಆದರೆ, ಎರಡೂ ಇನ್ನಿಂಗ್ಸ್‌ಗಳಲ್ಲಿ ನಾಯಕ ರೋಹಿತ್ ಶರ್ಮಾ ತಪ್ಪಾದ ಹೊಡೆತಕ್ಕೆ ಮುಂದಾಗಿ ಔಟ್ ಆಗಿದ್ದಾರೆ.

ಆದರೆ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿದರು. ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ 86 ರನ್ ಗಳಿಸಿದ್ದರು. ಎರಡನೇ ಇನಿಂಗ್ಸ್‌ನಲ್ಲಿ ರಾಹುಲ್ 22 ರನ್ ಗಳಿಸಿದರು. ಆದರೆ, ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಇನ್ನು ಮುಂದೆ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ಭಾಗವಾಗಿಲ್ಲ.
ರೋಹಿತ್ ಶರ್ಮಾ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ ಇನ್ನಿಂಗ್ಸ್ ಆರಂಭಿಸುವುದು ಯಾರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಯಶಸ್ವಿ ಜೈಸ್ವಾಲ್ ಜೊತೆ ಶುಭಮನ್ ಗಿಲ್ ಆರಂಭಿಕರಾಗಿ ಕಣಕ್ಕೆ ಇಳಿಯುವುದು ಸೂಕ್ತ. ಮೂರನೇ ಕ್ರಮಾಂಕದಲ್ಲಿ ರಜತ್ ಪಟಿದಾರ ಬ್ಯಾಟಿಂಗ್ ಮಾಡಿದರೆ ಒಳ್ಳೆಯದು ಎಂದು ನಂಬಲಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ಅನುಭವಿ ಬ್ಯಾಟರ್ ಅವಶ್ಯತೆ ಇದೆ. ಹೀಗಾಗಿ ರೋಹಿತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ ಸೂಕ್ತ ಎಂದು ನಂಬಲಾಗಿದೆ.

ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಪದಾರ್ಪಣೆ ಮಾಡಲು ಸರ್ಫರಾಜ್ ಖಾನ್ ಅಥವಾ ರಜತ್ ಪಾಟಿದಾರ್‌ಗೆ ಅವಕಾಶ ನೀಡಬೇಕಾಗಿದೆ. ದೀಪ್ ದಾಸ್ ಗುಪ್ತಾ, "ಶುಬ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಬೇಕು" ಎಂದು ಹೇಳಿದರು. ರಜತ್ ಪಾಟಿದಾರ್ ಮೂರನೇ ಸ್ಥಾನದಲ್ಲಿ ಆಡಬೇಕು.
ರೋಹಿತ್ ಶರ್ಮಾ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕು, ಶ್ರೇಯಸ್ ಅಯ್ಯರ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು. ಇದಲ್ಲದೇ ನಾಲ್ವರು ಸ್ಪಿನ್ನರ್ ಗಳೊಂದಿಗೆ ಟೀಂ ಇಂಡಿಯಾ ಮೈದಾನಕ್ಕಿಳಿಯಬೇಕು. ಅಶ್ವಿನ್ ಮತ್ತು ಅಕ್ಷರ್ ಜೊತೆಗೆ ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಕೂಡ ತಂಡದ ಭಾಗವಾಗಬೇಕು ಎಂದು ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications