ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಇಂಗ್ಲೀಷರ ನೆಲದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ವಿರಾಟ್ ಬಳಗ

Team India celebrates 75th Independence Day London, Virat Kohli, Ravi Shastri hoist national flag

ಇಡೀ ಭಾರತ ಇಂದು 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಆಚರಿಸುತ್ತಿದೆ. ದೇಶದ ಮೂಲೆ ಮೂಲೆಯಲ್ಲಿಯೂ ಧ್ವಜಾರೋಹಣ ಮಾಡಿ ಸಿಹಿ ತಿನಿಸಿ ಸಂಭ್ರಮಿಸಿದೆ. ಈ ವಿಶೇಷ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸದಲ್ಲಿದ್ದು ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿದೆ. ಹೀಗಾಗಿ ಇಂಗ್ಲೀಷರ ನಾಡಿನಲ್ಲಿಯೇ ಭಾರತ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಆಚರಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಲಾರ್ಡ್ಸ್‌ನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಈ ವಿಶೇಷ ದಿನವನ್ನು ಸಂಭ್ರಮಿಸಿದ್ದಾರೆ. ಲಂಡನ್‌ನಲ್ಲಿರುವ ಇಂಡಿಯನ್ ಹೈಕಮಿಷನ್ ಕಚೇರಿಯ ಆವರಣದಲ್ಲಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗಿದ್ದರು.

ಲಾರ್ಡ್ಸ್ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಹೈಕಮಿಷನರ್ ಕಛೇರಿಯ ಆವರಣದಲ್ಲಿನ ಧ್ವಜಸ್ತಂಭದಲ್ಲಿ ಭಾರತದ ಧ್ವಜಾರೋಹಣ ಮಾಡಿದರು. ಬಳಿಕ ಎಲ್ಲಾ ಸದಸ್ಯರು ಕೂಡ ಭಾರತದ ರಾಷ್ಟ್ರಗೀತೆಯನ್ನು ಹಾಡಿದರು.

ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರುಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರು

ಇನ್ನು ಈ ವಿಶೇಷ ಸಂದರ್ಭದ ಬಗ್ಗೆ ಬಿಸಿಸಿಐನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. "ಭಾರತದ ಸ್ವಾತಂತ್ರ್ಯೋತ್ಸವದ ಈ ವಿಶೇಷ ಸಂದರ್ಭದಲ್ಲಿ ಭಾರತೀಯ ತಮಡದ ಎಲ್ಲಾ ಸದಸ್ಯರು ಕೂಡ ಜೊತೆಯಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು" ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದೆ.

ಇನ್ನು ಮತ್ತೊಂದೆಡೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದ ಭಾರತದ 32 ಕ್ರೀಡಾಪಟುಗಳು ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಸಂಭ್ಮದಲ್ಲಿ ಭಾಗಿಯಾಗಿದ್ದರು. ಈ ಮೂಲಕ ಐತಿಹಾಸಿಕ ಕ್ಷಣದಲ್ಲಿ ಈ ಕ್ರೀಡಾಪಟುಗಳು ಭಾಗಿಯಾಗಿ ಸಂಭ್ರಮಿಸಿದ್ದಾರೆ. ಇನ್ನು ಈ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಾರತದ ಪರವಾಗಿ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರ ಪ್ರತಿಕ್ರಿಯಿಸಿದರು. ಈವರೆಗೂ ಈ ಐತಿಹಾಸಿಕ ಕಾರ್ಯಕ್ರಮವನ್ನು ನಾನು ಟಿವಿಯಲ್ಲಿ ನೋಡುತ್ತಿದ್ದೆ. ಆದರೆ ಇಂದು ನಾನು ಖುದ್ದಾಗಿ ಹಾಜರಾಗಿದ್ದೇನೆ ಎಂದು ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ಇದಕ್ಕೂ ಮೊದಲು ನಾನು ಈ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದೆ. ಆದರೆ ಇಂದು ನಾವು ಖುದ್ದಾಗಿ ಭಾಗವಹಿಸುತ್ತಿದ್ದೇವೆ. ಇದು ಹೊಸ ಅನುಭವ. ನಾವು ಸುದೀರ್ಘ ಕಾಲದಿಂದ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದಿರಲಿಲ್ಲ. ಇಂದು ನನ್ನಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿರುವುದನ್ನು ನೋಡಿ ನನಗೆ ತುಂಬಾ ಹರ್ಷವಾಗುತ್ತಿದೆ" ಎಂದು ನೀರಜ್ ಚೋಪ್ರಾ ಹೇಳಿದ್ದಾರೆ.

ಇನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಈಗ ರೋಚಕ ಹಂತವನ್ನು ತಲುಪಿದೆ. ಎರಡನೇ ಇನ್ನಿಂಗ್ಸ್‌ನ ಆರಂಬದಲ್ಲಿ ಭಾರತದ ಮೂರು ವಿಕೆಟ್ ಕೀಳುವ ಮೂಲಕ ಆರಂಭೀಕ ಆಘಾತವನ್ನು ನೀಡುವಲ್ಲಿ ಇಂಗ್ಲೆಂಡ್ ತಂಡ ಯಶಸ್ವಿಯಾಗಿತ್ತು. ಆದರೆ ಎಸೆರಡನೇ ಸೆಶನ್‌ನಲ್ಲಿ ಟೀಮ್ ಇಂಡಿಯಾದ ಅನುಭವಿಗಳಾದ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಎಚ್ಚರಿಕೆಯ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಧಾರವಾಗಿದ್ದಾರೆ. ಎರಡನೇ ಸೆಶನ್‌ನ ಅಂತ್ಯಕ್ಕೆ ಭಾರತ 105 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದೆ. ಈ ಅವಧಿಯಲ್ಲಿ ಭಾರತ 78 ರನ್‌ಗಳ ಮುನ್ನಡೆಯನ್ನು ಸಾಧಿಸಿತ್ತು. ಚೇತೇಶ್ವರ್ ಪೂಜಾರ 29 ರನ್ ಹಾಗೂ ಅಜಿಂಕ್ಯಾ ರಹಾನೆ 24 ರನ್ ಸಿಡಿಸಿ ಕ್ರೀಸ್‌ನಲ್ಲಿದ್ದರು.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

Story first published: Sunday, August 15, 2021, 20:39 [IST]
Other articles published on Aug 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X