ಮೆಲ್ಬರ್ನ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಿಸಿದ ಟೀಮ್ ಇಂಡಿಯಾ

ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ 2021ರ ಹೊಸ ವರ್ಷದ ಸಂಭ್ರಮಾಚರಣೆಯನ್ನು ಮೆಲ್ಬರ್ನ್‌ನಲ್ಲಿ ಮಾಡಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯಲಿರುವ ತೃತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ಅಜಿಂಕ್ಯ ರಹಾನೆ ನಾಯಕತ್ವದ ಭಾರತ ತಂಡ ಹೊಸ ವರ್ಷದ ಖುಷಿ ಹಂಚಿಕೊಂಡಿದೆ.

ಆಸೀಸ್ ವಿರುದ್ಧದ 3ನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳು ಪ್ರಕಟ!

ಭಾರತದ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್, ಕನ್ನಡಿಗ ಕೆಎಲ್ ರಾಹುಲ್ ಇನ್‌ಸ್ಟಾಗ್ರಾಮ್‌ನಲ್ಲಿ ತಂಡದ ಹೊಸ ವರ್ಷಾಚರಣೆಯ ಚಿತ್ರ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಹುಲ್ ಜೊತೆಗೆ ವೇಗಿ ಜಸ್‌ಪ್ರೀತ್‌ ಬೂಮ್ರಾ, ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಮತ್ತು ತಂಡದ ಸಿಬ್ಬಂದಿಗಳಿದ್ದಾರೆ.

ರಾಹುಲ್ ಶೇರ್ ಮಾಡಿರುವ ಪೋಸ್ಟ್‌ನಲ್ಲಿ 'ಹೊಸ ವರ್ಷ, ಹೊಸ ಭಾವನೆ, ಹೊಸ ಅವಕಾಶಗಳು, ಅದೇ ಕನಸುಗಳು, ಶುಭ್ರ ಆರಂಭ 2021' ಎಂದು ಬರೆದುಕೊಳ್ಳಲಾಗಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಕೂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಫಾಲೋವರ್ಸ್‌ಗೆ ಹೊಸ ವರ್ಷದ ಶುಭಾಶಯ ತಿಳಿಸಿದೆ.

ಐತಿಹಾಸಿಕ ದಾಖಲೆ ನಿರ್ಮಿಸಿದ ಪಾಕಿಸ್ತಾನ ಕ್ರಿಕೆಟರ್ ಫವಾದ್ ಆಲಂ!

ಭಾರತ-ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿದ್ದು, ಎರಡೂ ತಂಡಗಳು 1-1ರ ಸಮಬಲ ಸಾಧಿಸಿವೆ. ಮೂರನೇ ಪಂದ್ಯ ಜನವರಿ 7ರಂದು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ 5 AMಗೆ ಆರಂಭಗೊಳ್ಳಲಿದೆ. ಮೂರನೇ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ ಆಡಲಿದ್ದಾರೆ.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Friday, January 1, 2021, 13:48 [IST]
Other articles published on Jan 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X