Rahul Dravid: ಆಲ್‌ರೌಂಡರ್ ಆಟದ ಮೂಲಕ ಕರ್ನಾಟಕಕ್ಕೆ ನೆರವಾಗುತ್ತಿರುವ ರಾಹುಲ್ ದ್ರಾವಿಡ್ ಪುತ್ರ ಸಮಿತ್
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ತಮ್ಮ ಅತ್ಯುತ್ತಮ ಬ್ಯಾಟಿಂಗ್‌ನಿಂದಾಗಿ ವಿಶ್ವದಲ್ಲೇ ಹೆಸರು ಮಾಡಿರುವ ಆಟಗಾರ. ಪ್ರಸ್ತುತ, ಅವರು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರ ಮಗ ಸಮಿತ್ ದ್ರಾವಿಡ್ ಕ್ರಿಕೆಟ್ ಮೈದಾನದಲ್ಲಿ ಆಲ್ ರೌಂಡರ್ ಆಗಿ ತಮ್ಮ ಛಾಪು ಮೂಡಿಸುತ್ತಿದ್ದಾರೆ.
ಅಂಡರ್-19 ಕೂಚ್ ಬೆಹಾರ್ ಟ್ರೋಫಿಯಲ್ಲಿ ಸಮಿತ್ ಕರ್ನಾಟಕದ ಪರ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಸಮಿತ್ 12 ಓವರ್ ಬೌಲ್ ಮಾಡಿ 49 ರನ್ ನೀಡಿದರು. ಈ ಅವಧಿಯಲ್ಲಿ ಅವರು ಒಂದೇ ಒಂದು ವಿಕೆಟ್ ಪಡೆಯದಿದ್ದರೂ, ಅವರು ಖಂಡಿತವಾಗಿಯೂ ಬೌಲಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ರಾಹುಲ್ ದ್ರಾವಿಡ್ ಪುತ್ರ ಸಮಿತ್ ಆಲ್ ರೌಂಡರ್ ಆಟದಿಂದ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಡಿಸೆಂಬರ್‌ನಲ್ಲಿ, ಜೂನಿಯರ್ ದ್ರಾವಿಡ್ ಅಂಡರ್-19 ಕೂಚ್ ಬೆಹಾರ್ ಟ್ರೋಫಿ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧ 98 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ನೊಂದಿಗೆ ಎಲ್ಲರ ಗಮನ ಸೆಳೆದಿದ್ದರು.
ಭಾರತದ ಹಿರಿಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಮಗನಾದ ಸಮಿತ್ ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಆಸಕ್ತಿ. ಸಮಿತ್ ಕಾಲಕಾಲಕ್ಕೆ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನವನ್ನೂ ಪಡೆಯುತಲ್ಲೇ ಇದ್ದಾರೆ. ಇದೇ ಕಾರಣಕ್ಕೆ ಜೂನಿಯರ್ ಲೆವೆಲ್ ಕ್ರಿಕೆಟ್ ನಲ್ಲಿ ತಮ್ಮ ಮ್ಯಾಜಿಕ್ ತೋರಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದ ವೇಳೆ ಸುರೇಶ್ ರೈನಾ ರಾಹುಲ್ ದ್ರಾವಿಡ್ ಅವರಿಗೆ ಸಮಿತ್ ಬಗ್ಗೆ ಪ್ರಶ್ನೆ ಕೇಳಿದಾಗ ಅವರ ಉತ್ತರ ಸಾಕಷ್ಟು ತಮಾಷೆಯಾಗಿತ್ತು. ಸಮಿತ್ ಬಗ್ಗೆ ರಾಹುಲ್ ದ್ರಾವಿಡ್ ಅವರು ಇನ್ನು ಮುಂದೆ ಕ್ರಿಕೆಟ್ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದು ಹೇಳಿದ್ದಾರೆ. ನಾನು ಸಮಿತ್‌ಗೆ ತರಬೇತಿ ನೀಡಲು ಪ್ರಯತ್ನಿಸುವುದಿಲ್ಲ ಎಂದು ರಾಹುಲ್ ಹೇಳಿದರು. ಪೋಷಕರು ಮತ್ತು ತರಬೇತುದಾರರಾಗುವುದು ಕಷ್ಟ. ನಾನು ಪೋಷಕರಾಗಲು ಪ್ರಯತ್ನಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ರಾಹುಲ್ ದ್ರಾವಿಡ್ ಅತ್ಯುತ್ತಮ ಆಟಗಾರನಲ್ಲದೆ, ಉತ್ತಮ ಕೋಚ್ ಕೂಡ ಆಗಿದ್ದಾರೆ. ಅವರು ಹಿರಿಯ ಭಾರತೀಯ ತಂಡಕ್ಕೆ ತರಬೇತಿ ನೀಡುವುದರ ಜೊತೆಗೆ ಟೀಮ್ ಇಂಡಿಯಾಗೆ ಅಂಡರ್-19 ಕೋಚ್ ಕೂಡ ಮಾಡಿದ್ದಾರೆ. ಇದಲ್ಲದೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲೂ ಸೇವೆ ಸಲ್ಲಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications