For Quick Alerts
ALLOW NOTIFICATIONS  
For Daily Alerts
 

ವಿದೇಶಿ ನೆಲದಲ್ಲಿ ಇತಿಹಾಸ ನಿರ್ಮಿಸದ ಭಾರತ: ಟಿ20 ಕ್ರಿಕೆಟ್‌ನಲ್ಲಿ ಗೆಲುವಿನ ಶತಕ

ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನವನ್ನು ನೀಡುತ್ತಿದೆ. ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸಿತು. ಸೂರ್ಯಕುಮಾರ್ ಯಾದವ್ ಪಡೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಿದಲ್ಲಿ ಯುವ ಆಟಗಾರ ತಿಲಕ್ ವರ್ಮಾ ಉತ್ತಮ ಕೊಡುಗೆ ನೀಡಿದ್ದಾರೆ. ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದೆ.

ಪ್ರಸಕ್ತ ಟೀಮ್ ಇಂಡಿಯಾ ಅಮೋಘ ಆಟವನ್ನು ಆಡುತ್ತಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿದ್ದ ಸೂರ್ಯ ಪಡೆ, ಎರಡನೇ ಪಂದ್ಯದಲ್ಲಿ ಸೋಲು ಕಂಡಿತ್ತು. ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ. ಈ ಮೂಲಕ ಈ ದಾಖಲೆ ಮಾಡಿದ ವಿಶ್ವದ ಎರಡನೇ ತಂಡ ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದೆ. ಈಗ ಭಾರತದ ಚಿತ್ತ ಪಾಕಿಸ್ತಾನ ದಾಖಲೆಯ ಮೇಲೆ ನೆಟ್ಟಿದೆ.

Team India Creates History with 100th T20I Win Abroad Leads Series Against South Africa 2-1

ಪಾಕ್‌ ದಾಖಲೆಯ ಮೇಲೆ ಕಣ್ಣು

ಸೆಂಚೂರಿಯನಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗೆಲುವಿನ ಶತಕ ಬಾರಿಸಿದೆ. ಭಾರತ ಗೆಲುವಿನ ಶತಕ ಬಾರಿಸಿದ್ದು, ವಿದೇಶದಲ್ಲಿ ಎನ್ನುವುದೇ ಹೆಮ್ಮೆಯ ವಿಷಯ. ಈ ಮೂಲಕ ಈ ಸಾಧನೆಯನ್ನು ಮಾಡಿದ ವಿಶ್ವದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಇದಕ್ಕೂ ಮುನ್ನ ಪಾಕಿಸ್ತಾನ ಮಾತ್ರ ಈ ಸಾಧನೆ ಮಾಡಿತ್ತು.

ಪಾಕಿಸ್ತಾನ ವಿದೇಶದಲ್ಲಿ ಆಡಿದ 203 ಟಿ20 ಪಂದ್ಯಗಳ ಪೈಕಿ 116 ಜಯ ಸಾಧಿಸಿದರೆ, 78 ಪಂದ್ಯಗಳಲ್ಲಿ ಸೋಲು ಕಂಡಿದೆ. ಭಾರತ ತಂಡವು ವಿದೇಶಿ ನೆಲದಲ್ಲಿ 152 ಪಂದ್ಯಗಳಲ್ಲಿ 100 ಗೆಲುವನ್ನು ದಾಖಲಿಸಿದೆ. ವಿದೇಶಿ ನೆಲದಲ್ಲಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ಮೂರನೇ ತಂಡ ಎಂಬ ಕೀರ್ತಿ ಪಾಕ್‌ಗೆ ಸಲ್ಲುತ್ತದೆ. ಆಫ್ಘಾನ್‌ 152 ಟಿ20 ಪಂದ್ಯಗಳಲ್ಲಿ 84 ಗೆಲುವು ದಾಖಲಿಸಿದೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ನಾಲ್ಕನೇ ಸ್ಥಾನದಲ್ಲಿದೆ. ಆಸೀಸ್ 137 ಪಂದ್ಯಗಳಲ್ಲಿ 71 ಗೆಲುವು ಸಾಧಿಸಿದರೆ, ಇಂಗ್ಲೆಂಡ್ 129 ಪಂದ್ಯಗಳಲ್ಲಿ 67 ಗೆಲುವು ದಾಖಲಿಸಿ ಐದನೇ ಸ್ಥಾನದಲ್ಲಿದೆ.

Team India Creates History with 100th T20I Win Abroad Leads Series Against South Africa 2-1

ನಾಲ್ಕನೇ ಪಂದ್ಯ

ಶುಕ್ರವಾರ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ನಾಲ್ಕನೇ ಟಿ20 ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ವಶಕ್ಕೆ ಪಡೆಯುವ ಕನಸು ಭಾರತ ತಂಡದ್ದಾಗಿದೆ. ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬದಲಾವಣೆ ಮಾಡುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ಸಮನಾಗಿಸುವ ಕನಸು ಹೊಂದಿದೆ.

Story first published: Thursday, November 14, 2024, 13:25 [IST]
Other articles published on Nov 14, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+