ಮೇ 18-19ರಿಂದ ಮುಂಬೈನಲ್ಲಿ ಪ್ರತ್ಯೇಕವಾಗಿರಲಿದ್ದಾರೆ ಭಾರತೀಯ ಕ್ರಿಕೆಟಿಗರು: ವರದಿ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾಗಿಯಾಗಲಿರುವ ಟೀಮ್ ಇಂಡಿಯಾ ಆಟಗಾರರ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ತಂಡ ಜೂನ್ 2ರಂದು ಇಂಗ್ಲೆಂಡ್‌ಗೆ ಹಾರಲಿದೆ. ಅದಕ್ಕೂ ಮುನ್ನ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಬಿಸಿಸಿಐ ತೆಗೆದುಕೊಳ್ಳಲಿದ್ದು ಮುಂಬೈನಲ್ಲಿ ಐಸೋಲೇಶನ್‌ಗೆ ಒಳಗಾಗಲಿದ್ದಾರೆ.
ಇಂಗ್ಲೆಂಡ್‌ಗೆ ಹಾರಲಿರುವ ಎಲ್ಲಾ ಆಟಗಾರರು ಹಾಗೂ ಅವರೊಂದಿಗೆ ತೆರಳುವ ಕುಟುಂಬಸ್ಥರು ಮೇ 18-19ರಂದು ಮುಂಬೈಗೆ ಆಗಮಿಸಲಿದ್ದು ಬಳಿಕ ಐಸೋಲೇಶನ್‌ಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಆಟಗಾರರ ಕೊರೊನಾ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಮುಂದಿನ ಒಂದೆರಡು ದಿನಗಳಲ್ಲಿ ಇಂಗ್ಲೆಂಡ್‌ಗೆ ತೆರಳಲಿರುವ ಎಲ್ಲಾ ಆಟಗಾರರ ಮನೆಗಳಿಗೂ ಬಿಸಿಸಿಐನ ವೈದ್ಯಕೀಯ ತಂಡ ತೆರಳಿ ಅವರ ಆರ್‌ಟಿ ಪಿಸಿಆರ್ ಪರೀಕ್ಷೆಯನ್ನು ನಡೆಸಲಿದೆ. ಅದಾದ ನಂತರ ಈ ಎಲ್ಲಾ ಆಟಗಾರರು ಕೂಡ ಮುಂಬೈನತ್ತ ಪ್ರಯಾಣವನ್ನು ಬೆಳೆಸಲಿದ್ದಾರೆ ಎಂದು ಮಾಹಿತಿ ದೊರೆತಿದೆ.
ಇಂಗ್ಲೆಂಡ್‌ಗೆ ಹಾರಲಿರುವ ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್ ರಾಹುಲ್(ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ) ಮತ್ತು ವೃದ್ಧಿಮಾನ್ ಸಾಹಾ (ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ)
ಮೀಸಲು ಆಟಗಾರರು: ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಅರ್ಜಾನ್ ನಾಗ್ವಾಸ್ವಲ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications