ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ಗಳ ವಿರುದ್ಧ ಭರ್ಜರಿ ಪ್ಲ್ಯಾನಿಂಗ್ ಮಾಡಿಕೊಂಡಿದ್ದ ದಕ್ಷಿಣ ಆಫ್ರಿಕಾ ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಭಾರೀ ನಿರಾಸೆ ಅನುಭವಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ಟೀಮ್ ಇಂಡಿಯಾದ ಅಜೇಯ ಓಟಕ್ಕೆ ಬ್ರೇಕ್ ಹಾಕಿದೆ. ಭಾರತದ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಟೂರ್ನಿಯಲ್ಲಿ ಮೊದಲ ಸೋಲನ್ನು ಕಂಡಿದೆ.
ದಕ್ಷಿಣ ಆಫ್ರಿಕಾ ನೀಡಿದ್ದ ಸ್ಪರ್ಧಾತ್ಮಕ ಮೊತ್ತವನ್ನು ಹಿಂಬಾಲಿಸಿದ ಟೀಮ್ ಇಂಡಿಯಾದ ಆರಂಭ ಉತ್ತಮವಾಗಿರಲಿಲ್ಲ. ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಇಶಾನ್ ಕಿಶನ್ ಸೊನ್ನೆ ಸುತ್ತಿದರು. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ತಿಲಕ್ ವರ್ಮಾ ಒತ್ತಡವನ್ನು ಮೆಟ್ಟಿನಿಲ್ಲುವಲ್ಲಿ ವಿಫಲರಾದರು. ಅಲ್ಲದೆ ಟೂರ್ನಿಯುದಕ್ಕೂ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಅಭಿಷೇಕ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧವೂ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಎಡವಿದರು. ಇವರು ದಕ್ಷಿಣ ಆಫ್ರಿಕಾದ ಬೌಲರ್‌ಗಳ ಬಿಗುವಿನ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಇವರ ಆಟ 15 ರನ್‌ಗಳಿಗೆ ಕೊನೆಯಾಯಿತು.

ದೊಡ್ಡ ಮೊತ್ತವನ್ನು ಚೇಸ್ ಮಾಡುವಾಗ ಹೇಗೆ ಆಡಬೇಕು ಎಂಬುದನ್ನು ಮರೆತು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಬ್ಯಾಟರ್ಸ್ ರನ್ ಕಲೆ ಹಾಕುವಲ್ಲಿ ಎಡವಿದರು. ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಕಾಣಿಕೆ ನೀಡದೆ ನಿರಾಸೆ ಅನುಭವಿಸಿದರು. ನಾಯಕ ಸೂರ್ಯಕುಮಾರ್ ಯಾದವ್ 22 ಎಸೆತಗಳಲ್ಲಿ 2 ಬೌಂಡರಿ ಸೇರಿದಂತೆ 18 ರನ್ ಬಾರಿಸಿ ಔಟ್ ಆದರು.
ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 18 ರನ್ ಗಳಿಗೆ ಆಟ ಮುಗಿಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಆಲ್‌ರೌಂಡರ್ ಶಿವಂ ದುಬೆ 37 ಎಸೆತಗಳಲ್ಲಿ 1 ಬೌಂಡರಿ, ಸಿಕ್ಸರ್ ನೆರವಿನಿಂದ 42 ರನ್ ಬಾರಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಅಂತಿಮವಾಗಿ ಭಾರತ 18.5 ಓವರ್‌ಗಳಲ್ಲಿ 111 ರನ್ ಗಳಿಸಿ ಭಾರೀ ಸೋಲು ಕಂಡಿತು. ಟೀಮ್ ಇಂಡಿಯಾ ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ 76 ರನ್‌ಗಳಿಂದ ಸೋಲು ಕಂಡಿದ್ದು ಸೂಪರ್ 8 ಹಂತದ ಮುಂದಿನ ಎಲ್ಲ ಪಂದ್ಯಗಳನ್ನೂ ಉತ್ತಮ ರನ್ ರೇಟ್‌ನಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ದಕ್ಷಿಣ ಆಫ್ರಿಕಾ ತಂಡದ ವೇಗದ ಬೌಲರ್ ಮಾರ್ಕೊ ಜಾನ್ಸನ್ 4 ವಿಕೆಟ್ ಪಡೆದರೆ, ಸ್ಪಿನ್ ಬೌಲರ್ ಕೇಶವ್ ಮಹಾರಾಜ್ 3, ಕಾರ್ಬಿನ್ ಬೋಷ್ 2 ವಿಕೆಟ್ ಕಬಳಿಸಿದರು.
ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾದ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. 20 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಡೇವಿಡ್ ಮಿಲ್ಲರ್ ಹಾಗೂ ಡೆವಲ್ಡ್ ಬ್ರೇವಿಸ್ ಜೋಡಿ ಆಧಾರವಾಯಿತು.ಈ ಜೋಡಿ 97 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಬ್ರೇವಿಸ್ 45 ರನ್‌ಗಳಿಗೆ ಆಟ ಮುಗಿಸಿದರೆ, ಡೇವಿಡ್ ಮಿಲ್ಲರ್ 7 ಬೌಂಡರಿ, 3 ಸಿಕ್ಸರ್ ಸಹಾಯದಿಂದ 63 ರನ್ ಬಾರಿಸಿದರು. ಮಧ್ಯಮ ಕ್ರಮಾಂಕದಲ್ಲಿ ಟ್ರಿಸ್ಟನ್ ಸ್ಟಬ್ಸ್ ಅಜೇಯ 44 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್ ಕಲೆ ಹಾಕಿತು.