Team India: ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಶಾಶ್ವತವಾಗಿ ಉಳಿಯವ ವರ್ಷ
ಟೀಮ್ ಇಂಡಿಯಾ ಅಭಿಮಾನಿಗಳು ಪ್ರಸಕ್ತ ವರ್ಷ ಎಂದು ಮರೆಯಲಾರದ ವರ್ಷ. ಏಕೆಂದರೆ ಟೀಮ್ ಇಂಡಿಯಾ ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅಂತಹ ಅಪರೂಪದ ಸಾಧನೆ ಮಾಡಿದೆ. ಸುಮಾರು 13 ವರ್ಷಗಳಿಂದ ಐಸಿಸಿ ವಿಶ್ವಕಪ್ ಬರಕ್ಕೆ ಫುಲ್ ಸ್ಟಾಪ್ ಬಿದ್ದಿದೆ. ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ಅಭಿಮಾನಿಗಳ ಬಹು ವರ್ಷದ ಆಸೆಗೆ ಫಲ ಸಿಕ್ಕಿದೆ.
ಭಾರತದಲ್ಲಿಯೇ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಫೈನಲ್ ಹಂತದವರೆಗೂ ಭರ್ಜರಿ ಪ್ರದರ್ಶನ ನೀಡಿ ಗೆಲುವು ದಾಖಲಿಸಿದ್ದ ಭಾರತ, ಟೂರ್ನಿಯಲ್ಲಿ ಅಜೇಯ ಓಟವನ್ನು ಮುಂದುವರೆಸಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಮುಖಭಂಗ ಅನುಭವಿಸಿತು. ಇಷ್ಟೇ ಅಲ್ಲ ಕಳೆದ ವರ್ಷ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ನಲ್ಲೂ ಭಾರತ, ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಹೀಗಾಗಿ ಐಸಿಸಿ ಟ್ರೋಫಿ ಭಾರತಕ್ಕೆ ಮರೀಚಿಕೆ ಆಗುತ್ತಿತ್ತು. ಆದರೆ ಈ ಬಾರಿ ಮಾತ್ರ ತಂಡ ಸಂಘಟಿತ ಆಟದ ಪ್ರದರ್ಶನ ನೀಡಿದೆ.

ಎರಡನೇ ಬಾರಿ ಟಿ20 ಚಾಂಪಿಯನ್
ಟೀಮ್ ಇಂಡಿಯಾ 2007ರಲ್ಲಿ ನಡೆದಿದ್ದ ಚೊಚ್ಚಲ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಬಳಿಕ, ಮತ್ತೆ ಈ ಪಟ್ಟಕ್ಕೇ ಏರಿರಲೇ ಇಲ್ಲ. ಆದರೆ ಈ ಬಾರಿ ಬಾರ್ಬಡೋಸ್‌ನಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಟೂರ್ನಿಯುದ್ದಕ್ಕೂ ಸ್ಥಿರ ಪ್ರದರ್ಶನ
ಟೀಮ್ ಇಂಡಿಯಾ ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನವನ್ನೇ ನೀಡಿತ್ತು. ಲೀಗ್ ಹಂತದಲ್ಲಿ ಅಮೋಘ ಆಟವನ್ನು ಆಡಿದ ಭಾರತ, ಆಡಿದ 4 ಪಂದ್ಯಗಳಲ್ಲಿ 3 ಜಯ ದಾಖಲಿಸಿ ಮುಂದಿನ ಹಂತಕ್ಕೆ ಪ್ರವೇಶಿಸಿತ್ತು. ಸೂಪರ್ 8 ಹಂತದ ಪಂದ್ಯದಲ್ಲೂ ಟೀಮ್ ಆಡಿದ 3 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಹಂತ ಕಂಡಿತ್ತು. ಉಪಾಂತ್ಯ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ವಿರುದ್ಧ ಕಾದಾಟ ನಡೆಸಿತು. ಈ ವೇಳೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 171 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಸುಲಭವಾಗಿ ಪೈನಲ್‌ಗೆ ಪ್ರವೇಶ ಪಡೆಯಿತು.
ಫೈನಲ್‌ನಲ್ಲಿ ಅಮೋಘ ಆಟ
ಟೂರ್ನಿಯುದ್ದಕ್ಕೂ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮನಮೋಹಕ ಬ್ಯಾಟಿಂಗ್ ನಡೆಸಿ ಅರ್ಧಶತಕ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ 7 ವಿಕೆಟ್ ನಷ್ಟಕ್ಕೆ 176 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 169 ರನ್ ಸೇರಿಸಿ ಜಯ ಸಾಧಿಸಿತು. ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನವನ್ನು ನೀಡಿದ ಟೀಮ್ ಇಂಡಿಯಾ ಕೊನೆಯ ಓವರ್ ವರೆಗೂ ಸಾಗಿದ ಪಂದ್ಯವನ್ನು ತನ್ನತ್ತ ವಾಲಿಸಿಕೊಂಡಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications