Team India: ಟೆಸ್ಟ್‌ನಲ್ಲಿ ಪಾಕ್‌ಗಿಂತ ಕಳಪೆ ಸಾಧನೆ ನೀಡಿರುವ ಟೀಮ್ ಇಂಡಿಯಾ
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ ಫೈನಲ್‌ಗೆ ಎರಡು ಬಾರಿ ಪ್ರವೇಶ ಪಡೆದು, ಒಮ್ಮೆ ನ್ಯೂಜಿಲೆಂಡ್ ವಿರುದ್ಧ ಮತ್ತೊಮ್ಮೆ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿದ್ದ ಭಾರತ, ಈ ಬಾರಿ ಫೈನಲ್‌ಗೆ ಪ್ರವೇಶಿಸುವ ಕನಸು ದೂರ ಸರಿದಂತೆ ಕಾಣುತ್ತಿದೆ. ಈ ವೇಳೆ ಟೀಮ್ ಇಂಡಿಯಾ ಪ್ರಸಕ್ತ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನವನ್ನು ನೀಡುವಲ್ಲಿ ಸಹ ವಿಫಲವಾಗಿದೆ. ದೇಶ ಹಾಗೂ ವಿದೇಶದಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನದ ನೀಡಿದ್ದು ಟೀಕೆಗೆ ಗುರಿಯಾಗಿದೆ. ಮೆಲ್ಬೋರ್ನ್‌ನಲ್ಲಿ ಟೀಮ್ ಇಂಡಿಯಾದ ಆಟಗಾರರು ಆಡಿದ ಧಾಟಿಯ ಬಳಿಕವಂತೂ ಟೀಕೆಗಳು ವ್ಯಾಪಕವಾಗಿದೆ.
ಭಾರತ, ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಪ್ರದರ್ಶನ ನೀಡಿ ಕ್ಲೀನ್ ಸ್ವೀಪ್ ಸೋಲು ಕಂಡಿತ್ತು. ಇದಾದ ಬಳಿಕ ಆಸ್ಟ್ರೇಲಿಯಾ ಆಟಗಾರರ ಮನೋಬಲ ಹೆಚ್ಚಾಗಿತ್ತು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪುಟದೇಳುವ ಮೂಲಕ ಭರ್ಜರಿ ಕಂ ಬ್ಯಾಕ್ ಮಾಡುವ ಸೂಚನೆ ನೀಡಿತು. ಆದರೆ ಆಡಿಲೇಡ್‌ನಲ್ಲಿ ನಡೆದ ಡೇ ಆಂಡ್ ನೈಟ್ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡು ನಿರಾಸೆ ಅನುಭವಿಸಿತು. ಅಲ್ಲದೆ ಬ್ರಿಸ್ಬೇನ್‌ನಲ್ಲಿ ಡ್ರಾ ಸಾಧಿಸಿ, ತಮ್ಮಲ್ಲಿ ಇನ್ನು ಕ್ಷಮತೆ ಇರುವುದಾಗಿ ಸಾರಿ ಹೇಳಿತ್ತು.

ಸರಣಿಯಲ್ಲಿ ಹಿನ್ನಡೆ
ಮೆಲ್ಬೋರ್ನ್ ಅಂಗಳದಲ್ಲಿ ಟೀಮ್ ಇಂಡಿಯಾದ ಬ್ಯಾಟರ್‌ಗಳು ನೀಡಿರುವ ಪ್ರದರ್ಶನ ನಿಜಕ್ಕೂ ಅಭಿಮಾನಿಗಳ ಮುಖದಲ್ಲಿ ಚಿಂತೆಯ ಗೆರೆಗಳು ಏಳುವಂತೆ ಮಾಡಿದೆ. ಟೀಮ್ ಇಂಡಿಯಾ ಸದ್ಯ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ 1-2ರಿಂದ ಹಿನ್ನಡೆ ಅನುಭವಿಸುತ್ತಿದೆ. ಸಿಡ್ನಿಯಲ್ಲಿ ನಡೆಯುವ ಐದನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸರಣಿಯಲ್ಲಿ ಸೋಲಿನ ಆಘಾತವನ್ನು ತಪ್ಪಿಸಿಕೊಳ್ಳಲು ಮೆಗಾ ಪ್ಲ್ಯಾನ್ ಮಾಡಿಕೊಳ್ಳಬೇಕಿದೆ. ಇಲ್ಲದೇ ಇದ್ದರೆ ಸೋಲಿನ ನೋವು ತೀವ್ರವಾಗುತ್ತದೆ.
ಪ್ರಸಕ್ತ ವರ್ಷ ಟೀಮ್ ಇಂಡಿಯಾ ಟಿ20 ವಿಶ್ವ ಚಾಂಪಿಯನ್ ಎಂಬ ಹಣೆ ಪಟ್ಟಿ ಬಿಟ್ಟರೆ ಉಳಿದೆಲ್ಲ ಸರಣಿಗಳಲ್ಲಿ ಹೀನಾಯ ಪ್ರದರ್ಶನ ನೀಡಿ ಸೋಲು ಕಂಡಿದೆ. 2024 ರಲ್ಲಿ ಟೀಂ ಇಂಡಿಯಾ ಒಂದೇ ಒಂದು ಏಕದಿನ ಪಂದ್ಯವನ್ನು ಗೆದ್ದಿಲ್ಲ. ಭಾರತ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 45 ವರ್ಷಗಳ ನಂತರ ಹೀಗೆ ಆಗಿದ್ದು ಇದೆ ಮೊದಲು.

ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ತಂಡ ಯಾವುದು?
2024ರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋಲು ಕಂಡ ಪಟ್ಟಿಯಲ್ಲಿ ಇಂಗ್ಲೆಂಡ್‌ಗೆ ಮೊದಲ ಸ್ಥಾನ. ಇಂಗ್ಲೆಂಡ್ ಈ ವರ್ಷ 8 ಸೋಲು ಕಂಡಿದೆ. ಇನ್ನು ಬಾಂಗ್ಲಾದೇಶ ತಂಡ 7, ಭಾರತ 6 ಸೋಲು ಕಂಡಿವೆ. ಈ ಮೂಲಕ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿದೆ. ಇನ್ನು ನ್ಯೂಜಿಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ತಲಾ ಆರು ಪಂದ್ಯಗಳು ಸೋಲು ಕಂಡಿವೆ. ಪಾಕಿಸ್ತಾನ 5, ಶ್ರೀಲಂಕಾ 4, ದಕ್ಷಿಣ ಆಫ್ರಿಕಾ 3 ಸೋಲುಗಳನ್ನು ಕಂಡು ಹಿಡಿದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications