Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಶ್ರೇಯಸ್ ಅಯ್ಯರ್ ಪೂರ್ತಿ ಫಿಟ್ ಇಲ್ವಾ? ತಂಡದ ಚಿಂತೆ ಹೆಚ್ಚಿಸಿದ ಗಾಯದ ಸಮಸ್ಯೆ

ಏಷ್ಯಾ ಕಪ್ 2023 ರಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿರುವ ಶ್ರೇಯಸ್ ಅಯ್ಯರ್ ತಮ್ಮ ಬ್ಯಾಟಿಂಗ್‌ನಿಂದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಅಯ್ಯರ್ ಪಾಕಿಸ್ತಾನ ವಿರುದ್ಧ ಕೇವಲ 14 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ದೀರ್ಘ ಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದ ಅಯ್ಯರ್ ಅವರ ಫಿಟ್ನೆಸ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ಸಂಪೂರ್ಣ ಫಿಟ್ ಆಗದೆ ಟೀಂ ಇಂಡಿಯಾಗೆ ವಾಪಸಾಗಿದ್ದಾರಾ ಎಂಬ ಪ್ರಶ್ನೆಗಳು ಎದ್ದಿವೆ. ನಿಜಕ್ಕೂ ಈ ಪ್ರಶ್ನೆ ಭಾರತ ತಂಡದ ಆತಂಕ ಹೆಚ್ಚಿಸುವಂತೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಶ್ರೇಯಸ್ ಗಾಯಕ್ಕೆ ತುತ್ತಾದಾಗ ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್‌ಮನ್‌ಗಳಿಗೆ ಅವಕಾಶ ನೀಡಲಾಗಿತ್ತು. ಆದರೂ ಅವರು ಪರಿಣಾಮಕಾರಿ ಎಂದು ಸಾಬೀತುಪಡಿಸಲು ವಿಫಲರಾಗಿದ್ದರು. ಈ ಸನ್ನಿವೇಶದಲ್ಲಿ ಅಯ್ಯರ್ ನಿರಾಶಾದಾಯಕ ಪ್ರದರ್ಶನ ನಾಯಕ ರೋಹಿತ್ ಶರ್ಮಾಗೆ ಆತಂಕ ತಂದಿದೆ.

 Shreyas Iyer

ಶ್ರೇಯಸ್ ಅಯ್ಯರ್ ಮಾತ್ರವಲ್ಲದೆ, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಕೂಡ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ಏಷ್ಯಾಕಪ್ ನ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಅಂಗಳಕ್ಕೆ ಪ್ರವೇಶಿಸಿದರು.ಉತ್ತಮವಾಗಿ ಬ್ಯಾಟಿಂಗ್ ಮಾಡಿದ ಇಶಾನ್ ಕಿಶನ್ ಟೀಮ್ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಲು ಕಾರಣವಾದರು. ಭರ್ಜರಿ ಬ್ಯಾಟ್ ಮಾಡಿದ ಇಶಾನ್ ಸತತವಾಗಿ ಏಕದಿನ ಪಂದ್ಯಗಳಲ್ಲಿ 4ನೇ ಅರ್ಧಶತಕ ಬಾರಿಸಿ ಮಿಂಚಿದರು.

ನಾಲ್ಕನೇ ಕ್ರಮಾಂಕ ಭಾರಿ ಮುಖ್ಯ

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟಿಂಗ್ ಬೇಗನೇ ಪೆವಿಲಿಯನ್ ಸೇರಿದ್ದಕ್ಕೆ ಅಯ್ಯರ್ ಅವರು ತಾಳ್ಮೆಯಿಂದ ಬ್ಯಾಟ್ ಮಾಡುವುದು ಅನಿವಾರ್ಯವಾಗಿತ್ತು. ಆದರೆ ಶ್ರೇಯಸ್ ಅಯ್ಯರ್ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡದೇ ಔಟ್ ಆದರು. ಶಾರ್ಟ್ ಎಸೆತವನ್ನು ತಪ್ಪಾಗಿ ಗ್ರಹಿಸಿದ ಶ್ರೇಯಸ್ ತಮ್ಮ ವಿಕೆಟ್ ಕೈ ಚೆಲ್ಲಿದರು. ಸ್ಟಾರ್ ಆಟಗಾರರ ವೈಫಲ್ಯದ ಮಧ್ಯ ತಂಡವನ್ನು ಮೇಲೆತ್ತುವ ಜವಾಬ್ದಾರಿ ಟೀಮ್ ಇಂಡಿಯಾದ ಭರವಸೆಯ ಆಟಗಾರ ಶ್ರೇಯಸ್ ಅವರ ಮೇಲಿತ್ತು. ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಶ್ರೇಯಸ್ ವಿಫಲರಾದರು.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 11 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 4 ರನ್ ಗಳಿಸಿ, ಶುಭಮನ್ ಗಿಲ್ ಕೇವಲ 10 ರನ್ ಗಳಿಸಿ ಔಟಾದರು. ಆದರೆ, ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಜವಾಬ್ದಾರಿ ವಹಿಸಿ ಟೀಂ ಇಂಡಿಯಾ 266 ರನ್ ಗಳಿಸಲು ನೆರವಾದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಬ್ಲಾಕ್‌ಬಸ್ಟರ್ ಪಂದ್ಯ ಮಳೆಯಿಂದಾಗಿ ಕೊಚ್ಚಿಹೋಯಿತು. ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್ ಆಟ ನಡೆಯಿತು. ಮಳೆಯಿಂದಾಗಿ ಮೊದಲ ಇನಿಂಗ್ಸ್‌ನಲ್ಲಿ ಎರಡು ಬಾರಿ ಪಂದ್ಯ ಸ್ಥಗಿತಗೊಂಡಿತ್ತು. ಮೂರನೇ ಬಾರಿ ಮಳೆ ಸುರಿದಾಗ ಮತ್ತೆ ಆಟ ಆರಂಭಿಸಲಾಗಲಿಲ್ಲ.

ನೇಪಾಳದ ವಿರುದ್ಧದ ಪಂದ್ಯ ಶ್ರೇಯಸ್ ಅಯ್ಯರ್ ಅವರಿಗೆ ಮುಖ್ಯವಾಗಿದೆ. ಈ ಪಂದ್ಯದಲ್ಲೂ ಅಯ್ಯರ್ ರನ್ ಗಳಿಸಲು ವಿಫಲವಾದರೆ ಕೆಎಲ್ ರಾಹುಲ್ ಅವರ ಬದಲಾಗಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

Story first published: Sunday, September 3, 2023, 19:42 [IST]
Other articles published on Sep 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+