Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rinku Singh Father passes away: ರಿಂಕು ಸಿಂಗ್‌ ತಂದೆ ನಿಧನ

ಟೀಮ್ ಇಂಡಿಯಾದ ಸ್ಟಾರ್‌ ಕ್ರಿಕೆಟ್‌ ಆಟಗಾರ ರಿಂಕು ಸಿಂಗ್‌ ತಂದೆ ನಿಧನರಾಗಿದ್ದಾರೆ. ಇವರು ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರೆಳೆದಿದ್ದಾರೆ.

ರಿಂಕು ಸಿಂಗ್‌ ಅವರ ತಂದೆ ಖಚಂದ್ರ ಸಿಂಗ್ 4 ನೇ ಹಂತದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇವರ ಆರೋಗ್ಯದಲ್ಲಿ ಏರು ಪೇರು ಆಗಿದ್ದರಿಂದ ಇತ್ತೀಚಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಹಮದಾಬಾದ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಬಳಿಕ ರಿಂಕು ಸಿಂಗ್‌ ಮನೆಗೆ ತೆರಳಿದ್ದರು. ಅಲ್ಲದೆ ಜಿಂಬಾಬ್ವೆ ವಿರುದ್ಧ ಪಂದ್ಯಕ್ಕೂ ಮುನ್ನ ಕ್ಯಾಂಪ್‌ ಸೇರಿದ್ದರು.

Team India Finisher

ರಿಂಕು ಸಿಂಗ್ ಅವರ ತಂದೆ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಂಬಲದಲ್ಲಿದ್ದರು. ಇವರು ಬಹುಕಾಲದಿಂದ ಮೂತ್ರಪಿಂಡ ಬದಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇತ್ತೀಚಿಗೆ ಅವರ ಆರೋಗ್ಯದಲ್ಲಿ ತೀವ್ರ ಏರು ಪೇರು ಆಗಿದ್ದರಿಂದ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನುರಿತ ವೈದ್ಯರ ತಂಡ ಇವರ ಆರೋಗ್ಯದ ಮೇಲ್ವಿಚಾರಣೆಯನ್ನು ಮಾಡುತ್ತಿತ್ತು.

ರಿಂಕು ಸಿಂಗ್‌ ಅವರ ತಂದೆಯನ್ನು ಭೇಟಿಯಾಗಿ ಗುರುವಾರ ಚೆನ್ನೈನಲ್ಲಿ ನಡೆಯುತ್ತಿದ್ದ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕಾಗಿ ತಂಡವನ್ನು ಸೇರಿದರು. ಅಲ್ಲದೆ ಅಭ್ಯಾಸದಲ್ಲೂ ಅವರು ಭಾಗಿಯಾಗಿದ್ದರು. ಆದರೆ ಇವರು ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಲಿಲ್ಲ. ಇವರ ಬದಲಿಗೆ ತಂಡದಲ್ಲಿ ವಿಕೆಟ್‌ ಕೀಪರ್ ಬ್ಯಾಟರ್‌ ಸಂಜು ಸ್ಯಾಮ್ಸನ್‌ ಅವರಿಗೆ ಅವಕಾಶ ನೀಡಲಾಗಿತ್ತು.

ರಿಂಕು ಸಿಂಗ್‌ ಅವರಿಗೆ ಭಾರತದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಲಭಿಸಿತು. ಇವರು ಲೀಗ್‌ ಹಂತದ ಎಲ್ಲ ಪಂದ್ಯ ಹಾಗೂ ಅಹಮದಾಬಾದ್‌ನಲ್ಲಿ ನಡೆದ ಸೂಪರ್ 8 ಹಂತದ ಪಂದ್ಯದಲ್ಲಿ ಆಡಿದ್ದರು. ಆದರೆ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಇವರ ಕಳಪೆ ಫಾರ್ಮ್‌ ಇವರನ್ನು ತಂಡದಿಂದ ಕೈ ಬಿಡುವಂತೆ ಮಾಡಿತು. ಇವರು ಭಾರತದ ಪರ ಫಿನಿಷರ್ ಪಾತ್ರದಲ್ಲಿ ಆಡುತ್ತಿದ್ದರು.

Story first published: Friday, February 27, 2026, 9:03 [IST]
Other articles published on Feb 27, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+