For Quick Alerts
ALLOW NOTIFICATIONS  
For Daily Alerts
 

Champions Trophy 2025: ಮೂರನೇ ಟ್ರೋಫಿಯ ಕನಸಿನಲ್ಲಿ ದುಬೈಗೆ ಪ್ರಯಾಣ ಬೆಳೆಸಿದ ರೋಹಿತ್ ಪಡೆ

ಇನ್ನೇನು ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಈ ಮೆಗಾ ಟೂರ್ನಿಯಲ್ಲಿ ಭಾಗವಹಿಸಲು ಎಂಟು ತಂಡಗಳು ಪಾಕ್‌ ತಂಡದತ್ತ ಮುಖ ಮಾಡಿವೆ. ಆದರೆ ಭಾರತ ಈ ಟೂರ್ನಿಗೆ ಪಾಕ್‌ ಪ್ರವಾಸ ಬೆಳೆಸದ ಹಿನ್ನೆಲೆ ತನ್ನ ಪಂದ್ಯಗಳನ್ನು ಆಡಲು ದುಬೈಗೆ ಪ್ರಯಾಣ ಬೆಳೆಸಿದೆ. ಟೀಮ್ ಇಂಡಿಯಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾಗವಹಿಸಲು ದುಬೈಗೆ ಹಾರಿದೆ.

ಟೀಮ್ ಇಂಡಿಯಾದ ನಾಯಕ ರೋಹಿತ್‌ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ದುಬೈಗೆ ಪ್ರಯಾಣ ಬೆಳೆಸಿದೆ. ಈ ಟೂರ್ನಿಯಲ್ಲಿ ಈಗಾಗಲೇ ಭಾರತ ಎರಡು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಟೂರ್ನಿಯಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಕನಸನ್ನು ಟೀಮ್ ಇಂಡಿಯಾದ್ದಾಗಿದೆ. ಟೀಮ್ ಇಂಡಿಯಾ ಈ ಟೂರ್ನಿಗೆ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ದುಬೈನಲ್ಲಿರುವ ಪಿಚ್‌ಗೆ ಅನುಗುಣವಾಗಿ ತಂಡವನ್ನು ರಚಿಸಲಾಗಿದೆ. ಚಾಂಪಿಯನ್ಸ್‌ ಟ್ರೋಫಿ 19 ರಿಂದ ಆರಂಭವಾಗಲಿದೆ. ಆದರೆ ಭಾರತ ಈ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಫೆ.20 ರಿಂದ ಆರಂಭಿಸಲಿದೆ.

Team India Flies to Dubai for Champions Trophy 2025 Set to Face Bangladesh in Opener

ದುಬೈಗೆ ಹಾರಿದ ಟೀಮ್ ಇಂಡಿಯಾ

ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಕಾಣಿಸಿಕೊಂಡರು. ವಿಮಾನ ನಿಲ್ದಾಣದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ, ವಿರಾಟ್‌ ಕೊಹ್ಲಿ, ರವೀಂದ್ರ ಜಡೇಜಾ, ವಾಶಿಂಗ್ಟನ್‌ ಸುಂದರ್, ರಿಷಭ್ ಪಂತ್‌, ಕೆಎಲ್ ರಾಹುಲ್‌, ಕುಲ್‌ ದೀಪ್ ಯಾದವ್, ವರುಣ್‌ ಚಕ್ರವರ್ತಿ, ಶ್ರೇಯಸ್‌ ಅಯ್ಯರ್, ಅಕ್ಷರ್ ಪಟೇಲ್‌, ಹರ್ಷಿತ್ ರಾಣಾ, ಅರ್ಷದೀಪ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ ಅವರನ್ನು ಕಂಡು ಅಭಿಮಾನಿಗಳು ಫುಲ್ ಖುಷ್ ಆದರು.

ಬಾಂಗ್ಲಾದೇಶ ವಿರುದ್ಧ ಪಂದ್ಯ ಮೂಲಕ ಟೀಮ್ ಇಂಡಿಯಾದ ಚಾಂಪಿಯನ್ಸ್‌ ಟ್ರೋಫಿ ಅಭಿಯಾನ ಆರಂಭವಾಗುತ್ತದೆ. ಈ ಟೂರ್ನಿಗಾಗಿ ಟೀಮ್ ಇಂಡಿಯಾ ಐದು ಸ್ಪಿನ್ ಬೌಲರ್‌ಗಳಿಗೆ ತಂಡದಲ್ಲಿ ಸ್ಥಾನ ನೀಡಿದೆ. ಈ ಮೊದಲು ತಂಡದಲ್ಲಿ ಜಸ್ಪ್ರಿತ್ ಬುಮ್ರಾ ಹಾಗೂ ಯಶಸ್ವಿ ಜೈಸ್ವಾಲ್‌ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ತಂಡದಲ್ಲಿ ಬದಲಾವಣೆಗೆ ಫೆಬ್ರವರಿ 11 ರ ವರೆಗೆ ಅವಕಾಶ ಇತ್ತು. ಇದೇ ಸಮಯದಲ್ಲಿ ಟೀಮ್ ಇಂಡಿಯಾ ಮೂರು ಎರಡು ಬದಲಾವಣೆಗಳನ್ನು ಮಾಡಿತು.

Team India Flies to Dubai for Champions Trophy 2025 Set to Face Bangladesh in Opener

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸ್ಟಾರ್ ಪೇಸರ್ ಜಸ್ಪ್ರಿತ್ ಬುಮ್ರಾ ಅವರ ಬದಲಿಗೆ ಹರ್ಷಿತ್ ರಾಣಾ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್‌ ನೀಡಲಾಯಿತು. ಇನ್ನು ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ 14 ವಿಕೆಟ್‌ ಕಬಳಿಸಿದ್ದ ಸ್ಪಿನ್ ಬೌಲರ್‌ ವರುಣ್‌ ಚಕ್ರವರ್ತಿ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಇವರು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಯಶಸ್ವಿ ಜೈಸ್ವಾಲ್‌ ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದರು. ಈ ಮೂಲಕ ಚಾಂಪಿಯನ್ಸ್‌ ಟ್ರೋಫಿಗೆ ಐದು ಸ್ಪಿನ್ ಬೌಲರ್‌ಗಳನ್ನು ಒಳಗೊಂಡ ತಂಡ ದುಬೈಗೆ ಪ್ರಯಾಣ ಬೆಳೆಸಲಿದೆ.

ಫೆ.20 ರಂದು ಬಾಂಗ್ಲಾದೇಶ ವಿರುದ್ಧ ಪಂದ್ಯದ ಬಳಿಕ, ಭಾರತ ಫೆ. 23 ರಂದು ಪಾಕಿಸ್ತಾನ ವಿರುದ್ಧ, ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ಲೀಗ್‌ ಹಂತದಲ್ಲಿ ಕಾದಾಟ ನಡೆಸಲಿದೆ.

Story first published: Saturday, February 15, 2025, 19:05 [IST]
Other articles published on Feb 15, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+