ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಜೋಡಿಯನ್ನು ಹೊಗಳಿದ ಟೀಮ್ ಇಂಡಿಯಾ ಮಾಜಿ ನಾಯಕ!
ಜೂನ್ 1 ಶನಿವಾರ, 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗೆ ಈ ಬಾರಿಯ ಟೂರ್ನಿಯನ್ನು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿವೆ. ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ.
ಭಾರತ ಕ್ರಿಕೆಟ್ ತಂಡವು ಈ ಬಾರಿ ವಿಶ್ವಕಪ್ 2024 ಟ್ರೋಫಿಯನ್ನು ಗೆಲ್ಲಲು ಅರ್ಹವಾಗಿದೆ ಎಂದು ಪರಿಗಣಿಸಲಾಗಿದೆ. ಆದರೆ ಟೀಮ್ ಇಂಡಿಯಾ ಮುಂದೆ ಬೆಟ್ಟದಷ್ಟು ಸವಾಲುಗಳಿವೆ.

ಜೂನ್ 5 ರಂದು ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಇದಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಅಮೆರಿಕಾ ತಲುಪಿದ್ದು, ಕಠಿಣ ಅಭ್ಯಾಸದಲ್ಲಿ ತೊಡಗಿದೆ.
ಇದರ ಬೆನ್ನಲ್ಲೆ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಟಿ20 ವಿಶ್ವಕಪ್‌ಗೂ ಮುನ್ನ ಹಾಲಿ ನಾಯಕ ರೋಹಿತ್ ಶರ್ಮಾ ಮತ್ತು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ಹೊಗಲಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಗಂಗೂಲಿ, ರೋಹಿತ್ ಮತ್ತು ಕೊಹ್ಲಿ ಇಬ್ಬರ ಮೇಲೆ ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರೋಹಿತ್ ಫಾರ್ಮ್ ಬಗ್ಗೆ ಚಿಂತೆ ಇಲ್ಲ
ಸೌರವ್ ಗಂಗೂಲಿ ರೋಹಿತ್ ಶರ್ಮಾ ಬಗ್ಗೆ ಮಾತನಾಡುತ್ತಾ, 'ರೋಹಿತ್ ಶರ್ಮಾ ಶ್ರೇಷ್ಠ ಆಟಗಾರ. 2023ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಮಾಡಿದ್ದನ್ನು ಈ ಟಿ20 ವಿಶ್ವಕಪ್‌ನಲ್ಲಿಯೂ ಮಾಡಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ತಂಡಕ್ಕೆ ರೋಹಿತ್ ಶರ್ಮಾ ಉತ್ತಮ ಆರಂಭ ನೀಡುತ್ತಾರೆ.
ಹೀಗಾಗಿ ಅವರ ಫಾರ್ಮ್ ಬಗ್ಗೆ ನನಗೆ ಚಿಂತೆಯಿಲ್ಲ. ವಿಶ್ವ ಕ್ರಿಕೆಟ್‌ನಲ್ಲಿ ರೋಹಿತ್ ಸಾಕಷ್ಟು ರನ್ ಗಳಿಸಿದ್ದಾರೆ. ಅವರು ಖಂಡಿತವಾಗಿಯೂ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕಾಗಿ ಉತ್ತಮ ಪ್ರದರ್ಶನ ನೀಡುತ್ತಾರೆ.

ವಿರಾಟ್ ಕೊಹ್ಲಿ ಶ್ರೇಷ್ಠ ಆಟಗಾರ
ಗಂಗೂಲಿಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡುತ್ತಾ, 'ನಾನು ಈ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಇನ್ನಿಂಗ್ಸ್ ಆರಂಭಿಸಲು ಬಯಸುತ್ತೇನೆ. ವಿರಾಟ್ ಅವರು ಐಪಿಎಲ್ 2024ರಲ್ಲಿ ಆರ್‌ಸಿಬಿಗೆ ಬ್ಯಾಟಿಂಗ್ ಮಾಡಿದಂತೆಯೇ ಟಿ20 ವಿಶ್ವಕಪ್‌ನಲ್ಲಿಯೂ ಭಾರತ ತಂಡದ ಪರ ಬ್ಯಾಟಿಂಗ್ ಮಾಡಬೇಕೆಕು
ಕೊಹ್ಲಿ ಯಾವುದೆ ಯೋಚನೆ ಮಾಡದೆ ಸ್ವತಂತ್ರವಾಗಿ ಬ್ಯಾಟಿಂಗ್ ಮಾಡಬೇಕು. ಅವರು ಸ್ವತಂತ್ರವಾಗಿ ಬ್ಯಾಟಿಂಗ್ ಮಾಡಿದರೆ ತಂಡಕ್ಕೆ ಒಳ್ಳೆಯದಾಗುತ್ತದೆ. ಅವರೊಬ್ಬ ಕ್ರಿಕೆಟ್‌ನಲ್ಲಿ ಶ್ರೇಷ್ಠ ಆಟಗಾರ ಎಂದು ಕೊಹ್ಲಿ ಕುರಿತು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಪ್ರದರ್ಶನ
ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು 1141 ರನ್ ಗಳಿಸಿದ ದಾಖಲೆ ಹೊಂದಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಕೂಡ 963 ರನ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಜೂನ್ 5 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 37 ರನ್ ಗಳಿಸುವ ಮೂಲಕ ಟಿ20 ವಿಶ್ವಕಪ್‌ನಲ್ಲಿ ಸಾವಿರ ರನ್ ಪೂರೈಸಲಿದ್ದಾರೆ. ಅಲ್ಲದೆ ದಿಗ್ಗಜ ಬ್ಯಾಟರ್‌ಗಳ ದಾಖಲೆಯನ್ನು ಮುರಿಯುವ ಅವಕಾಶವನ್ನು ರೋಹಿತ್ ಶರ್ಮಾ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications