ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಜನ ಆತನ ನಿಜ ಹೆಸರು ಮರೆತರೂ ಅಡ್ಡ ಹೆಸರು ಮರೆಯಲ್ಲ ಎಂದು ಸೆಹ್ವಾಗ್ ಹೇಳಿದ್ದು ಯಾರ ಬಗ್ಗೆ?

Team India Former cricketer Virender Sehwag Praises RCB batsman AB de Villiers

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಓರ್ವ ವಿದೇಶಿ ಆಟಗಾರನ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ಆತನ ನೈಜ ಹೆಸರನ್ನು ಜನ ಮರೆತರೂ ಆತನಿಗೆ ಕೊಟ್ಟಿರುವ ಅಡ್ಡ ಹೆಸರನ್ನು ಜನರು ಮರೆಯಲು ಸಾಧ್ಯವೇ ಇಲ್ಲ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಸೆಹ್ವಾಗ್ ಹೀಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದು ಬೇರೆ ಯಾರ ಬಗ್ಗೆಯೂ ಅಲ್ಲ. ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಆರ್‌ಸಿಬಿ ಪ್ರಮುಖ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಕುರಿತು. ಅಭಿಮಾನಿಗಳಿಂದ ಮಿಸ್ಟರ್ 360 ಡಿಗ್ರಿ ಎಂದು ಕರೆಸಿಕೊಳ್ಳುವ ಡಿವಿಲಿಯರ್ಸ್ ಬಗ್ಗೆ ಸೆಹ್ವಾಗ್ ಭಾರೀ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ.

ವಾರ್ನರ್‌ರನ್ನು ನಾಯಕತ್ವದಿಂದ ವಜಾಗೊಳಿಸಿದಾಗ ನಾವ್ಯಾರೂ ತಲೆಕೆಡಿಸಿಕೊಳ್ಳಲಿಲ್ಲ ಎಂದ ಹೈದರಾಬಾದ್ ಆಟಗಾರವಾರ್ನರ್‌ರನ್ನು ನಾಯಕತ್ವದಿಂದ ವಜಾಗೊಳಿಸಿದಾಗ ನಾವ್ಯಾರೂ ತಲೆಕೆಡಿಸಿಕೊಳ್ಳಲಿಲ್ಲ ಎಂದ ಹೈದರಾಬಾದ್ ಆಟಗಾರ

ಇದಕ್ಕಿಂತ ಉತ್ತಮ ಹೆಸರಿಲ್ಲ

ಇದಕ್ಕಿಂತ ಉತ್ತಮ ಹೆಸರಿಲ್ಲ

ಎಬಿ ಡಿವಿಲಿಯರ್ಸ್ ಬಗ್ಗೆ ಸೆಹ್ವಾಗ್ ಮಾತನಾಡಿತ್ತಾ "ಜನ ಆತನ ನಿಜ ಹೆಸರನ್ನು ಮರೆಯಬಹುದು. ಆದರೆ ಮಿಸ್ಟರ್ 360 ಡಿಗ್ರಿ ಎಂದರೆ ಯಾವಾಗಲೂ ನೆನಪಿಟ್ಟುಕೊಳ್ಳುತ್ತಾರೆ. ಆತನಿಗೆ ಬೇರೆ ಹೆಸರನ್ನು ನೀಡಬೇಕು ಎಂದು ನನಗೆ ಅನಿಸುವುದಿಲ್ಲ ಯಾಕೆಂದರೆ ಈ ಹೆಸರಿಗೆ ಅದು ಸನಿಹವೂ ಸುಳಿಯಲಾರದು. 360 ಡಿಗ್ರಿ ಹೆಸರು ಅತ್ಯುತ್ತಮವಾಗಿದೆ" ಎಂದು ಸೆಹ್ವಾಗ್ ಕ್ರಿಕ್‌ಬಜ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಡೆಲ್ಲಿ ವಿರುದ್ಧದ ಪ್ರದರ್ಶನಕ್ಕೆ ಸೆಹ್ವಾಗ್ ಅಚ್ಚರಿ

ಡೆಲ್ಲಿ ವಿರುದ್ಧದ ಪ್ರದರ್ಶನಕ್ಕೆ ಸೆಹ್ವಾಗ್ ಅಚ್ಚರಿ

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್‌ಗೆ ಇಳಿದು 42 ಎಸೆತಗಳಲ್ಲಿ 75 ರನ್‌ ಬಾರಿಸಿದ ಬಗ್ಗೆಯೂ ಸೆಹ್ವಾಗ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಬೇರೆ ಯಾವುದೇ ಆಟಗಾರನಾಗಿದ್ದರೂ ಅಂದು ಎದುರಾಳಿ ಬೌಲರ್‌ಗಳು ಎಸೆಯುತ್ತಿದ್ದ ಶಾರ್ಟ್ ಎಸೆತಗಳಿಗೆ ಶೂನ್ಯಕ್ಕೆ ಔಟಾಗುತ್ತಿದ್ದರು. ಆದರೆ ಎಬಿ ಡಿವಿಲಿಯರ್ಸ್ ಮಾತ್ರವೇ ಚೆಂಡನ್ನು ಕನೆಕ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಎಂದು ಸೆಹ್ವಾಗ್ ಹೇಳಿದ್ದಾರೆ.

ವಿದಾಯದ ನಂತರವೂ ಅಬ್ಬರ

ವಿದಾಯದ ನಂತರವೂ ಅಬ್ಬರ

2018ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯವನ್ನು ಹೇಳಿದ್ದ ಎಬಿ ಡಿವಿಲಿಯರ್ಸ್ ಅದಾದ ನಂತರವೂ ಲೀಗ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ಮುಂದುವರಿಸುತ್ತಿದ್ದಾರೆ. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಬಿ ಡಿವಿಲಿಯರ್ಸ್ ಮರಳಬೇಕು ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದೀಗ ಆ ಕ್ಷಣವೂ ಹತ್ತಿರದಲ್ಲಿರುವಂತೆ ಕಾಣಿಸುತ್ತಿದೆ. ಎಬಿ ಡಿವಲಿಯರ್ಸ್ ಮತ್ತೆ ದಕ್ಷಿಣ ಆಫ್ರಿಕಾ ತಮಡದ ಪರವಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

Story first published: Sunday, May 9, 2021, 17:24 [IST]
Other articles published on May 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X