Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asia Cup T20: ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಅಭ್ಯಾಸ ಆರಂಭಿಸಿದ ನಾಯಕ

ಭಾರತದ ಆಟಗಾರರು ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಈಗ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯದೇ ಇದಿದ್ದರಿಂದ ತಮ್ಮ ಫಿಟ್ನೆಸ್ ಹಾಗೂ ಕುಟುಂಬದ ಜೊತೆ ಸಮಯವನ್ನು ಕಳೆಯಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅಲ್ಲದೆ ಮುಂದಿನ ತಿಂಗಳು ಆರಂಭವಾಗಲಿರುವ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿಯತ್ತಲೂ ಚಿತ್ತ ನೆಟ್ಟಿದ್ದಾರೆ. ಭಾರತ ಈ ಟೂರ್ನಿಗೆ ಅಗಸ್ಟ್‌ ಮೂರನೇ ವಾರದಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಒಬ್ಬ ಫಿಟ್ ಆಗಿರುವ ಬಗ್ಗೆ ಮಾಹಿತಿ ಬಂದಿದೆ.

ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಈಗ ತಮ್ಮ ಫಿಟ್ನೆಸ್‌ ಬಗ್ಗೆ ಸಾಮಾಜಿಕ ತಾಣದಲ್ಲಿ ಬಿಗ್ ಅಪ್‌ಡೇಟ್‌ ನೀಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಇವರು ಒಂದು ವಿಡಿಯೋ ಪೋಸ್ಟ್ ಮಾಡಿದ್ದು, ತಾವು ಅಭ್ಯಾಸ ಆರಂಭಿಸಿದ್ದಾಗಿ ತಿಳಿಸಿದ್ದಾರೆ. ಐಪಿಎಲ್ 2025 ರ ಸೀಸನ್ ಮುಗಿದ ನಂತರ, ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ನಲ್ಲಿ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಸಮಸ್ಯೆ ಅವರನ್ನು ಬಹಳದಿನದಿಂದ ಕಾಡುತ್ತಿತ್ತು. ಹೀಗಾಗಿ ಅವರು ಕಷ್ಟ ಪಟ್ಟಿದ್ದಾರೆ. ಈಗ ಸೂರ್ಯ ತಮ್ಮ ಫಿಟ್ನೆಸ್‌ ಮರಳಿ ಪಡೆಯಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬೆವರು ಹರಿಸುತ್ತಿದ್ದಾರೆ.

Team India Gets Good News Captain Suryakumar Yadav Starts Practice

ಸೂರ್ಯ ಶಸ್ತ್ರಚಿಕಿತ್ಸೆಯ ಬಳಿಕ, ಈಗ ಅವರು ತಮ್ಮ ಫಿಟ್ನೆಸ್‌ನತ್ತ ಗಮನ ಹರಿಸಿದ್ದಾರೆ. ಇವರು ಏಷ್ಯಾ ಕಪ್‌ಗೂ ಮುನ್ನ ಫಿಟ್ ಆಗಿರಲು ಶ್ರಮಿಸುತ್ತಿದ್ದಾರೆ. ಸದ್ಯ ತಮ್ಮ ಖಾತೆಯಲ್ಲಿ ಸೂರ್ಯ ಹಾಕಿಕೊಂಡಿರುವ ವಿಡಿಯೋದಲ್ಲಿ ತಮ್ಮ ವರ್ಕ್ ಔಟ್ ಮಾಡುತ್ತಿರುವ ದೃಶ್ಯ ಕಾಣಬಹುದಾಗಿದೆ. ನಾನು ಮೈದಾನದಲ್ಲಿ ಇಷ್ಟ ಪಡುವ ಕೆಲಸವನ್ನು ಮಾಡಲು ಉತ್ಸುಕನಾಗಿದ್ದೇನೆ ಎಂದು ಸೂರ್ಯ ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಏಷ್ಯಾ ಕಪ್‌ಗೂ ಮುನ್ನ ಸೂರ್ಯಕುಮಾರ್ ಯಾದವ್ ಸಂಪೂರ್ಣವಾಗಿ ಫಿಟ್ ಆಗಿರುವುದು ತಂಡಕ್ಕೆ ಮುಖ್ಯ. ಈ ಟೂರ್ನಿಗಾಗಿ ಟೀಮ್ ಇಂಡಿಯಾ ಸಹ ಭರದ ಸಿದ್ಧತೆಗಳನ್ನು ಆರಂಭಿಸಿದೆ.

ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿಯನ್ನು ಈ ಬಾರಿ ಭಾರತ ಆಯೋಜಿಸುತ್ತಿದೆ. ಆದರೆ ಈ ಪಂದ್ಯಗಳು ಯುಎಇನಲ್ಲಿ ನಡೆಯಲಿವೆ. ಭಾರತ ಸೇರಿದಂತೆ 8 ದೇಶಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಇವುಗಳನ್ನು 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಪ್ರತಿ ತಂಡವೂ ಲೀಗ್‌ ಹಂತದಲ್ಲಿ ತಲಾ ಮೂರು ಪಂದ್ಯಗಳನ್ನು ಆಡಲಿದೆ. ಈ ಹಂತದಲ್ಲಿ ಅಂಕ ಪಟ್ಟಿಯಲ್ಲಿ ಸಗ್ರ ಸ್ಥಾನವನ್ನು ಪಡೆದ ತಂಡಗಳು ಸೂಪರ್ 4 ಹಂತಕ್ಕೆ ಅಹರ್ತೆಯನ್ನು ಪಡೆಯಲಿವೆ. ಈ ಹಂತದಲ್ಲೂ ಪ್ರತಿ ತಂಡ ಮೂರು ಪಂದ್ಯಗಳಲ್ಲಿ ಮುಖಾಮುಖಿ ಆಗಲಿದೆ. ಈ ಹಂತದಲ್ಲಿ ಅಗ್ರ 2 ಸ್ಥಾನವನ್ನು ಪಡೆದ ತಂಡಗಳು ಸೆಪ್ಟಂಬರ್ 29 ರಂದು ನಡೆಯಲಿರುವ ಫೈನಲ್ ಪಂದ್ಯವನ್ನು ಆಡಲಿವೆ. ಭಾರತ ಹಾಗೂ ಪಾಕ್‌ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಸೆ.14 ರಂದು ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

Story first published: Saturday, August 9, 2025, 10:00 [IST]
Other articles published on Aug 9, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+