Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Ban: ಪಾಕ್ ಮಣಿಸಿದ ಭಾರತದ ಮುಂದಿನ ಎದುರಾಳಿ ಬಾಂಗ್ಲಾ: ಪಂದ್ಯದ ಸ್ಥಳ, ಸಮಯ

ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿದ ಭಾರತ ತಂಡಕ್ಕೆ ತನ್ನ ಮುಂದಿನ ಪಂದ್ಯಕ್ಕಾಗಿ ಇಂದು (ಭಾನುವಾರ) ಅಹಮಾದಾಬಾದ್‌ನಿಂದ ಪುಣೆಗೆ ಪ್ರಯಾಣ ಮಾಡಿದೆ.

ಭಾರತದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಟೀಂ ಇಂಡಿಯಾ ಆಟಗಾರರು ವಿಶ್ವಕಪ್‌ನಲ್ಲಿ ತಮ್ಮ ನಿರ್ಣಾಯಕ ಮುಖಾಮುಖಿಯಾಗುವ ಮುನ್ನ ವಿಮಾನ ಹತ್ತಿದ ಮಾಹಿತಿಯನ್ನು ತಿಳಿಸಿದ್ದಾರೆ.

Team India Heads to Pune for Upcoming IND vs BAN World Cup Match

ಈಗಾಗಲೇ ವಿಶ್ವಕಪ್‌ನಲ್ಲಿ ಈವರೆಗೂ ಆಡಿರುವ ಮೂರು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಅಕ್ಟೋಬರ್ 19ರಂದು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಅಜೇಯ ಓಟ ಮುಂದುವರೆಸುವ ವಿಶ್ವಾಸ

ಭಾರತ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡದ ಜೊತೆಗೆ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾವನ್ನು ಸೋಲಿಸಿದೆ. ಪುಣೆಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದರೆ ಭಾರತದ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ.

ರೋಹಿತ್ ಶರ್ಮಾ ಮತ್ತು ತಂಡವು ಪುಣೆಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಸತತ ನಾಲ್ಕನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಭಾರತಕ್ಕೆ ಬೌಲಿಂಗ್ ವಿಭಾಗ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ರೋಹಿತ್ ಶರ್ಮಾ ಅಮೋಘ ಟಚ್‌ನಲ್ಲಿದ್ದಾರೆ. ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರಂತಹವರು ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಮರಳಿದ್ದಾರೆ. ಗಿಲ್ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಕೂಡ ಆಡುವ ಸಾಧ್ಯತೆ ಇದೆ.

ಸೋಲಿನ ಸುಳಿಯಲ್ಲಿ ಬಾಂಗ್ಲಾದೇಶ

ಬಾಂಗ್ಲಾದೇಶ ಮೂರು ಪಂದ್ಯಗಳನ್ನು ಆಡಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಕಂಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಬಾಂಗ್ಲಾದೇಶ ನಂತರ ಅಫ್ಘಾನಿಸ್ತಾನದ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿತ್ತು. ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಮುಂದಿನ ಪಂದ್ಯವನ್ನು ಗೆಲ್ಲಬೇಕಿದೆ. ಏಷ್ಯಾಕಪ್‌ನಲ್ಲಿ ಭಾರತವನ್ನು ಮಣಿಸಿದ್ದ ಬಾಂಗ್ಲಾದೇಶ ವಿಶ್ವಕಪ್‌ನಲ್ಲಿ ಕೂಡ ಅದನ್ನೇ ಮಾಡುವ ಲೆಕ್ಕಾಚಾರದಲ್ಲಿದೆ. ಆಸ್ಟ್ರೇಲಿಯಾ, ಪಾಕಿಸ್ತಾನವನ್ನೇ ಮಕಾಡೆ ಮಲಗಿಸಿರುವು ಭಾರತ ಮತ್ತೊಂದು ದೊಡ್ಡ ಗೆಲುವಿಗೆ ಕಾಯುತ್ತಿದೆ.

ಭಾರತ ವಿಶ್ವಕಪ್ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್.

Story first published: Sunday, October 15, 2023, 17:23 [IST]
Other articles published on Oct 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+