For Quick Alerts
ALLOW NOTIFICATIONS  
For Daily Alerts
 

ಫೈನಲ್‌ಗೆ ಪ್ರವೇಶಿಸಿದ ಭಾರತ: ಅಹ್ಮದಾಬಾದ್‌ಗೆ ಪ್ರಯಾಣ ಬೆಳೆಸಿದ ರೋಹಿತ್ ಶರ್ಮಾ ಪಡೆ

ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಸೆಮಿಫೈನಲ್‌ನಲ್ಲಿ ಭರ್ಜರಿಯಾಗಿ ಮಣಿಸಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ನಾಲ್ಕನೇ ಬಾರಿಗೆ ಏಕದಿನ ವಿಶ್ವಕಪ್ ಫೈನಲ್‌ಗೆ ಪ್ರವೇಶ ಪಡೆದುಕೊಂಡಿರುವ ಭಾರತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ನಿರೀಕ್ಷೆಯಲ್ಲಿದೆ. ಫೈನಲ್ ಪಂದ್ಯ ಮುಂದಿನ ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ.

ಇನ್ನು ಈ ಫೈನಲ್ ಪಂದ್ಯಕ್ಕಾಗಿ ಮೂರು ದಿನಗಳು ಬಾಕಿಯಿದ್ದು ಮುಂದಿನ ಭಾನುವಾರ ಆಯೋಜನೆಯಾಗಲಿದೆ. ಆದರೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂದೇ ಅಹ್ಮದಾಬಾದ್‌ಗೆ ಪ್ರಯಾಣ ಬೆಳೆಸಿದ್ದು ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ತನ್ನ ಅಂತಿಮ ಸಿದ್ಧತೆಯನ್ನು ಮಾಡಿಕೊಳ್ಳಲಿದೆ.

Team India into finals: Rohit Sharma squad ply to Ahmedabad for ODI World Cup 2023 Final

ಬುಧವಾರ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 70 ರನ್‌ಗಳ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿತ್ತು. ವಿರಾಟ್ ಕೊಹ್ಲಿ, ಶ್ರೃಯಸ್ ಐಯ್ಯರ್ ಹಾಗೂ ಮೊಹಮ್ಮದ್ ಶಮಿ ಅವರ ಅಮೋಘ ಪ್ರದರ್ಶನ ಟೀಮ್ ಇಂಡಿಯಾದ ಈ ನಿರ್ಣಾಯಕ ಗೆಲುವಿಗೆ ಕಾರಣವಾಗಿತ್ತು. ಇದಾದ ಮರುದಿನವೇ ಭಾರತ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಅಹ್ಮದಾಬಾದ್‌ಗೆ ಪ್ರಯಾಣ ನಡೆಸಿದೆ.

ಭಾರತಕ್ಕೆ ಯಾರಾಗಲಿದ್ದಾರೆ ಎದುರಾಳಿ?
ಟೀಮ್ ಇಂಡಿಯಾಗೆ ಫೈನಲ್‌ನಲ್ಲಿ ಯಾವ ತಂಡ ಎದುರಾಳಿಯಾಗಲಿದೆ ಎನ್ನುವುದು ಸದ್ಯಕ್ಕಿರುವ ಕುತೂಹಲ. ಇಂದು ಎರಡನೇ ಸೆಮಿಫೈನಲ್ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ ಎರಡನೇ ತಂಡವಾಗಿ ಫೈನಲ್‌ಗೆ ಪ್ರವೇಶ ಪಡೆಯಲಿದ್ದು ಮುಂದಿನ ಭಾನುವಾರ ಚಾಂಪಿಯನ್ ಪಟ್ಟಕ್ಕಾಗಿ ಭಾರತದ ವಿರುದ್ಧ ಅಹ್ಮದಾಬಾದ್‌ನ ನರೆಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣೆಸಾಟ ನಡೆಸಲಿದೆ.

ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಬೆಂಚ್: ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್

Story first published: Thursday, November 16, 2023, 10:37 [IST]
Other articles published on Nov 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+