ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Team India 2023 : ಈ ಮೂರು ಪ್ರಮುಖ ಪಂದ್ಯಾವಳಿಗಳಲ್ಲಿ ಗೆಲ್ಲಲೇಬೇಕಿದೆ ಟೀಂ ಇಂಡಿಯಾ

Team India Need To Be Won These 3 Big Tournaments In 2023

2022ರಲ್ಲಿ ಟೀಂ ಇಂಡಿಯಾ ಪ್ರಮುಖವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಪ್ರಮುಖ ಆಟಗಾರರು ಗಾಯಗೊಂಡಿದ್ದು ತಂಡಕ್ಕೆ ಪ್ರಮುಖ ಹಿನ್ನಡೆಯಾಯಿತು.

2022ರಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಕೊನೆಯ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಿತು. ಏಕದಿನ ಸರಣಿಯನ್ನು ಸೋಲುವ ಮೂಲಕ ಮುಖಭಂಗ ಅನುಭವಿಸಿದ ಟೀಂ ಇಂಡಿಯಾ, ಟೆಸ್ಟ್ ಸರಣಿಯನ್ನು ವೈಟ್ ವಾಶ್ ಮಾಡುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ತಲುಪುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಪಾಕಿಸ್ತಾನ ತಂಡವನ್ನು ಬಲಪಡಿಸಲು ಬಿಸಿಸಿಐ ತಂತ್ರ ಅನುಸರಿಸಲು ಮುಂದಾದ ಶಾಹಿದ್ ಅಫ್ರಿದಿ!ಪಾಕಿಸ್ತಾನ ತಂಡವನ್ನು ಬಲಪಡಿಸಲು ಬಿಸಿಸಿಐ ತಂತ್ರ ಅನುಸರಿಸಲು ಮುಂದಾದ ಶಾಹಿದ್ ಅಫ್ರಿದಿ!

ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಆಡುವ ಮೂಲಕ ಭಾರತ 2023ರ ವರ್ಷವನ್ನು ಆರಂಭಿಸಲಿದೆ. 2023ರಲ್ಲಿ ಭಾರತ 35ಕ್ಕೂ ಹೆಚ್ಚಿನ ಏಕದಿನ ಪಂದ್ಯಗಳನ್ನಾಡಲಿದೆ. ಹಲವು ಹಿರಿಯ ಆಟಗಾರರು ಮತ್ತೆ ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.

ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ 2023ರಲ್ಲಿ ತಂಡಕ್ಕೆ ಮರಳಲಿದ್ದಾರೆ. ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಭಾರತ ಹಲವು ಸರಣಿಗಳನ್ನು ಆಡಲಿದೆ. ಇವೆಲ್ಲವನ್ನು ಹೊರತುಪಡಿಸಿದರೆ ಭಾರತ ತಂಡ 2023ರಲ್ಲಿ ಪ್ರಮುಖವಾಗಿ ಈ ಮೂರು ಪಂದ್ಯಾವಳಿಗಳನ್ನು ಗೆಲ್ಲಬೇಕಿದೆ.

ಮೊದಲ ಪರೀಕ್ಷೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್

ಮೊದಲ ಪರೀಕ್ಷೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್

2021ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಸೋತ ಭಾರತ ರನ್ನರ್ ಅಪ್ ಆಗಿದೆ. 2023ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ ಪ್ರವೇಶಿಸುವ ಎಲ್ಲಾ ಅವಕಾಶಗಳನ್ನು ಹೊಂದಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತಕ್ಕೆ, ಫೆಬ್ರವರಿ 9 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಮುಖ್ಯವಾಗಿದೆ.

ಆಸ್ಟ್ರೇಲಿಯಾ ಕೊನೆಯ ಬಾರಿಗೆ 2016ರಲ್ಲಿ ಭಾರತಕ್ಕೆ ಭೇಟಿ ನೀಡಿತ್ತು. ಆಗ ಭಾರತ 2-1 ಅಂತರದಲ್ಲಿ ಸರಣಿಯನ್ನು ಗೆದ್ದಿತ್ತು. ನಂತರ ಭಾರತ ಎರಡು ಬಾರಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದು, ಎರಡೂ ಬಾರಿ ಭಾರತ ಸರಣಿಯನ್ನು ಗೆದ್ದುಕೊಂಡಿದೆ. 2016ರಿಂದ ಭಾರತ ಸತತವಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಈ ಬಾರಿ ಕೂಡ ಭಾರತ ಸರಣಿಯನ್ನು ಗೆದ್ದರೆ ಸುಲಭವಾಗಿ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪ್ರವೇಶಿಸಲಿದೆ.

ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವುದು ಬಹುತೇಕ ಖಚಿತವಾಗಿದೆ. ಜೂನ್‌ನಲ್ಲಿ ಫೈನಲ್ ನಡೆಯಲಿದ್ದು, ಭಾರತ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಜೊತೆಗೆ, ಫೈನಲ್‌ ಪಂದ್ಯವನ್ನು ಗೆಲ್ಲಬೇಕಿದೆ.

ಟೆಸ್ಟ್ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲು ಇನ್ನೂ ಸಿದ್ಧವಾಗಿಲ್ಲ ಟೀಂ ಇಂಡಿಯಾ!

ಏಷ್ಯಾಕಪ್‌ ಟ್ರೋಫಿ

ಏಷ್ಯಾಕಪ್‌ ಟ್ರೋಫಿ

2022ರಲ್ಲಿ ಸೆಪ್ಟೆಂಬರ್‌ನಲ್ಲಿ ನಡೆದ ಏಷ್ಯಾ ಕಪ್ 2022 ರ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಟೂರ್ನಿ ಆರಂಭಕ್ಕೆ ಮುನ್ನ ಭಾರತ ತಂಡ ಪ್ರಶಸ್ತಿ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ, ಅವರು ಫೈನಲ್ ತಲುಪುವಲ್ಲಿ ಕೂಡ ವಿಫಲರಾಗಿದ್ದರು. ಗುಂಪು ಹಂತದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಸೋಲನುಭವಿಸಿ ಟೂರ್ನಿಯಿಂದ ಹೊರಬಿದ್ದಿತ್ತು.

2023ರ ಸೆಪ್ಟೆಂಬರ್‌ನಲ್ಲಿ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, ಭಾರತ ತಂಡ ಈ ಬಾರಿ ಚಾಂಪಿಯನ್ ಆಗಬೇಕಿದೆ. ಪಾಕಿಸ್ತಾನದಲ್ಲಿ ಟೂರ್ನಿಯನ್ನು ಆಯೋಜನೆ ಮಾಡಲಿದ್ದು, ಇದಕ್ಕೆ ಬಿಸಿಸಿಐ ವಿರೋಧ ವ್ಯಕ್ತಪಡಿಸಿದೆ. ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜನೆ ಮಾಡುವ ಸಾಧ್ಯತೆ ಇದೆ.

ಏಕದಿನ ವಿಶ್ವಕಪ್ ಗೆಲ್ಲುವ ಗುರಿ

ಏಕದಿನ ವಿಶ್ವಕಪ್ ಗೆಲ್ಲುವ ಗುರಿ

2011ರ ನಂತರ ಮೊದಲ ಬಾರಿಗೆ ಭಾರತದಲ್ಲಿ ಏಕದಿನ ವಿಶ್ವಕಪ್ ಆಯೋಜನೆ ಮಾಡಲಾಗುತ್ತಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಈ ಪಂದ್ಯಾವಳಿ ನಡೆಯಲಿದೆ. 10 ತಂಡಗಳು ಈ ಮೆಗಾ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.

ಟೂರ್ನಿಯಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ. 2019ರಲ್ಲಿ ಏಕದಿನ ವಿಶ್ವಕಪ್‌ ಗೆದ್ದಿರುವ ಇಂಗ್ಲೆಂಡ್ ಹಾಲಿ ಚಾಂಪಿಯನ್ ಆಗಿದೆ. ಕೊನೆಯ ಮೂರು ಆವೃತ್ತಿಗಳಲ್ಲಿ ಆತಿಥ್ಯ ವಹಿಸಿದ್ದ ರಾಷ್ಟ್ರವೇ ವಿಶ್ವಕಪ್ ಗೆದ್ದುಕೊಂಡಿದೆ. 2011ರಲ್ಲಿ ಭಾರತ, ಶ್ರೀಲಂಕಾ, ಬಾಂಗ್ಲಾದೇಶದಲ್ಲಿ ಟೂರ್ನಿ ಆಯೋಜಿಸಲಾಗಿತ್ತು, ಭಾರತ ಚಾಂಪಿಯನ್ ಆಗಿತ್ತು, 2015ರಲ್ಲಿ ಆಸ್ಟ್ರೇಲಿಯಾ, 2019ರಲ್ಲಿ ಇಂಗ್ಲೆಂಡ್ ಪ್ರಶಸ್ತಿ ಗೆದ್ದಿದ್ದು, 2023ರಲ್ಲಿ ಭಾರತ ಆತಿಥ್ಯ ವಹಿಸುತ್ತಿದ್ದು, ಕಪ್ ಗೆಲ್ಲು ಫೇವರಿಟ್ ತಂಡವಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಸೋಲನುಭವಿಸಿರುವ ಭಾರತ ತಂಡಕ್ಕೆ ಏಕದಿನ ವಿಶ್ವಕಪ್‌ ಮಹತ್ವದ್ದಾಗಿದೆ. ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.

Story first published: Sunday, January 1, 2023, 13:02 [IST]
Other articles published on Jan 1, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X