
ಧವನ್‌ಗೆ ನಾಯಕತ್ವ, ಜಡೇಜಾ ಉಪನಾಯಕ
ಜುಲೈ 22ರಿಂದ 27ರ ಮಧ್ಯೆ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜನೆಯಾಗಲಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಕೂಡ ಟ್ರನಿಡಾಡ್‌ನ ಪೋರ್ಟ್ ಆಫ್ ಸ್ಪೈನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿದೆ. ಭಾರತದ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಅನುಭವಿ ಶಿಖರ್ ಧವನ್ ಭಾರತ ತಂಡವನ್ನು ಮುನ್ನಡೆಸಲಿದ್ದು ರವೀಂದ್ರ ಜಡೇಜಾ ಉಪನಾಯಕನಾಗಿ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ.

ಯುವ ತಂಡದೊಂದಿಗೆ ಕಣಕ್ಕಿಳಿಯಲಿದೆ ಭಾರತ
ಭರವಸೆಯ ಆಟಗಾರರಾದ ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ ಮತ್ತು ಶ್ರೇಯಸ್ ಐಯ್ಯರ್ ಈ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಕೂಡ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇನ್ನು ಇತ್ತೀಚೆಗೆ ಟಿ20 ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ದೀಪಕ್ ಹೂಡಾ ಕೂಡ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಬಳಿಕ ಇಂಗ್ಲೆಂಡ್ ವಿರುದ್ಧದ ಚುಟುಕು ಸರಣಿಯಲ್ಲಿಯೂ ಅಮೋಘ ಪ್ರದರ್ಶನ ನೀಡಿ ಮಿಂಚಿದ್ದರು. ಇದೀಗ ಧವನ್ ನೇತೃತ್ವದಲ್ಲಿ ಕಣಕ್ಕಿಳಿಯಲಿರುವ ಏಕದಿನ ತಂಡದಲ್ಲಿಯೂ ಹೂಡಾ ಭಾಗವಾಗಿದ್ದಾರೆ.

ಏಕದಿನ ಸರಣಿಯ ಬಳಿಕ ನಡೆಯಲಿದೆ ಟಿ20 ಸರಣಿ
ಇನ್ನು ಈ ಏಕದಿನ ಸರಣಿಯ ಮುಕ್ತಾಯದ ಬಳಿಕ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಐದು ಪಂದ್ಯಗಳ ಟಿ20 ಸರಣಿಯಲ್ಲಿಯೂ ಮುಖಾಮುಖಿಯಾಗಲಿದೆ. ಜುಲೈ 29ರಿಂದ ಆಗಸ್ಟ್ 7ರ ಮಧ್ಯೆ ಈ ಟಿ20 ಸರಣಿ ನಡೆಯಲಿದ್ದು ಇದರಲ್ಲಿ ರೋಹಿತ್ ಶರ್ಮಾ, ರಿಷಬ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಲಿದ್ದಾರೆ. ಕೊಹ್ಲಿ, ಬೂಮ್ರಾ ಹಾಗೂ ಶಮಿಗೆ ಚುಟುಕು ಸರಣಿಯಿಣದಲೂ ವಿಶ್ರಾಂತಿ ನೀಡಲಾಗಿದೆ.

ಏಕದಿನ ಸರಣಿಯ ಭಾರತದ ಸ್ಕ್ವಾಡ್
ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.


Click it and Unblock the Notifications
