ಟೆಸ್ಟ್ ಸರಣಿಗೂ ಮುನ್ನ ಭರ್ಜರಿ ಡಿನ್ನರ್: ಆಟಗಾರರಿಗೆ ಸಾಥ್ ನೀಡಿದ ಕೋಚ್ ರಾಹುಲ್ ದ್ರಾವಿಡ್
ಡಿಸೆಂಬರ್ 26ರಿಂದ ಆರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾ ಆಟಗಾರರು, ಸಖತ್ ಅಭ್ಯಾಸ ನಡೆಸಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಕಬ್ಬಿಣದ ಕಡಲೆಯಾಗಿರುವ ಗೆಲುವಿಗೋಸ್ಕರ ಭಾರತವು ಸಾಕಷ್ಟು ತಯಾರಿ ನಡೆಸಿದೆ. ಇದೀಗ ನೆಟ್ಸ್‌ನಲ್ಲಿ ಸಾಕಷ್ಟು ಬೆವರಿಳಿಸಿದ ಬಳಿಕ ಆಟಗಾರರು ಬ್ರೇಕ್ ತೆಗೆದುಕೊಂಡಿದ್ದಾರೆ.

ಕಳೆದ ಮಂಗಳವಾರ ರಾತ್ರಿ ಟೀಂ ಇಂಡಿಯಾದ ಕೆಲವು ಆಟಗಾರರು ಹಾಗೂ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಜೊತೆಗೆ ಸಹಾಯಕ ಸಿಬ್ಬಂದಿ ಡಿನ್ನರ್‌ಗೆ ತೆರಳಿದ್ದಾರೆ. ತೆರೆದ ಜಾಗದಲ್ಲಿ ಬಾರ್ಬೆಕ್ಯೂ ಊಟವನ್ನ ಸವಿದಿರುವ ಭಾರತದ ಆಟಗಾರರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೊಗಳನ್ನ ಶೇರ್ ಮಾಡಿದ್ದಾರೆ.
ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಡಿನ್ನರ್ ತೆರಳಿದ ಪ್ರಮುಖ ಆಟಗಾರರು. ಇವರ ಜೊತೆಗೆ ಹೆಡ್ ಕೋಚ್ ರಾಹುಲ್ ದ್ರಾವಿಡ್ ಇತರೆ ಸಹಾಯಕ ಸಿಬ್ಬಂದಿಗಳನ್ನ ಸಹ ಫೋಟೋದಲ್ಲಿ ಕಾಣಬಹುದು.
ಟೀಂ ಇಂಡಿಯಾ ಓಪನರ್ ಮಯಾಂಕ್ ಅಗರ್ವಾಲ್ ಈ ಡಿನ್ನರ್ ಫೋಟೊವನ್ನ ಶೇರ್ ಮಾಡಿದ್ದು, ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ''ಬಾರ್ಬೆಕ್ಯೂ ಫೈರ್ ರಾತ್ರಿಗಿಂತ ಮತ್ತೇನೂ ಇಲ್ಲ'' ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಮೊದಲ ಫೋಟೋದಲ್ಲಿ ಎಲ್ಲರೂ ಒಟ್ಟಾಗಿರುವ ಚಿತ್ರವಿದ್ದು, ಎರಡನೇ ಫೋಟೋದಲ್ಲಿ ಡಿನ್ನರ್ ಟೇಬಲ್‌ನಲ್ಲಿ ಕುಳಿತಿರುವ ಚಿತ್ರ ಕಾಣಬಹುದು.

ಮೂರು ಟೆಸ್ಟ್ ಮತ್ತು ಮೂರು ODI ಪಂದ್ಯಗಳನ್ನಾಡಲಿರುವ ಟೀಂ ಇಂಡಿಯಾ
ಡಿಸೆಂಬರ್ 26ರಂದು ಸೆಂಚುರಿಯನ್ ಸೂಪರ್‌ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಮೊದಲ ಪಂದ್ಯವು ಸೆಂಚುರಿಯನ್ ಅಂಗಳದಲ್ಲಿ ಡಿ. 26ರಿಂದ ಡಿ. 30ರವರೆಗೆ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯವು ಜೋಹಾನ್ಸ್ ಬರ್ಗ್ ಮತ್ತು ಮೂರನೇ ಟೆಸ್ಟ್ ಕೇಪ್‌ಟೌನ್‌ನಲ್ಲಿ ನಡೆಯಲಿದೆ. ಭಾರತ- ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ ಹಾಗೂ ಏಕದಿನ ಸರಣಿಯ ವೇಳಾಪಟ್ಟಿ ಈ ಕೆಳಗಿದೆ.
ಆಶಸ್ ಸರಣಿ: ಒಂದು ಪಂದ್ಯವನ್ನು ಗೆಲ್ಲಲೂ ಇಂಗ್ಲೆಂಡ್ ಅರ್ಹವಲ್ಲ ಎಂದ ಇಂಗ್ಲೆಂಡ್ ಮಾಜಿ ನಾಯಕ

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್

ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM

ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಪ್ರಿಯಾಂಕ್ ಪಾಂಚಾಲ್, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊ. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಸ್ಟ್ಯಾಂಡ್ ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜಾನ್ ನಾಗ್ವಾಸ್ವಾಲ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications