ಸೆಮಿಫೈನಲ್ ಪಂದ್ಯಕ್ಕಾಗಿ ಮುಂಬೈಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು
ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ. ಫೈನಲ್ ಪಂದ್ಯವನ್ನು ಆಡಲು ಎರಡು ತಂಡಗಳು ಕೂಡ ತೀವ್ ಪೈಪೊಟಿ ನಡೆಸಲಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಮುಂಬೈಗೆ ಬಂದಿಳಿದಿದ್ದಾರೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಟೀಮ್ ಇಂಡಿಯಾದ ಆಟಗಾರರು ಇಂದು ಮುಂಬೈಗೆ ಆಗಮಿಸಿದ್ದಾರೆ. ವಾಂಖೆಡೆ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ 2011ರ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಆಡಿ ಚಾಂಪಿಯನ್ ಪಟ್ಟಕ್ಕೇರಿತ್ತು.

ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿತ್ತು. ಆದರೆ ನಾಕೌಟ್ ಹಂತದಲ್ಲಿ ಕಿವೀಸ್ ಭಾರತಕ್ಕೆ ಸುದೀರ್ಘ ಕಾಲದಿಂದ ಆಘಾತ ನೀಡಿಕೊಂಡು ಬರುತ್ತಿದೆ. 2019ರ ವಿಶ್ವಕಪ್‌ನಲ್ಲಿ ಇದೇ ನ್ಯೂಜಿಲೆಂಡ್ ತಂಡ ಭಾರತದ ವಿಶ್ವಕಪ್ ಕನಸನ್ನು ಭಗ್ನಗೊಳಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕಿವೀಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಅದ್ಭುಯತ ಅವಕಾಶವಿದೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಎಲ್ಲಾ 9 ಪಂದ್ಯಗಳಲ್ಲಿಯೂ ಅಮೋಘ ಪ್ರದರ್ಶನ ನೀಡಿದ್ದು ಟೂರ್ನಿಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದೆ. ಭಾನುವಾರ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಭಾರತ ಭರ್ಜರಿ 160 ರನ್‌ಗಳ ಅಂತರದಿಂದ ಗೆದ್ದು ಬೀಗಿತ್ತು. ಈ ಗೆಲುವಿನ ಸರಪಳಿಯನ್ನು ಮುಂದುವರಿಸುವ ಆತ್ಮವಿಶ್ವಾಸ ಭಾರತ ತಂಡದಲ್ಲಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಪ್ರಸಿದ್ಧ್ ಕೃಷ್ಣ
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್, ಕೈಲ್ ಜೇಮಿಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications