ಸೆಮಿಫೈನಲ್ ಪಂದ್ಯಕ್ಕೂ ಮುನ್ನ ವಿನಾಯಕನ ದರ್ಶನ ಪಡೆದ ಟೀಮ್ ಇಂಡಿಯಾ ಆಟಗಾರರು
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಗುರುವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಟೂರ್ನಿಯ ಫೈನಲ್‌ಗೆ ಅರ್ಹತೆ ಪಡೆಯುವ ಪ್ಲ್ಯಾನ್ ಭಾರತ ತಂಡದ್ದಾಗಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮುಂಬೈನಲ್ಲಿ ಸುಪ್ರಸಿದ್ಧ ಸಿದ್ಧಿ ವಿನಾಯಕನ ಮಂದಿರಕ್ಕೆ ಭೇಟಿ ನೀಡಿ ಆಶಿರ್ವಾದ ಪಡೆದರು.
ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಹಂತದ ಪಂದ್ಯದಲ್ಲಿ ಮನಮೋಹಕ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದಿದೆ. ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ತಂಡ ಅಭಿಮಾನಿಗಳ ಹುಮ್ಮಸ್ಸನ್ನು ಇಮ್ಮಡಿ ಮಾಡಿದ್ದು, ಮುಂಬೈನಲ್ಲೂ ಸಹ ಇಂತದ್ದೇ ದೊಡ್ಡ ಪ್ರದರ್ಶನ ನೀಡಿ ಜಯ ಸಾಧಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಇಂಗ್ಲೆಂಡ್ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮುಂಬೈನಲ್ಲಿರುವ ಸಿದ್ಧಿ ವಿನಾಯಕನ ದರ್ಶನ ಪಡೆದರು.

ಮುಂಬೈನಲ್ಲಿರುವ ಸಿದ್ಧಿ ವಿನಾಯಕನ ದರ್ಶನಕ್ಕೆ ಟೀಮ್ ಇಂಡಿಯಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಅಕ್ಷರ್ ಪಟೇಲ್ ಸೇರಿದಂತೆ ಹಲವು ಆಟಗಾರರು ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಸಹ ಆಟಗಾರರನ್ನು ಗೌರವಿಸಿತು.
2026 ರ ಟಿ20 ವಿಶ್ವಕಪ್ ಆರಂಭಕ್ಕೂ ಮೊದಲು ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಸಹ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಪಂದ್ಯಕ್ಕೂ ಮುನ್ನ ಕೋಲ್ಕತ್ತಾದ ಕಾಳಿಘಾಟ್ ಕಾಳಿ ದೇವಸ್ಥಾನದಲ್ಲಿ ಅಕ್ಷರ್ ಪಟೇಲ್ ಮತ್ತು ಅಭಿಷೇಕ್ ಶರ್ಮಾ ಭೇಟಿ ನೀಡಿದ್ದರು. ಇನ್ನು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಪತ್ನಿ ಸಹ ಈ ವೇಳೆ ಕಾಣಿಸಿಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications