ಭಾರತ vs ಆಸ್ಟ್ರೇಲಿಯಾ: 3ನೇ ಟೆಸ್ಟ್‌ಗೆ ಟೀಮ್ ಇಂಡಿಯಾ ಆಡುವ ಬಳಗ ಪ್ರಕಟ, ಮಯಾಂಕ್ ಹೊರಕ್ಕೆ

ಸಿಡ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಸರಣಿಯ ಮೂರನೇ ಪಂದ್ಯದಲ್ಲಿ ಗುರುವಾರ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಟೀಮ್ ಇಂಡಿಯಾದ 11 ಆಟಗಾರರ ಬಳಗವನ್ನು ಬಿಸಿಸಿಐ ಘೋಷಿಸಿದೆ.
ಮೂರನೇ ಟೆಸ್ಟ್ ಪಂದ್ಯದ ಆಡುವ ಬಳಗದಿಂದ ಮಯಾಂಕ್ ಅಗರ್ವಾಲ್ ಹೊರಬಿದ್ದಿದ್ದಾರೆ. ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಮಯಾಂಕ್ ಅಗರ್ವಾಲ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅನುಭವಿ ರೋಹಿತ್ ಶರ್ಮಾ ಮಯಾಂಕ್ ಸ್ಥಾನವನ್ನು ಅಲಂಕರಿಸಿದ್ದಾರೆ. ಶುಭ್ಮನ್ ಗಿಲ್ ಆರಂಭಿಕನಾಗಿ ಹಿಟ್ ಮ್ಯಾನ್ ಜೊತೆಗೆ ಕಣಕ್ಕಿಳಿಯಲಿದ್ದಾರೆ.
ಎರಡನೇ ಪಂದ್ಯದಲ್ಲಿ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಉಮೇಶ್ ಯಾದವ್ ಸ್ಥಾನವನ್ನು ಯಾರು ಅಲಂಕರಿಸಲಿದ್ದಾರೆ ಎಂಬುದಕ್ಕೆ ಖಚಿತ ಉತ್ತಮ ದೊರೆತಿದೆ. ಟಿ ನಟರಾಜನ್ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಸ್ಪರ್ಧೆಯಲ್ಲಿ ಹಿಂದಿಕ್ಕಿ ನವ್‌ದೀಪ್ ಸೈನಿ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಉಳಿದಂತೆ ಮೆಲ್ಬರ್ನ್ ಟೆಸ್ಟ್‌ನಲ್ಲಿ ಇದ್ದ ತಂಡವನ್ನು ಟೀಮ್ ಇಂಡಿಯಾ ಉಳಿಸಿಕೊಂಡಿದೆ.

ಉಮೇಶ್ ಯಾದವ್ ಸ್ಥಾನಕ್ಕೆ ಸೈನಿ
ಎರಡನೇ ಪಂದ್ಯದಲ್ಲಿ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಉಮೇಶ್ ಯಾದವ್ ಸ್ಥಾನವನ್ನು ಯಾರು ಅಲಂಕರಿಸಲಿದ್ದಾರೆ ಎಂಬುದಕ್ಕೆ ಖಚಿತ ಉತ್ತಮ ದೊರೆತಿದೆ. ಟಿ ನಟರಾಜನ್ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಸ್ಪರ್ಧೆಯಲ್ಲಿ ಹಿಂದಿಕ್ಕಿ ನವ್‌ದೀಪ್ ಸೈನಿ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಉಳಿದಂತೆ ಮೆಲ್ಬರ್ನ್ ಟೆಸ್ಟ್‌ನಲ್ಲಿ ಇದ್ದ ತಂಡವನ್ನು ಟೀಮ್ ಇಂಡಿಯಾ ಉಳಿಸಿಕೊಂಡಿದೆ.

ಉಪನಾಯಕನಾಗಿ ರೋಹಿತ್ ಸಾಥ್
ಅಜಿಂಕ್ಯ ರಹಾನೆ ನೇತೃತ್ವದ ಈ ತಂಡದ ಉಪನಾಯಕನಾಗಿ ರೋಹಿತ್ ಶರ್ಮಾ ಸಾಥ್ ನೀಡಲಿದ್ದಾರೆ. ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರೆ ಚೇತೇಶ್ವರ್ ಪೂಜಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ನಾಯಕ ಅಜಿಂಕ್ಯ ರಹಾನೆ ಹನುಮ ವಿಹಾರಿ ಬ್ಯಾಟಿಂಗ್ ನಡೆಸಲಿದ್ದಾರೆ.

ಯುವ ವೇಗದ ಬೌಲಿಂಗ್ ವಿಭಾಗ
ವಿಕೆಟ್ ಕೀಪರ್ ರಿಷಭ್ ಪಂತ್ ಮೂರನೇ ಪಂದ್ಯಲ್ಲೂ ಸ್ಥಾನವನ್ನು ಉಳಿಸಿಕೊಂಡಿದ್ದು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ರವೀಂದ್ರ ಜಡೇಜಾ ಆಲ್‌ರೌಂಡರ್ ಆಗಿ ಸಾಥ್ ನೀಡಲಿದ್ದು ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಆರ್ ಅಶ್ವಿನ್‌ಗೆ ಜೊತೆಯಾಗಲಿದ್ದಾರೆ. ವೇಗದ ಬೌಲಿಂಗ್ ವಿಭಾಗವನ್ನು ಜಸ್ಪ್ರೀತ್ ಬೂಮ್ರಾ ಮುನ್ನಡೆಸುತ್ತಿದ್ದು ಎರಡನೇ ಪಂದ್ಯವನ್ನಾಡುತ್ತಿರುವ ಮೊಹಮ್ಮದ್ ಸಿರಾಜ್ ಹಾಗೂ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ನವ್‌ದೀಪ್ ಸೈನಿ ಮೇಲೆ ನಿರೀಕ್ಷೆ ಹೆಚ್ಚಿದೆ.

ಟೀಮ್ ಇಂಡಿಯಾ ಆಡುವ ಬಳಗ
ರೋಹಿತ್ ಶರ್ಮಾ(ಉಪನಾಯಕ), ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ನಾಯಕ), ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್) ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ನವ್‌ದೀಪ್ ಸೈನಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications