ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತಂಡ ಸೇರಿಕೊಂಡ ಯುವ ವೇಗಿ, ಶಿಖರ್ ಧವನ್‌ಗೆ ರಾಹುಲ್ ದ್ರಾವಿಡ್ ಸ್ಪೆಷಲ್ ಕ್ಲಾಸ್

Team India Practice Ahead 3rd ODI: Rahul Dravid Gives Special Class To Shikhar Dhawan

ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಸೋತ ಬಳಿಕ ಸೋಮವಾರ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಆಟಗಾರರು ಮಂಗಳವಾರ ಢಾಕಾದಲ್ಲಿ ಪೂರ್ಣ ಅಭ್ಯಾಸ ನಡೆಸಿದರು.

ಸರಣಿಯಲ್ಲಿ ಬಾಂಗ್ಲಾದೇಶ 1-0 ಮುನ್ನಡೆ ಸಾಧಿಸಿದ್ದು, ಭಾರತ ತಂಡ ಸರಣಿ ಸೋಲಿನಿಂದ ತಪ್ಪಿಸಿಕೊಳ್ಳಬೇಕಾದರೆ ಎರಡನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಮಂಗಳವಾರ ಅಭ್ಯಾಸದಲ್ಲಿ ಎಲ್ಲಾ ಆಟಗಾರರು ಭಾಗವಹಿಸಿದ್ದರು. ಮೊಹಮ್ಮದ್ ಶಮಿ ಬದಲಾಗಿ ತಂಡಕ್ಕೆ ಆಯ್ಕೆಯಾಗಿರುವ ವೇಗಿ ಉಮ್ರಾನ್ ಮಲಿಕ್ ತಂಡವನ್ನು ಸೇರಿಕೊಂಡಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ಮಾಡಿದರು.

IND vs BAN: ಈತ ಎರಡನೇ ಏಕದಿನ ಪಂದ್ಯದಲ್ಲಿ ಆಡಬೇಕು ಎಂದ ಆಕಾಶ್ ಚೋಪ್ರಾIND vs BAN: ಈತ ಎರಡನೇ ಏಕದಿನ ಪಂದ್ಯದಲ್ಲಿ ಆಡಬೇಕು ಎಂದ ಆಕಾಶ್ ಚೋಪ್ರಾ

ಬುಧವರಾ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಇದೆ. ಮೊದಲ ಪಂದ್ಯದಲ್ಲಿ ಗಾಯಗೊಂಡ ಶಾರ್ದುಲ್ ಠಾಕೂರ್ ಎರಡನೇ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.

ಇನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದಲೂ ತಮ್ಮ ಫಾರ್ಮ್ ಕಂಡುಕೊಳ್ಳಲು ಪರದಾಡುತ್ತಿರುವ ಶಿಖರ್ ಧವನ್‌ಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಲಹೆಗಳನ್ನು ನೀಡಿದರು. ದ್ರಾವಿಡ್ ಧವನ್‌ ಜೊತೆ ನೆಟ್ಸ್‌ನಲ್ಲಿ ಸಾಕಷ್ಟು ಸಮಯ ಕಳೆದರು. ದ್ರಾವಿಡ್ ಅವರೊಂದಿಗೆ ಸ್ವೀಪ್ ಮತ್ತು ರಿವರ್ಸ್ ಸ್ವೀಪ್ ಬಗ್ಗೆ ಮಾತನಾಡಿದರು. ಈ ಚರ್ಚೆಯಲ್ಲಿ ಮತ್ತೊಬ್ಬ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಭಾಗಿಯಾದರು.

Team India Practice Ahead 3rd ODI: Rahul Dravid Gives Special Class To Shikhar Dhawan

ತಂಡವನ್ನು ಸೇರಿಕೊಂಡ ಉಮ್ರಾನ್ ಮಲಿಕ್

ಮೊಹಮ್ಮದ್ ಶಮಿ ಗಾಯಗೊಂಡ ಪರಿಣಾಮ ಸರಣಿಯಿಂದ ಹೊರಗುಳಿದರು. ಅವರ ಬದಲಾಗಿ ಉಮ್ರಾನ್ ಮಲಿಕ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದ್ದು, ಅವರು ಢಾಕಾದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ಉಮ್ರಾನ್ ಮಲಿಕ್ ಬುಧವಾರ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದ ಖಚಿತವಾಗಿದೆ.

ಶಾರ್ದುಲ್ ಠಾಕೂರ್ ಗಾಯಗೊಂಡಿರುವ ಪರಿಣಾಮ ಅವರು ಎರಡನೇ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಅಕ್ಷರ್ ಪಟೇಲ್ ಕೂಡ ಗಾಯಗೊಂಡಿದ್ದು ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಿಲ್ಲ. ಆದರೂ ಅವರು ಎರಡನೇ ಏಕದಿನ ಪಂದ್ಯದಲ್ಲಿ ಆಡುವುದು ಅನುಮಾನ. ತರಬೇತಿ ಮುಗಿದ ನಂತರ ಇವರಿಬ್ಬರ ಫಿಟ್ನೆಸ್ ಬಗ್ಗೆ ನಿರ್ಧಾರ ಮಾಡಲಾಗುತ್ತದೆ.

ನಾಯಕ ರೋಹಿತ್ ಶರ್ಮಾ ರನ್ ಗಳಿಸಲು ಪರದಾಡುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಟಿ20 ವಿಶ್ವಕಪ್‌ನಲ್ಲಿ ಕೂಡ ರನ್ ಬರ ಅನುಭವಿಸಿದ್ದ ರೋಹಿತ್ ಶರ್ಮಾ, ನಂತರ 15 ದಿನಗಳ ಕಾಲ ವಿಶ್ರಾಂತಿ ಪಡೆದಿದ್ದರು. ಆದರೂ, ಬಾಂಗ್ಲಾದೇಶದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರನ್ ಗಳಿಸಲು ವಿಫಲವಾದರು.

ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಳಿಕ ಅವರು ಏಕದಿನ ಪಂದ್ಯಗಳಲ್ಲಿ ರನ್ ಗಳಿಸುವತ್ತ ಗಮನ ಹರಿಸಬೇಕಿದೆ. ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಗಳಿಸಿದರೆ ಭಾರತ ತಂಡದ ಗೆಲುವು ಸುಲಭವಾಗಲಿದೆ.

ಭಾರತ ತಂಡದ ಬೌಲಿಂಗ್ ವಿಭಾಗ ಸದ್ಯ ಉತ್ತಮವಾಗಿದ್ದು, ಫೀಲ್ಡಿಂಗ್ ವಿಭಾಗದಲ್ಲಿ ಸಾಕಷ್ಟು ಸುಧಾರಣೆ ಕಾಣಬೇಕಿದೆ. ಅಭ್ಯಾಸದ ಅವಧಿಯಲ್ಲಿ ಫಿಲ್ಡಿಂಗ್ ಬಗ್ಗೆ ಸಾಕಷ್ಟು ಚರ್ಚೆಯಾಗಿರುವ ಸಾಧ್ಯತೆ ಇದೆ.

Story first published: Tuesday, December 6, 2022, 16:36 [IST]
Other articles published on Dec 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X