ವಿಶ್ವಕಪ್‌ನ ಆರಂಭಿಕ 8 ಪಂದ್ಯಗಳ್ನು ಗೆದ್ದು ಅಗ್ರ ಸ್ಥಾನಿಯಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿರುವ ಟೀಮ್ ಇಂಡಿಯಾ ಕೊನೆಯ ಲೀಗ್ ಪಂದ್ಯವನ್ನು ಮುಂದಿನ ಭಾನುವಾರ ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಈಗಾಗಲೇ ಬೆಂಗಳೂರಿಗೆ ಆಗಮಿಸಿ ಸಿದ್ಧತೆ ನಡೆಸುತ್ತಿದ್ದಾರೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕಿಂತಲೂ ಭಾರತದ ಆಟಗಾರರ ಚಿತ್ತ ಈಗ ಮುಂದಿನ ಸೆಮಿಫೈನಲ್ ಪಂದ್ಯ ಮೇಲೆ ನೆಟ್ಟಿರುವುದು ಸ್ಪಷ್ಟವಾಗಿದೆ.
ಈಗಾಗಲೇ ಬೆಂಗಳೂರಿಗೆ ಬಂದಿರುವ ಟೀಮ್ ಇಂಡಿಯಾ ಸ್ಕ್ವಾಡ್ ಅಭ್ಯಾಸ ಆರಂಭಿಸಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್‌ಗಳಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಬ್ಯಾಟಿಂಗ್ ಅಭ್ಯಾಸಕ್ಕೆ ಒತ್ತು ನೀಡಿದ್ದಾರೆ ಎಂದು ಸ್ಟಾರ್ ಸ್ಪೋರ್ಟ್ಸ್ ವರದಿ ಮಾಡಿದೆ.

2011ರಲ್ಲಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಬಳಿಕ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತ ನಾಕೌಟ್ ಹಂತದಲ್ಲಿ ಕಳಪೆ ದಾಖಲೆ ಹೊಂದಿದೆ. ಬಹುತೇಕ ಸಂದರ್ಭದಲ್ಲಿ ಈ ಹಂತದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ವಿಫಲವಾಗಿದೆ. ಇತ್ತೀಚೆಗೆ 2021ರ ಟಿ20 ವಿಶ್ವಕಪ್‌ನಲ್ಲಿ ಅಗ್ರ ಕ್ರಮಾಂಕದ ಕಳಪೆ ಆಟದ ಕಾರಣದಿಂದಾಗಿ ನಾಕೌಟ್ ಹಂತದಿಂದ ಹೊರಬಿದ್ದಿತ್ತು. ಇನ್ನು 2022ರ ಟಿ20 ವಿಶ್ವಕಪ್‌ನಲ್ಲಿಯೂ ಭಾರತದ ಆರಂಭಿಕರ ಕಳಪೆ ಪ್ರದರ್ಶನದಿಂದಾಗಿ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಶರಣಾಗಿತ್ತು.
ಆದರೆ ಈ ವಿಶ್ವಕಪ್ ಟೂರ್ನಿಯಲ್ಲಿ ಈವರೆಗೂ ಭಾರತ ತಂಡ ಸಂಪೂರ್ಣ ಮೇಲುಗೈ ಸಾಧಿಸಿಕೊಂಡು ಬಂದಿದೆ. ಸ್ವತಃ ನಾಯಕ ರೋಹಿತ್ ಶರ್ಮಾ ಆರಂಭದಲ್ಲಿಯೇ ಆಕ್ರಮಣಕಾರಿ ಆಟಕ್ಕೆ ಮುಂದಾಗುವ ಮೂಲಕ ತಂಡಕ್ಕೆ ದೊಡ್ಡ ಬಲ ತುಂಬಿದ್ದಾರೆ. ಆದರೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಈಗ ಎಲ್ಲಾ ಪರಿಸ್ಥಿರಿಯನ್ನು ಕೂಡ ನಿಭಾಯಿಸಲು ತಯಾರಿರುವಂತೆ ಸಿದ್ಧತೆ ನಡೆಸುತ್ತಿರುವಂತಿದೆ. ಹೀಗಾಗಿ ಬಾಲಂಗೋಚಿಗಳನ್ನು ಕೂಡ ಬಲಪಡಿಸುವ ಪ್ರಯತ್ನಗಳಾಗುತ್ತಿದೆ.
ಇನ್ನು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಎಲ್ಲಾ 8 ಪಂದ್ಯಗಳಲ್ಲಿ ಭಾರತ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯ ಅಜೇಯ ತಂಡವಾಗಿ ಸೆಮಿಓಐನಲ್‌ಗೆ ಪ್ರವೇಶಿಸಿಕೊಂಡಿದೆ. ಕೊನೆಯ ಲೀಗ್ ಪಂದ್ಯವನ್ನು ಭಾರತ ನವೆಂಬರ್ 12 ಭಾನುವಾರ ಆಡಲಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಇನ್ನು ಸ್ಟಾರ್ ಸ್ಪೋರ್ಟ್ಸ್ ಮಾಹಿತಿಯ ಪ್ರಕಾರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬುಧವಾರ ಅಭ್ಯಾಸದಿಂದ ಹೊರಗುಳಿದಿದ್ದರು. ಆದರೆ ತಂಡದ ಆಟಗಾರರಾದ ಶ್ರೇಯಸ್ ಐಯ್ಯರ್ ಹಾಗೂ ಶುಬ್ಮನ್ ಗಿಲ್ ಜೊತೆಗೆ ಸುದೀರ್ಘವಾದ ಮಾತುಕತೆಯಲ್ಲಿ ತೊಡಗಿಸಿಕೊಂಡಿದ್ದರು. ಇನ್ನು ಬುಧವಾರ ನಂಬರ್ 1 ಪಟ್ಟವನ್ನು ಅಲಂಕರಿಸಿರುವ ಶುಬ್ಮನ್ ಗಿಲ್ ನೆಟ್ಸ್‌ನಲ್ಲಿ ನಾಲ್ಕು ಬಾರಿ ಅಭ್ಯಾಸ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರಿ ವೇಗದ ಎಸೆತಗಳಿಗೆ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ನಡೆಸಿ ಅಭ್ಯಾಸ ನಡೆಸಿದ್ದರು.