Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಈ ಪ್ಲೇಯರ್‌ಗೆ ಲಾಟರಿ

ಟೀಮ್ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಟೆಸ್ಟ್‌ ಸರಣಿಯಲ್ಲಿ 2-0 ಯಿಂದ ಕ್ಲೀನ್ ಸ್ವೀಪ್‌ ಸಾಧನೆ ಮಾಡಿದೆ. ಸದ್ಯ ಟೀಮ್ ಇಂಡಿಯಾದ ಅನುಭವಿ ಆಟಗಾರರು ರೆಸ್ಟ್‌ನಲ್ಲಿ ಇದ್ದಾರೆ. ಉಳಿದಂತೆ ಯುವ ತಂಡ ಬಾಂಗ್ಲಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಭಾರತ, ನ್ಯೂಜಿಲೆಂಡ್ ವಿರುದ್ಧದ ತವರಿನ ಸರಣಿಗೆ ಭರ್ಜರಿ ತಯಾರಿ ನಡೆಸಿದೆ. ಈ ಪಂದ್ಯದಲ್ಲಿ ಮತ್ತೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಅಂಗಳ ಪ್ರವೇಶಿಸಲಿದ್ದಾರೆ.

ಅಕ್ಟೋಬರ್‌ 16ರಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್‌ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸ್ಟಾರ್ ಆಟಗಾರರು ಕಂ ಬ್ಯಾಕ್ ಮಾಡುವ ಕನಸಿನಲಿದ್ದಾರೆ. ಬಾಂಗ್ಲಾ ವಿರುದ್ಧ ನೀಡಿರುವ ಪ್ರದರ್ಶನವನ್ನು ನೀಡಿದ್ದ ಅನುಭವಿಗಳು, ಕಿವೀಸ್ ತಂಡದ ಬೌಲರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ. ಈ ಸರಣಿಗೆ ಇನ್ನು ತಂಡವನ್ನು ಪ್ರಕಟಿಸಿಲ್ಲ. ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕುವ ಸಾಧ್ಯತೆ ಇದೆ.

Team India Prepares for New Zealand Test Series Sarfaraz Khan Likely to Feature in Playing XI

ಶ್ರೀಲಂಕಾ ಪ್ರವಾಸದಲ್ಲಿ ನ್ಯೂಜಿಲೆಂಡ್ ಹೀನಾಯ ಪ್ರದರ್ಶನ ನೀಡಿತ್ತು. ಅಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಹೀನಾಯ ಸೋಲು ಕಂಡಿತ್ತು. ಕಿವೀಸ್‌ ಆಟಗಾರರು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ನ್ಯೂಜಿಲೆಂಡ್ ತಂಡ ಇದುವರೆಗೂ ಭಾರತದಲ್ಲಿ ಒಂದೇ ಒಂದು ಟೆಸ್ಟ್ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ.

ಕಿವೀಸ್‌ ಸರಣಿಗೆ ಪ್ರಕಟವಾಗಿಲ್ಲ ಭಾರತ ತಂಡ

ತವರಿನಲ್ಲಿ ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಇನ್ನೇನು ಕೆಲವೇ ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಬಾಂಗ್ಲಾದೇಶ ವಿರುದ್ಧ ತಂಡದಲ್ಲಿ ಸ್ಥಾನ ಪಡೆದಿದ್ದ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಈ ಟೆಸ್ಟ್‌ ಸರಣಿಯ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಲಿದೆ. ಈ ನಿಟ್ಟಿನಲ್ಲಿ ತಂಡದಲ್ಲಿ ಹೆಚ್ಚಿನ ಬದಲಾವಣೆ ಕಾಣುವ ಸಾಧ್ಯತೆ ಕಡಿಮೆ. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ಗೆ ತಲುಪುವ ದೃಷ್ಟಿಯಿಂದ ಮುಂದಿನ ಎಲ್ಲ ಪಂದ್ಯಗಳೂ ಮಹತ್ವದಾಗಿವೆ.

Team India Prepares for New Zealand Test Series Sarfaraz Khan Likely to Feature in Playing XI

ಶಮಿ ಆಯ್ಕೆ ಅನುಮಾನ?

ಟೀಮ್ ಇಂಡಿಯಾಕ್ಕೆ ಸ್ಟಾರ್‌ ವೇಗಿ ಮೊಹಮ್ಮದ್‌ ಶಮಿ ಆಯ್ಕೆ ಆಗುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಆದರೆ ಟೀಮ್ ಇಂಡಿಯಾದ ಬ್ಯಾಟಿಂಗ್‌ನಲ್ಲಿ ಹೆಚ್ಚಿನ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಕಡಿಮೆ. ಆದರೆ ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅಖಾಡಕ್ಕೆ ಇಳಿಯಲು ಯುವ ಆಟಗಾರ ಭರ್ಜರಿ ತಾಲೀಮು ನಡೆಸಿದ್ದಾರೆ. ಸಿಕ್ಕ ಅವಕಾಶಗಳನ್ನು ಎರಡೂ ಕೈಗಳಿಂದ ಬಳಸಿಕೊಂಡಿರುವ ಮುಂಬೈ ಬ್ಯಾಟರ್‌ ತಮ್ಮನ್ನು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿ ಎಂದು ತಿಳಿಸುತ್ತಿದ್ದಾರೆ.

ಸರ್ಫರಾಜ್‌ಗೆ ಅವಕಾಶ

ದೇಶೀಯ ಟೂರ್ನಿಯಲ್ಲಿ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ಸರ್ಫರಾಜ್‌ ಖಾನ್ ಹೆಸರುವಾಸಿ. ಇತ್ತೀಚಿಗೆ ಲಕ್ನೋದಲ್ಲಿ ನಡೆದ ಇರಾನಿ ಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ತಂಡದ ಪರ ಬ್ಯಾಟ್ ಮಾಡಿದ ಸರ್ಫರಾಜ್‌ ಅಬ್ಬರಿಸಿದ್ದಾರೆ. ಮೊದಲ ಇನಿಂಗ್ಸ್‌ನಲ್ಲಿ ಇವರು ಅಮೋಘ ದ್ವಿಶತಕ ಬಾರಿಸಿ ಅಬ್ಬರಿಸಿದ್ದರು. ಹೀಗಾಗಿ ಅವರನ್ನು ಆಯ್ಕೆ ಮಾಡುವಂತೆ ಪ್ರೇರಿಪಿಸಿದಂತಿದೆ. ಸರ್ಫರಾಜ್ 51 ಪ್ರಥಮ ದರ್ಜೆ ಪಂದ್ಯಗಳಲ್ಲಿ 4422 ರನ್ ಗಳಿಸಿದ್ದಾರೆ.

Story first published: Wednesday, October 9, 2024, 22:29 [IST]
Other articles published on Oct 9, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+