IND vs ZIM: ಜಿಂಬಾಬ್ವೆ ವಿರುದ್ಧದ 4ನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್-11; ಗಿಲ್ ಪಡೆ ಸರಣಿ ಗೆಲ್ಲಲು ಸಿದ್ಧ!
ಜುಲೈ 13 ಶನಿವಾರ, ಭಾರತ ಮತ್ತು ಜಿಂಬಾಬ್ವೆ ನಡುವಿನ ಐದು ಪಂದ್ಯಗಳ ಟಿ20 ಅಂತರಾಷ್ಟ್ರೀಯ ಸರಣಿಯ ನಾಲ್ಕನೇ ಪಂದ್ಯ ಇಂದು ಭಾರತೀಯ ಕಾಲಮಾನ 4:30ಕ್ಕೆ ಹರಾರೆಯಲ್ಲಿ ಆರಂಭವಾಗಲಿದೆ.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ಹರಾರೆಯಲ್ಲಿ ನಡೆಯಲಿರುವ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲು ಶುಭಮನ್ ಗಿಲ್ ಪಡೆ ಸಜ್ಜಾಗಿದೆ.

ಮೊದಲ ಟಿ20 ಪಂದ್ಯದ ಸೋಲಿನ ನಂತರ ಟೀಮ್ ಇಂಡಿಯಾ ಭರ್ಜರಿ ಕಮ್‌ಬ್ಯಾಕ್ ಮಾಡಿದೆ. ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ಪ್ಲೇಯಿಂಗ್-11 ಬಗ್ಗೆ ಮಾಹಿತಿ ಇಲ್ಲಿದೆ.
ಆರಂಭಿಕ ಜೋಡಿ
ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕ ಶುಭ್‌ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಆರಂಭಿಕರಾಗಿ ಕಣಕ್ಕಿಳಿಯಲಿದೆ. ಯಶಸ್ವಿ ಜೈಸ್ವಾಲ್ ಯಾವುದೇ ಎದುರಾಳಿ ತಂಡದ ಬೌಲಿಂಗ್ ದಾಳಿಯನ್ನು ಆರಂಭದಲ್ಲೇ ಸಮರ್ಥವಾಗಿ ಎದುರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಶುಭಮನ್ ಗಿಲ್ ಅವರು ಕೂಡ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.
ಮೂರನೇ ಕ್ರಮಾಂಕ
ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಅಭಿಷೇಕ್ ಶರ್ಮಾ ಅವರು ಎಂತಹ ಪ್ರತಿಭಾವಂತ ಬ್ಯಾಟರ್ ಎಂಬುದನ್ನು ತೋರಿಸಿದ್ದಾರೆ.
ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 46 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ತಂಡಕ್ಕೆ ಯಶಸ್ವಿ ಜೈಸ್ವಾಲ್ ಆಗಮನದ ನಂತರ ಅಭಿಷೇಕ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಯಿತು. ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲೂ ಅಭಿಷೇಕ್ ಶರ್ಮಾ ಇದೇ ಕ್ರಮಾಂಕದಲ್ಲಿ ಕಣಕ್ಕೀಳಿಯಬಹುದು.
ನಾಲ್ಕು ಮತ್ತು ಐದನೇ ಕ್ರಮಾಂಕ
ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಅಂತರಾಷ್ಟ್ರೀಯ 4, 5ನೇ ಕ್ರಮಾಂಕದಲ್ಲಿ ಋತುರಾಜ್ ಗಾಯಕ್ವಾಡ್ ಹಾಗು ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಸಂಜು ಸ್ಯಾಮ್ಸನ್ ಕ್ರಮಾವಾಗಿ ಬ್ಯಾಟಿಂಗ್ ಮಾಡಬಹುದು. ಇಬ್ಬರು ಬ್ಯಾಟರ್‌ಗಳು ತಂಡಕ್ಕೆ ತ್ವರಿತವಾಗಿ ರನ್ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.
ಎಂದಿನಂತೆ ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ ಬ್ಯಾಟಿಂಗ್‌ಗೆ ಬರಬಹುದು. ರಿಂಕು ಸಿಂಗ್ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ಯಾವುದೇ ಪರಿಸ್ಥಿತಿಯಲ್ಲೂ ಪಂದ್ಯವನ್ನು ತಿರುವಿ ಹಾಕುವ ಶಕ್ತಿ ಹೊಂದಿದ್ದಾರೆ. ರಿಂಕು ಸಿಂಗ್ ಅವರನ್ನು ಟಿ20 ಕ್ರಿಕೆಟ್‌ನ ಮ್ಯಾಚ್ ಫಿನಿಶರ್ ಎಂದು ಪರಿಗಣಿಸಲಾಗಿದೆ.
7ನೇ ಕ್ರಮಾಂಕದಲ್ಲಿ ಆಫ್ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್‌ಗೆ ಮಾಡಬಹುದು.
ವಾಷಿಂಗ್ಟನ್ ಸುಂದರ್ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದರಿಂದ ಟೀಮ್ ಇಂಡಿಯಾಗೆ ಕೆಳ ಕ್ರಮಾಂಕದಲ್ಲಿ ಉಪಯುಕ್ತವಾಗಲಿದೆ. ವಾಷಿಂಗ್ಟನ್ ಸುಂದರ್ ತನ್ನ ಕಿಲ್ಲರ್ ಆಫ್ ಸ್ಪಿನ್ ಬೌಲಿಂಗ್‌ನಿಂದ ಜಿಂಬಾಬ್ವೆಯ ಬ್ಯಾಟರ್‌ಗಳಿಗೆ ಕಾಟ ನೀಡಿದ್ದಾರೆ.
ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಭಾರತದ ಆಡುವ ಹನ್ನೊಂದರಲ್ಲಿ ಆಯ್ಕೆಯಾಗಲಿದ್ದಾರೆ. ರವಿ ಬಿಷ್ಣೋಯ್ ತಮ್ಮ ಬೌಲಿಂಗ್‌ನಿಂದ ಜಿಂಬಾಬ್ವೆ ಬ್ಯಾಟರ್‌ಗಳಿಗೆ ತೊಂದರೆ ನೀಡಬಹುದು.
ವೇಗದ ಬೌಲರ್
ಮುಖೇಶ್ ಕುಮಾರ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್ ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಈ ಮೂವರು ವೇಗದ ಬೌಲರ್‌ಗಳು ಮಾರಕ ಬೌಲಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.
ಭಾರತದ ಸಂಭಾವ್ಯ ಪ್ಲೇಯಿಂಗ್-11: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಅವೇಶ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications