For Quick Alerts
ALLOW NOTIFICATIONS  
For Daily Alerts
 

IND vs AUS: ಆಸ್ಟ್ರೇಲಿಯಾ ವಿರುದ್ಧದ ಪರ್ತ್ ಟೆಸ್ಟ್‌ನಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್

ನವೆಂಬರ್ 22 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ದ ಟೆಸ್ಟ್ ಸರಣಿ ಸೋತಿರುವ ಭಾರತಕ್ಕೆ ಆಸ್ಟ್ರೇಲಿಯಾದಲ್ಲಿ ಗೆಲುವು ಅಷ್ಟು ಸುಲಭವಲ್ಲ. ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಟೀಮ್ ಇಂಡಿಯಾ ಆಟಗಾರರು ಎರಡು ಬ್ಯಾಚ್‌ಗಳಲ್ಲಿ ಪ್ರವಾಸ ಬೆಳಸಲಿದ್ದಾರೆ. ಈ ಸರಣಿಯಲ್ಲಿ ಆಡಲು ಟೀಮ್ ಇಂಡಿಯಾದ ಮೊದಲ ಬ್ಯಾಚ್ ಭಾನುವಾರ ಮುಂಬೈ ವಿಮಾನ ನಿಲ್ದಾಣದಿಂದ ಆಸ್ಟ್ರೇಲಿಯಾಕ್ಕೆ ತೆರಳಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಅಡಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ 16 ಟೆಸ್ಟ್ ಸರಣಿಗಳು ನಡೆದಿವೆ. ಈ ಪೈಕಿ 10 ಟೆಸ್ಟ್ ಸರಣಿಗಳನ್ನು ಭಾರತ ಗೆದ್ದರೆ, ಆಸ್ಟ್ರೇಲಿಯಾ 5 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಇದಲ್ಲದೇ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಒಂದು ಟೆಸ್ಟ್ ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ.

Team India probable squad for the first Test match against Australia

ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಕಳೆದ ಎರಡು ಸರಣಿಗಳನ್ನು ಗೆದ್ದಿದೆ. 2018-19 ಮತ್ತು 2020-21ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಭಾರತ ಈ ಹಿಂದಿನ ಎರಡೂ ಪ್ರವಾಸದಲ್ಲಿ ಕಾಂಗರೂ ತಂಡವನ್ನು 2-1 ಅಂತರದಿಂದ ಸೋಲಿಸಿತ್ತು. ಇದೀಗ ಟೀಮ್ ಇಂಡಿಯಾ ಹ್ಯಾಟ್ರಿಕ್ ಟೆಸ್ಟ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇದಕ್ಕಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆಡುವ ಹನ್ನೊಂದರ ಬಳಗ ಹೇಗರಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಧ್ರುವ್ ಜುರೆಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಧ್ರುವ್ ಜುರೆಲ್ ಮತ್ತು ಯಶಸ್ವಿ ಜೈಸ್ವಾಲ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಮ್ ಇಂಡಿಯಾಕ್ಕೆ ಆಕ್ರಮಣಕಾರಿ ಆರಂಭವನ್ನು ನೀಡಬಲ್ಲರು. ಆಸ್ಟ್ರೇಲಿಯಾದ ಪಿಚ್‌ಗಳು ಬೌನ್ಸಿ ಆಗಿರುವುದರಿಂದ ಸ್ಟ್ರೋಕ್‌ಗಳನ್ನು ಆಡಲು ಸುಲಭವಾಗುತ್ತದೆ. ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ದೂರ ಉಳಿಯುವ ಸಾಧ್ಯತೆ ಇದೆ. ಈ ವೇಳೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಮುನ್ನಡೆಸಬಹುದಾಗಿದೆ.

Team India probable squad for the first Test match against Australia

ಮೂರನೇ ಕ್ರಮಾಂಕದಲ್ಲಿ ಶುಭ್‌ಮನ್ ಗಿಲ್ ಕಣಕ್ಕಿಳಿದರೆ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್‌ 5ನೇ ಕ್ರಮಾಂಕದಲ್ಲಿ ಆಡುವ ಅವಕಾಶವನ್ನು ಪಡೆಯಲಿದ್ದಾರೆ. ಜೊತೆಗೆ ರಿಷಬ್ ಪಂತ್ ವಿಕೆಟ್ ಕೀಪರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಸರ್ಫರಾಜ್ ಖಾನ್ ಅವರಿಗೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿ ನೀಡಿದರೆ, ಕೆಎಲ್ ರಾಹುಲ್ ಆಡುವ ಹನ್ನೊಂದರಿಂದ ಹೊರಗುಳಿಯಬೇಕಾಗುತ್ತದೆ. ಈ ಇಬ್ಬರ ನಡುವೆ 6ನೇ ಕ್ರಮಾಂಕದಲ್ಲಿ ಆಡಲು ಪೈಪೋಟಿ ಇದೆ.

ವೇಗದ ಬೌಲಿಂಗ್ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‌ಗೆ ಪಾರ್ದಪಣೆ ಮಾಡುವ ತವಕದಲ್ಲಿದ್ದಾರೆ. ಒಂದು ವೇಳೆ ಅವರಿಗೆ ಆಡುವ ಅವಕಾಶ ಸಿಕ್ಕರೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಬಹುದು. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಭಾರತಕ್ಕೆ ನೆರವಾಗಬಹುದು. ಅವರು ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿ.

ಮತ್ತೊಂದೆಡೆ ವಾಷಿಂಗ್ಟನ್ ಸುಂದರ್ ಅವರನ್ನು ಏಕೈಕ ಸ್ಪಿನ್ ಬೌಲರ್ ಆಗಿ ಆಡುವ ಹನ್ನೊಂದರಲ್ಲಿ ಕಾಣಬಹುದು. ಇಂತಹ ಪರಿಸ್ಥಿತಿಯಲ್ಲಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಆಡುವ ಹನ್ನೊಂದರಿಂದ ಹೊರಗುಳಿಯಬೇಕಾಗುತ್ತದೆ. ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರ ಪ್ರಸ್ತುತ ಫಾರ್ಮ್ ಬಗ್ಗೆ ಪ್ರಶ್ನೆಗಳಿವೆ. ಹೀಗಿರುವಾಗ ಆಸ್ಟ್ರೇಲಿಯಾದ ವೇಗದ ಪಿಚ್‌ಗಳಲ್ಲಿ ವಿಕೆಟ್ ಕಬಳಿಸಲು ಸಾಧ್ಯವಾಗುವುತ್ತದಾ ಎಂಬ ಅನುಮಾನಗಳಿವೆ. ಜೊತೆಗೆ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶದೀಪ್ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ವೇಗದ ಬೌಲರ್‌ಗಳಾಗಿ ಆಡಲಿದ್ದಾರೆ.

ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ನಾಯಕ), ಮೊಹಮ್ಮದ್ ಸಿರಾಜ್, ಆಕಾಶದೀಪ್.

Story first published: Tuesday, November 12, 2024, 13:04 [IST]
Other articles published on Nov 12, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+