ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 6 ರಿಂದ ಪ್ರಾರಂಭವಾಗಲಿದ್ದು, ಟೀಮ್ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡಲಿದೆ. ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸಲು ಈ ಏಕದಿನ ಸರಣಿ ಉತ್ತಮ ಅವಕಾಶವಾಗಿದೆ. ಈ ಸರಣಿಯ ಮೊದಲ ಏಕದಿನ ಪಂದ್ಯವು ಗುರುವಾರ ಅಂದರೆ ಫೆಬ್ರವರಿ 6 ರಂದು ನಾಗ್ಪುರದಲ್ಲಿ ನಡೆಯಲಿದೆ.
ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಸ್ಟಾರ್ ಆಟಗಾರರಿಂದ ಕಂಗೊಳಿಸುತ್ತಿದೆ. ಈ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 1:30 ಗಂಟೆಗೆ ಆರಂಭವಾಗಲಿದೆ. ಇದೀಗ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಲು ಭಾರತ ತಂಡ ನಾಗ್ಪುರ ತಲುಪಿದೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಮತ್ತು ಇತರ ಆಟಗಾರರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ . ಈ ವೇಳೆ ವಿರಾಟ್ ಮತ್ತು ರೋಹಿತ್ ಸ್ಟೈಲಿಸ್ಟ್ ಆಗಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ರೋಹಿತ್ ಮತ್ತು ವಿರಾಟ್ ಫಾರ್ಮ್‌ಗೆ ಮರಳುವ ನಿರೀಕ್ಷೆಯಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್ ರಣಜಿ ಟ್ರೋಫಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಇದೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಇಬ್ಬರು ಅಬ್ಬರಿಸುವ ನಿರೀಕ್ಷೆಯಲ್ಲಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಿದ್ದಾರೆ.
IND vs ENG: ಯುವರಾಜ್ ಸಿಂಗ್ ಬಯಸಿದ್ದನ್ನು ನಾನು ಮಾಡಿದ್ದೇನೆ; ಅಭಿಷೇಕ್ ಶರ್ಮಾ
ಏಕದಿನ ಸರಣಿಗೂ ಮುನ್ನ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಸೋಲಿಸಿದೆ. ಇದೀಗ ರೋಹಿತ್ ಶರ್ಮಾ ಪಡೆಗೆ ಆಂಗ್ಲರ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಯೋಜನೆಯಲ್ಲಿದೆ.
ಈ ಸರಣಿಯಲ್ಲಿ ಭಾರತದ ಮಧ್ಯಮ ಕ್ರಮಾಂಕದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ಅವರಿಗೂ ಕಠಿಣ ಪರೀಕ್ಷೆ ಎದುರಾಗಿದೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ.
ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ- 6 ಫೆಬ್ರವರಿ, ನಾಗ್ಪುರ
ಎರಡನೇ ಏಕದಿನ- 9 ಫೆಬ್ರವರಿ, ಕಟಕ್
ಮೂರನೇ ಏಕದಿನ- 12 ಫೆಬ್ರವರಿ, ಅಹಮದಾಬಾದ್