For Quick Alerts
ALLOW NOTIFICATIONS  
For Daily Alerts
 

Rishabh Pant: ಇತಿಹಾಸ ಬರೆದ ರಿಷಭ್‌ ಪಂತ್‌: ಇಲ್ಲಿದೆ ದಾಖಲೆಗಳ ಪಟ್ಟಿ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಆಂಡರ್ಸನ್‌-ತೆಂಡೂಲ್ಕರ್ ಸರಣಿಯ ಮೊದಲ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ತಂಡದ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡುವಲ್ಲಿ ಸಫಲರಾಗಿದ್ದಾರೆ. ಇದೇ ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್‌ ಪಂತ್ ಅಮೋಘ ಪ್ರದರ್ಶನ ನೀಡಿ ದಾಖಲೆ ಬರೆದಿದ್ದಾರೆ. ಎರಡನೇ ಇನಿಂಗ್ಸ್‌ನಲ್ಲೂ ರಿಷಭ್‌ ಪಂತ್‌ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದರು. ಈ ಮೂಲಕ ಇಂಗ್ಲೆಂಡ್‌ನಲ್ಲಿ ಒಂದೇ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಭಾರತದ ಮೊದಲ ಆಟಗಾರ ಎಂಬ ಖ್ಯಾತಿಗೆ ರಿಷಭ್ ಪಂತ್ ಪಾತ್ರರಾಗಿದ್ದಾರೆ.

ಮೊದಲ ಇನಿಂಗ್ಸ್‌ನಲ್ಲಿ ನೀಡಿದಂತೆ ಎರಡನೇ ಇನಿಂಗ್ಸ್‌ನಲ್ಲೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಪಂತ್‌, ತಮ್ಮ ನೈಜ್ಯ ಆಟವನ್ನು ಆಡಿದರು. ಅರ್ಧಶತಕ ಬಾರಿಸುತ್ತಿದ್ದಂತೆ ರಿಷಭ್‌ ಪಂತ್‌ ಗೇರ್ ಶಿಫ್ಟ್‌ ಮಾಡಿ ಬ್ಯಾಟ್ ಮಾಡಿದರು. ಅಲ್ಲದೆ ಹೆಡಿಂಗ್ಲಿ ಅಂಗಳದಲ್ಲಿ ರಿಷಭ್‌ ಪಂತ್‌ ಇತಿಹಾಸದ ಪುಟದಲ್ಲಿ ತಮ್ಮ ಹೆಸರನ್ನು ನಮೂದಿಸಿದರು. ರಿಷಭ್‌ ಪಂತ್‌ 140 ಎಸೆತಗಳಲ್ಲಿ 15 ಬೌಂಡರಿ, 3 ಸಿಕ್ಸರ್ ಸಹಾಯದಿಂದ 118 ರನ್‌ ಬಾರಿಸಿ ಅಬ್ಬರಿಸಿದರು. ಈ ಮೂಲಕ ರಿಷಭ್‌ ಪಂತ್‌ ಹಲವು ದಾಖಲೆಗಳನ್ನು ಬರೆದರು.

Team India Rishabh Pant s Historic Hundred Lights Up Headingley Test

ಲೀಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ರಿಷಭ್‌ ಪಂತ್‌ ಎದುರಾಳಿ ತವರಿನಲ್ಲಿ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಮೊದಲ ವಿಕೆಟ್‌ ಕೀಪರ್‌ ಎಂಬ ಹಿರಿಮೆ ತಮ್ಮದಾಗಿಸಿಕೊಂಡರು. ಈ ವರೆಗೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ ಕೀಪರ್‌ ಸಹ ಈ ಸಾಧನೆ ಮಾಡಿರಲಿಲ್ಲ. ಇನ್ನು ಒಟ್ಟಾರೆಯಾಗಿ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಶ್ರೇಯ ತಮ್ಮದಾಗಿಸಿಕೊಂಡಿದ್ದರು. ಇದಕ್ಕೂ ಮೊದಲು ಜಿಂಬಾಬ್ವೆ ತಂಡದ ವಿಕೆಟ್ ಕೀಪರ್ ಆಂಡಿ ಫ್ಲಾವರ, ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್‌ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಾಧನೆ ಮಾಡಿದ್ದರು.

ಟೀಮ್ ಇಂಡಿಯಾ ಪರ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಏಳನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರಿಗೂ ಮುನ್ನ ಸುನಿಲ್ ಗವಾಸ್ಕರ್‌, ರಾಹುಲ್ ದ್ರಾವಿಡ್‌, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ವಿಜಯ್ ಹಜಾರೆ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದಾರೆ.

ಪಂದ್ಯದ ಚಿತ್ರಣ

ಸೋಮವಾರ 2 ವಿಕೆಟ್‌ಗೆ 90 ರನ್‌ಗಳಿಂದ ಆಟ ಮುಂದುವರೆಸಿದ ಭಾರತ 364 ರನ್‌ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಆರಂಭಿಕ ಕೆಎಲ್ ರಾಹುಲ್ 18 ಬೌಂಡರಿ ನೆರವಿನಿಂದ 137 ರನ್‌ ಸಿಡಿಸಿದರೆ, ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್‌ 118 ರನ್‌ ಬಾರಿಸಿದರು. ಉಳಿದಂತೆ ಕರುಣ್‌ ನಾಯರ್‌ 20, ರವೀಂದ್ರ ಜಡೇಜಾ ಅಜೇಯ 25 ರನ್‌ ಬಾರಿಸಿದರು. ಉಳಿದ ಬ್ಯಾಟರ್‌ಗಳು ರನ್‌ ಕಲೆ ಹಾಕಲಿಲ್ಲ. ಭಾರತ ಕೊನೆಯ ಐದು ವಿಕೆಟ್‌ಗಳನ್ನು 31 ರನ್‌ಗಳ ಅಂತರದಲ್ಲಿ ಕಳೆದುಕೊಂಡಿತು. ಇಂಗ್ಲೆಂಡ್‌ ಪರ ಬ್ರೈಡನ್ ಕಾರ್ಸೆ, ಜೋಶ್‌ ಟಂಗ್‌ ತಲಾ ಮೂರು ವಿಕೆಟ್ ಪಡೆದರು. ಟೀಮ್ ಇಂಡಿಯಾ 371 ರನ್‌ಗಳ ಗುರಿಯನ್ನು ಇಂಗ್ಲೆಂಡ್‌ಗೆ ನೀಡಿದೆ.

Story first published: Monday, June 23, 2025, 22:42 [IST]
Other articles published on Jun 23, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+