ಟೆಸ್ಟ್‌ ಕ್ರಿಕೆಟ್‌ನಲ್ಲಿ ಇನ್ನೂ ಆಡದ ಟೀಮ್ ಇಂಡಿಯಾದ 8 ಸಕ್ರಿಯ ಕ್ರಿಕೆಟರ್‌ಗಳು ಇವರು!

ಬೆಂಗಳೂರು, ಆಗಸ್ಟ್ 6: ಭಾರತೀಯ ಕ್ರಿಕೆಟ್ ತಂಡದಲ್ಲಿ ಆಟಗಾರರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಸಾಕಷ್ಟು ಯುವ ಆಟಗಾರರು ತಂಡದಲ್ಲಿ ಸ್ಥಾನವನ್ನು ಅವಕಾಶವನ್ನು ಪಡೆಯುತ್ತಿದ್ದಾರೆ. ಟೀಮ್ ಇಂಡಿಯಾದಲ್ಲಿರುವ ಈ ಪ್ರಮಾಣದ ಪ್ರತಿಭೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಒಂದೇ ಬಾರಿಗೆ ಎರಡು ಪ್ರತ್ಯೇಕ ಮಾದರಿಯ ಸರಣಿಯನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿತ್ತು. ಒಂದು ತಂಡ ಶ್ರೀಲಂಕಾದಲ್ಲಿ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾಗವಹಿಸಿದ್ದರೆ ಮತ್ತೊಂದು ತಂಡ ಟೆಸ್ಟ್ ಸರಣಿಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ನಲ್ಲಿತ್ತು. ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಪ್ರತಿಭೆಗಳನ್ನು ಪರಿಚಯಿಸುವಲ್ಲಿ ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್ ಎರಡು ಕೂಡ ಸಾಕಷ್ಟು ಸಹಾಯಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಟೀಮ್ ಇಂಡಿಯಾಗೆ ಆಯ್ಕೆಯಾಗುತ್ತಿರುವ ಬಹುತೇಕ ಆಟಗಾರರು ಈಗ ಐಪಿಎಲ್‌ನಲ್ಲಿ ನೀಡುವ ಅದ್ಭುತ ಪ್ರದರ್ಶನದಿಂದಾಗಿ ಬೆಳಕಿಗೆ ಬಂದು ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುತ್ತಾರೆ. ಇವರೆಲ್ಲಾ ಸಹಜವಾಗಿಯೇ ಆರಂಭದಲ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಆಯ್ಕೆಯಾಗುತ್ತಾರೆ. ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಕಣಕ್ಕಿಳಿದರೂ ಟೆಸ್ಟ್ ಕ್ರಿಕೆಟ್‌ನಲ್ಲಿ ಅವಕಾಶವನ್ನು ಪಡೆದುಕೊಳ್ಳಲು ಈ ಆಟಗಾರರು ಬಹಳ ಕಾಲ ಕಾಯಬೇಕಾಗುತ್ತದೆ.

ಟೋಕಿಯೋ ಒಲಿಂಪಿಕ್ಸ್: ರಸ್ಲರ್ ಭಜರಂಗ್ ಪೂನಿಯಾ ಸೆಮಿಫೈನಲ್‌ಗೆ ಪ್ರವೇಶಟೋಕಿಯೋ ಒಲಿಂಪಿಕ್ಸ್: ರಸ್ಲರ್ ಭಜರಂಗ್ ಪೂನಿಯಾ ಸೆಮಿಫೈನಲ್‌ಗೆ ಪ್ರವೇಶ

ಭಾರತೀಯ ಕ್ರಿಕೆಟ್ ತಂಡದ ಸೀಮಿತ ಓವರ್‌ಗಳ ತಂಡದಲ್ಲಿ ಅವಕಾಶ ಪಡೆದಿದ್ದರೂ ಟೆಸ್ಟ್ ಕ್ಯಾಪ್ ಧರಿಸಲು ಕಾಯುತ್ತಿರುವ ಭಾರತ ಕ್ರಿಕೆಟ್ ತಂಡದ ಆಟಗಾರರ ಯಾರು? ಕನಿಷ್ಟ 20 ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದರೂ ಟೆಸ್ಟ್ ಕ್ರಿಕೆಟ್‌ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಆಟಗಾರರ ಪಟ್ಟಿ ಇಲ್ಲಿದೆ.

1. ವೈಟ್‌ಬಾಲ್ ಕ್ರಿಕೆಟ್‌ನ ಪ್ರಮುಖ ಆಟಗಾರ ಯುಜುವೇಂದ್ರ ಚಾಹಲ್

1. ವೈಟ್‌ಬಾಲ್ ಕ್ರಿಕೆಟ್‌ನ ಪ್ರಮುಖ ಆಟಗಾರ ಯುಜುವೇಂದ್ರ ಚಾಹಲ್

ಭಾರತೀಯ ಕ್ರಿಕೆಟ್‌ನ ಅತ್ಯಂತ ಪ್ರಖ್ಯಾತ ಆಟಗಾರರಲ್ಲಿ ಒಬ್ಬರಾದವರು ಸ್ಪಿನ್ನರ್ ಯುಜುವೇಂದ್ರ ಚಾಹಲ್. ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರವಾಗಿ ಇವರು ಆಡುತ್ತಿದ್ದಾರೆ. ಚಾಹಲ್ ಭಾರತೀಯ ಕ್ರಿಕೆಟ್ ತಮಡದ ಪರವಾಗಿ ಈವರೆಗೆ 56 ಏಕದಿನ ಹಾಗೂ 49 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರು ಈಗಾಗಲೇ 150ಕ್ಕೂ ಅಧಿಕ ವಿಕೆಟ್ ಕಬಳಿಸಿದ್ದಾರೆ. ಆದರೆ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯಲು ಅವರಿಂದ ಈವರೆಗೆ ಸಾಧ್ಯವಾಗಿಲ್ಲ.

2. ಆಲ್‌ರೌಂಡರ್ ಕೃನಾಲ್ ಪಾಂಡ್ಯ

2. ಆಲ್‌ರೌಂಡರ್ ಕೃನಾಲ್ ಪಾಂಡ್ಯ

ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ. ಹಾರ್ದಿಕ್ ಪಾಂಡ್ಯ ಅವರಂತೆಯೇ ಕೃನಾಲ್ ಪಾಂಡ್ಯ ಕೂಡ ಆಲ್‌ರೌಂಡರ್. ಎಡಗೈ ಬೌಲರ್ ಹಾಗೂ ಎಡಗೈ ಬ್ಯಾಟ್ಸ್‌ಮನ್ ಆಗಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಮ್ಮ ಚಾಕಚಕ್ಯತೆಯನ್ನು ಪ್ರದರ್ಶಿಸಿದ್ದಾರೆ ಕೃನಾಲ್ ಪಾಂಡ್ಯ. ಭಾರತೀಯ ಕ್ರಿಕೆಟ್ ತಂಡದ ಪರವಾಗಿ ಕೃನಾಲ್ ಈವರೆಗೆ ಐದು ಏಕದಿನ ಪಂದ್ಯಗಳಲ್ಲಿ ಹಾಗೂ 19 ಟಿ20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಈ ಎರಡು ಮಾದರಿಯಲ್ಲಿಯೂ ಕೃನಾಲ್ ಉತ್ತಮ ಆಟವನ್ನು ಪ್ರದರ್ಶಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಆಟವನ್ನು ಪ್ರದರ್ಶಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ಕೃನಾಲ್ ಪಾಂಡ್ಯ ಆಡುವ ಅವಕಾಶ ಗಳಿಸುವ ಸಾಧ್ಯತೆಯಿದೆ.

3. 2019ರ ವಿಶ್ವಕಪ್ ತಂಡದ ಸದಸ್ಯ ವಿಜಯ್ ಶಂಕರ್

3. 2019ರ ವಿಶ್ವಕಪ್ ತಂಡದ ಸದಸ್ಯ ವಿಜಯ್ ಶಂಕರ್

ಈ ಪಟ್ಟಿಯಲ್ಲಿರುವ ಮತ್ತೋರ್ವ ಆಲ್‌ರೌಂಡರ್ ಆಟಗಾರ ತಮಿಳುನಾಡು ಮೂಲದ ವಿಜಯ್ ಶಂಕರ್. ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿರುವ ವಿಜಯ್ ಶಂಕರ್ 2019ರ ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಸಂಪಾದಿಸಿದ್ದರು. ವಿಜಯ್ ಶಂಕರ್ ಈವರೆಗೆ 12 ಏಕದಿನ ಪಂದ್ಯಗಳಲ್ಲಿ ಹಾಗೂ 9ಟಿ20 ಪಂದ್ಯಗಳಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದಾರೆ. ಆದರೆ ಟೆಸ್ಟ್ ಕರೆಯನ್ನು ಈವರೆಗೂ ವಿಜಯ್ ಶಂಕರ್ ಪಡೆಯಲು ಸಾಧ್ಯವಾಗಿಲ್ಲ.

4. ವೇಗಿ ಖಲೀಲ್ ಅಹ್ಮದ್

4. ವೇಗಿ ಖಲೀಲ್ ಅಹ್ಮದ್

ಭಾರತದ ಉತ್ತಮ ಎಡಗೈ ವೇಗದ ಬೌಲರ್‌ಗಳಲ್ಲಿ ಖಲೀಲ್ ಅಹ್ಮದ್ ಕೂಡ ಒಬ್ಬರು. ಟಿ20 ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚುವಲ್ಲಿ ಖಲೀಲ್ ಯಶಸ್ವಿಯಾಗಿದ್ದಾರೆ. ಖಲೀಲ್ ಅಹ್ಮದ್ ಈವರೆಗೆ ಭಾರತೀಯ ಕ್ರಿಕೆಟ್ ತಂಡದ ಪರವಾಗಿ 11 ಏಕದಿನ ಹಾಗೂ 14 ಟಿ20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. ಅತಿ ಶೀಘ್ರವಾಗಿ ಭಾರತೀಯ ಟೆಸ್ಟ್ ತಂಡದಲ್ಲಿಯೂ ಕಾಣಿಸಿಕೊಳ್ಳುವ ಗುರಿಯನ್ನು ಹೊಂದಿದ್ದಾರೆ ಖಲೀಲ್ ಅಹ್ಮದ್.

5. ಮಧ್ಯಮ ಕ್ರಮಾಂಕದ ಪ್ರಮುಖ ದಾಂಡಿಗ ಶ್ರೇಯಸ್ ಐಯ್ಯರ್

5. ಮಧ್ಯಮ ಕ್ರಮಾಂಕದ ಪ್ರಮುಖ ದಾಂಡಿಗ ಶ್ರೇಯಸ್ ಐಯ್ಯರ್

ಪ್ರಸಕ್ತ ಭಾರತೀಯ ಕ್ರಿಕೆಟ್ ತಂಡದ ಉತ್ತಮ ಮಧ್ಯಮ ಕ್ರಮಾಂಕದ ಆಟಗಾರರ ಆಟಗಾರರಲ್ಲಿ ಒಬ್ಬರು. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ತಂಡದ ನಾಯಕನಾಗಿಯೂ ಜವಾಬ್ಧಾರಿ ಬಹಿಸಿಕೊಂಡ ಅನುಭವ ಹೊಂದಿದ್ದಾರೆ. ಶ್ರೇಯಸ್ ಐಯ್ಯರ್ ಈಗಾಗಲೇ ಐವತ್ತಕ್ಕೂ ಅಧಿಕ ಅಂತಾರಾಷ್ಟ್ರೀಯ ಸೀಮಿತ ಓವರ್‌ಗಳ ಪಂದ್ಯಗಳನ್ನು ಆಡಿದ್ದಾರೆ. ಪ್ರಥಮದರ್ಜೆ ಕ್ರಿಕೆಟ್‌ನಲ್ಲಿಯೂ 50ಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಈಗ ಶ್ರೇಯಸ್ ಐಯ್ಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಯಾವಾಗ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

6. ಕನ್ನಡಿಗ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ

6. ಕನ್ನಡಿಗ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ

ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಮಧ್ಯಮ ಕ್ರಮಾಂಕದ ಆಟಗಾರ ಮನೀಶ್ ಪಾಂಡೆ. 2008ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಡಿದ ಐಸಿಸಿ ಅಂಡರ್‌ 19 ವಿಶ್ವಕಪ್‌ನ ವಿಜೇತ ತಂಡದ ಸದಸ್ಯರಾಗಿದ್ದರು ಮನೀಶ್ ಪಾಂಡೆ. ಈ ಬಲಗೈ ಬ್ಯಾಟ್ಸ್‌ಮನ್ ಭಾರತ ತಂಡದ ಪರವಾಗಿ 29 ಏಕದಿನ ಪಂದ್ಯಗಳಲ್ಲಿ ಹಾಗೂ 39 ಟಿ20 ಪಂದ್ಯಗಳಲ್ಲಿ ಭಾಗವಹಿಸಿದ್ದಾರೆ. ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ6000ಕ್ಕೂ ಅಧಿಕ ರನ್‌ಗಳಿಸುವ ಮೂಲಕ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಭಾರತದ ಟೆಸ್ಟ್ ಕ್ರಿಕೆಟ್ ತಂಡದಲ್ಲಿಯೂ ಅವಕಾಶ ಗಿಟ್ಟಿಸಿಕೊಳ್ಳಲು ಸುದೀರ್ಘ ಕಾಲದಿಂದ ಪ್ರಯತ್ನ ಮುಂದುವರಿಸಿದ್ದಾರೆ.

7. ಅನುಭವಿ ಕೇದಾರ್ ಜಾಧವ್

7. ಅನುಭವಿ ಕೇದಾರ್ ಜಾಧವ್

2019ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಮತ್ತೋರ್ವ ಆಟಗಾರ ಕೇದಾರ್ ಜಾಧವ್. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 80ಕ್ಕೂ ಅಧಿಕ ಪಂದ್ಯಗಳಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದಾರೆ ಕೇದಾರ್ ಜಾಧವ್. ಏಕದಿನ ಕ್ರಿಕೆಟ್‌ನಲ್ಲಿ 73 ಪಂದ್ಯಗಳನ್ನು ಆಡಿದ್ದರೆ ಟಿ20 ಮಾದರಿಯಲ್ಲಿ 9 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಸದ್ಯ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಸ್ಥಾನವನ್ನು ಪಡೆಯಲು ವಿಫಲವಾಗಿದ್ದಾರೆ ಅನುಭವಿ ಜಾಧವ್. 36ರ ಹರೆಯದ ಜಾಧವ್ ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನಿಡುವ ಮೂಲಕ ಟೆಸ್ಟ್ ಕ್ರಿಕೆಟ್‌ಗೂ ಪದಾರ್ಪಣೆ ಮಾಡುವ ಭರವಸೆಯನ್ನು ಹುಟ್ಟುಹಾಕಿದ್ದರು. ಆದರೆ ಅದರಲ್ಲಿ ವಿಫಲವಾಗಿದ್ದಾರೆ.

ಟ್ವೀಟ್ ಮೂಲಕ ಟ್ರೊಲ್ ಆದ ವಿರಾಟ್ ಕೊಹ್ಲಿ !! | Oneindia Kannada
8. ವೇಗಿ ಮೋಹಿತ್ ಶರ್ಮಾ

8. ವೇಗಿ ಮೋಹಿತ್ ಶರ್ಮಾ

2015ರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಿದ್ದ ಭಾರತದ ಉತ್ತಮ ಬೌಲರ್‌ಗಳಲ್ಲಿ ಒಬ್ಬರು ಮೋಹಿತ್ ಶರ್ಮಾ. ಅನುಭವಿ ಕೇದಾರ್ ಜಾಧವ್ ರೋತಿಯಲ್ಲಿಯೇ ಮೋಹಿತ್ ಶರ್ಮಾ ಈಗ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. 32ರ ಹರೆಯದ ಮೋಹಿತ್ ಶರ್ಮಾ ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ 127 ವಿಕೆಟ್ ಪಡೆದು ಮಿಂಚಿದ್ದಾರೆ. ತನ್ನ ಪ್ರದರ್ಶನವನ್ನು ಉತ್ತಮಪಡಿಸಿಕೊಂಡರೆ ಭಾರತೀಯ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಅವಕಾಶ ಹೊಂದಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, August 6, 2021, 14:23 [IST]
Other articles published on Aug 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X