For Quick Alerts
ALLOW NOTIFICATIONS  
For Daily Alerts
 

ಅರ್ಜುನ್‌ ಪ್ರಶಸ್ತಿ ರೇಸ್‌ನಲ್ಲಿ ಟೀಮ್ ಇಂಡಿಯಾದ ಬೌಲರ್ ಮೊಹಮ್ಮದ್ ಶಮಿ

ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ರೇಸ್‌ನಲ್ಲಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡಿದ್ದರು. ಇದರಿಂದಾಗಿ ವೇಗದ ಬೌಲರ್‌ಗೆ ಪ್ರಶಸ್ತಿ ನೀಡಲು ಶಿಫಾರಸು ಮಾಡಲಾಗಿದೆ.

ಎಎನ್‌ಐ ವರದಿಯ ಪ್ರಕಾರ, ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ ನೀಡುವಂತೆ ಬಿಸಿಸಿಐ ವಿಶೇಷವಾಗಿ ಕ್ರೀಡಾ ಸಚಿವಾಲಯಕ್ಕೆ ಮನವಿ ಮಾಡಿದೆ. ಈ ಹಿಂದೆ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಶಮಿ ಹೆಸರು ಇರಲಿಲ್ಲ. 33ರ ಹರೆಯದ ಆಟಗಾರ ಇತ್ತೀಚೆಗೆ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆಕರ್ಷಕ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಅಲ್ಲದೆ ಏಕದಿನ ವಿಶ್ವಕಪ್‌ನಲ್ಲಿ ಶಮಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Team India’s Bowler Mohammed Shami in the Arjuna Award Race

ಶಮಿ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದ್ದು, ಅಂಗಳದಲ್ಲಿ ಅಬ್ಬರದ ನಡೆಸಲು ಸಜ್ಜಾಗಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್‌ ತನ್ನ ಕೆಲಸದ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಸೀಮಿತ ಓವರ್‌ಗಳ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಡಿಸೆಂಬರ್ 26 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಶಮಿಯನ್ನು ಕಾಣಬಹುದು.

ಬಲಗೈ ವೇಗದ ಬೌಲರ್ 2023 ರ ವಿಶ್ವಕಪ್‌ನಲ್ಲಿ 7 ಪಂದ್ಯಗಳಲ್ಲಿ 10.70 ಸರಾಸರಿ ಮತ್ತು 12.20 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 24 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ತಮ್ಮ ಅಸಾಧಾರಣ ಪ್ರದರ್ಶನದಿಂದಾಗಿ ಶಮಿ ದಕ್ಷಿಣ ಆಫ್ರಿಕಾ ವಿರುದ್ಧದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ 18 ರನ್‌ಗಳಿಗೆ 2 ವಿಕೆಟ್ ಪಡೆದರು.

Team India’s Bowler Mohammed Shami in the Arjuna Award Race

ಮೆಗಾ ಈವೆಂಟ್‌ನ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ನ್ಯೂಜಿಲೆಂಡ್ ವಿರುದ್ಧ 57 ರನ್‌ಗಳಿಗೆ ಒಟ್ಟು 7 ವಿಕೆಟ್‌ಗಳನ್ನು ಪಡೆದರು. ಇದು ಏಕದಿನ ವಿಶ್ವಕಪ್‌ನಲ್ಲಿ ಯಾವುದೇ ಭಾರತೀಯ ಬೌಲರ್‌ನ ಅತ್ಯುತ್ತಮ ಪ್ರದರ್ಶನ. ಇದಲ್ಲದೆ, ಅವರು ಇಡೀ ಪಂದ್ಯಾವಳಿಯಲ್ಲಿ ಮೂರು ಬಾರಿ 5 ವಿಕೆಟ್ ಪಡೆದರು. ಶಮಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 18 ರನ್‌ಗಳಿಗೆ 5 ವಿಕೆಟ್ ಮತ್ತು ನ್ಯೂಜಿಲೆಂಡ್ ವಿರುದ್ಧದ ರೌಂಡ್ ರಾಬಿನ್ ಹಂತದಲ್ಲಿ 54 ರನ್‌ಗಳಿಗೆ 5 ವಿಕೆಟ್ ಪಡೆದರು.

Story first published: Wednesday, December 13, 2023, 17:43 [IST]
Other articles published on Dec 13, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+