ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯಲಿರುವ ಭಾರತ ಸಂಭಾವ್ಯ ತಂಡ; ಇಬ್ಬರು ಪ್ರಮುಖರು ತಂಡದಿಂದ ಔಟ್!

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿರುವ ಟೀಮ್ ಇಂಡಿಯಾ ಹರಿಣಗಳ ನೆಲದಲ್ಲಿ ನಡೆದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೆ ಒಳಗಾಗಿದೆ. ಹೌದು, ಭಾರೀ ನಿರೀಕ್ಷೆಯೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿ ಸೋಲುವುದು ಮಾತ್ರವಲ್ಲದೆ ಈ ಬಾರಿ ಏಕದಿನ ಸರಣಿಯಲ್ಲಿಯೂ ಕೂಡ ಸೋತು ಅವಮಾನಕ್ಕೊಳಗಾಗಿದೆ. ಅದರಲ್ಲಿಯೂ ಏಕದಿನ ಸರಣಿಯಲ್ಲಿ ಎಲ್ಲ 3 ಪಂದ್ಯಗಳನ್ನು ಕೂಡ ಸೋಲುವುದರ ಮೂಲಕ ವೈಟ್ ವಾಷ್ ಆದ ಟೀಮ್ ಇಂಡಿಯಾ ಭಾರೀ ದೊಡ್ಡ ಮಟ್ಟದ ಟೀಕೆಗಳಿಗೆ ಗುರಿಯಾಗಿದೆ.

ಯುವರಾಜ್ ಸಿಂಗ್ ದಂಪತಿ ಮುದ್ದು ಮಗುವಿಗೆ ತಂದೆ - ತಾಯಿಯಾದ ಖುಷಿ ಹಂಚಿಕೊಂಡಿದ್ದು ಹೀಗೆಯುವರಾಜ್ ಸಿಂಗ್ ದಂಪತಿ ಮುದ್ದು ಮಗುವಿಗೆ ತಂದೆ - ತಾಯಿಯಾದ ಖುಷಿ ಹಂಚಿಕೊಂಡಿದ್ದು ಹೀಗೆ

ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತು ಭಾರಿ ಟೀಕೆಗಳನ್ನು ಎದುರಿಸುತ್ತಿರುವ ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಾಟ ನಡೆಸಲಿದ್ದು, 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಇನ್ನು ಈ ಸರಣಿಯಲ್ಲಿ ಭಾಗವಹಿಸಲು ವೆಸ್ಟ್ ಇಂಡೀಸ್ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ, ನಂತರ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯಲಿದೆ. ಇತ್ತಂಡಗಳ ನಡುವಿನ ಸೆಣಸಾಟ ಫೆಬ್ರವರಿ 6ರಂದು ನಡೆಯಲಿರುವ ಚೊಚ್ಚಲ ಏಕದಿನ ಪಂದ್ಯದ ಮೂಲಕ ಆರಂಭವಾಗಲಿದ್ದು, ಫೆಬ್ರವರಿ 20ರಂದು ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದ ಮೂಲಕ ಅಂತ್ಯಗೊಳ್ಳಲಿದೆ.

ಕಪ್ ಮುಖ್ಯನಾ? ದ್ರಾವಿಡ್, ಗಂಗೂಲಿ, ಸಚಿನ್, ರೋಹಿತ್ ಎಷ್ಟು ಕಪ್ ಗೆದ್ದಿದ್ದಾರೆ ಎಂದ ಮಾಜಿ ಕ್ರಿಕೆಟಿಗಕಪ್ ಮುಖ್ಯನಾ? ದ್ರಾವಿಡ್, ಗಂಗೂಲಿ, ಸಚಿನ್, ರೋಹಿತ್ ಎಷ್ಟು ಕಪ್ ಗೆದ್ದಿದ್ದಾರೆ ಎಂದ ಮಾಜಿ ಕ್ರಿಕೆಟಿಗ

ಇನ್ನು ಈ ವೆಸ್ಟ್ ಇಂಡೀಸ್ ಸರಣಿಗಳಲ್ಲಿ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಗಳು ಎದ್ದಿದ್ದವು. ಏಕೆಂದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಗಾಯದ ಸಮಸ್ಯೆಗೆ ಒಳಗಾಗಿ ತಂಡದಿಂದ ಹೊರಬಿದ್ದಿದ್ದ ರೋಹಿತ್ ಶರ್ಮಾ ಬದಲಾಗಿ ಹರಿಣಗಳ ನೆಲದಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಹಾಗೂ ರೋಹಿತ್ ಶರ್ಮಾ ಫಿಟ್ ಆದರೆ ಮಾತ್ರ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಸೇರಲು ಅನುಮತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿತ್ತು. ಹಾಗೂ ದಕ್ಷಿಣ ಆಫ್ರಿಕಾ ನೆಲದಲ್ಲಿ ಕಣಕ್ಕಿಳಿದಿದ್ದ ತಂಡವೇ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಕಣಕ್ಕಿಳಿಯಲಿದೆಯಾ ಎಂಬ ಪ್ರಶ್ನೆಗಳು ಹರಿದಾಡುತ್ತಿದ್ದವು. ಈ ಎಲ್ಲ ಪ್ರಶ್ನೆಗಳಿಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಬಹುದಾದ ಸಂಭಾವ್ಯ ತಂಡ ಈ ಕೆಳಕಂಡಂತಿರಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ಸಂಭಾವ್ಯ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ಸಂಭಾವ್ಯ ತಂಡ

ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ 3 ಪಂದ್ಯಗಳ ಏಕದಿನ ಸರಣಿಗೆ ಪ್ರಕಟವಾಗಲಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳಬಹುದಾದ ಆಟಗಾರರ ಪಟ್ಟಿ ಇಲ್ಲಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಐಯ್ಯರ್, ವೆಂಕಟೇಶ್ ಐಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಷಿ ಧವನ್, ಯುಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ , ಮೊಹಮ್ಮದ್ ಸಿರಾಜ್.

ರೋಹಿತ್ ಶರ್ಮಾ ನಾಯಕ

ರೋಹಿತ್ ಶರ್ಮಾ ನಾಯಕ

ಇನ್ನು ವೆಸ್ಟ್ ಇಂಡಿಸ್ ಸರಣಿ ಕುರಿತಾಗಿ ಅತಿ ಹೆಚ್ಚಾಗಿ ಕೇಳಿಬರುತ್ತಿದ್ದ ಪ್ರಶ್ನೆ ಎಂದರೆ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು. ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದ್ದು ರೋಹಿತ್ ಶರ್ಮಾ ನ್ಯಾಷನಲ್ ಕ್ರಿಕೆಟ್‌ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರೇ ಟೀಂ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಹಾಗೂ ಕೆಎಲ್ ರಾಹುಲ್ ಉಪನಾಯಕನಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ.

ಈ ಆಟಗಾರರು ತಂಡದಿಂದ ಔಟ್

ಈ ಆಟಗಾರರು ತಂಡದಿಂದ ಔಟ್

ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುವ ತಂಡದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದುಕೊಳ್ಳುವುದಿಲ್ಲ ಎನ್ನಲಾಗುತ್ತಿದೆ. ಬುಮ್ರಾ ಮತ್ತು ಮೊಹಮ್ಮದ್ ಶಮಿ ವಿಶ್ರಾಂತಿಗೆಂದು ತಂಡದಿಂದ ಹೊರಗುಳಿಯುತ್ತಿದ್ದರೆ, ಭುವನೇಶ್ವರ್ ಕುಮಾರ್ ಅವರನ್ನು ತಂಡದಿಂದ ಕೈಬಿಡಲಾಗಿದೆ ಹಾಗೂ ಗಾಯದ ಸಮಸ್ಯೆಗೊಳಗಾಗಿರುವ ರವಿಚಂದ್ರನ್ ಅಶ್ವಿನ್ ಕೂಡ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ.

Virat Kohli ಈಗಲೂ ಎಷ್ಟು ವರ್ಷ ಕ್ರಿಕೆಟ್ ಆಡಬಹುದು | Oneindia Kannada

For Quick Alerts
ALLOW NOTIFICATIONS
For Daily Alerts
Story first published: Wednesday, January 26, 2022, 17:19 [IST]
Other articles published on Jan 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X