ಇಂಗ್ಲೆಂಡ್ ವಿರುದ್ಧದ ಪ್ರಥಮ ಟಿ20 ಪಂದ್ಯಕ್ಕೂ ಹಾರ್ದಿಕ್ ಪಾಂಡ್ಯ ನಾಯಕ; ಕಣಕ್ಕಿಳಿಯಲ್ಲ ಕೊಹ್ಲಿ, ರೋಹಿತ್!

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚು ನಾಯಕರನ್ನು ಪ್ರಸ್ತುತವಾಗಿ ಹೊಂದಿರುವ ತಂಡವೆಂದರೆ ಅದು ಟೀಮ್ ಇಂಡಿಯಾ ಎಂದರೆ ತಪ್ಪಾಗಲಾರದು. ಏಕೆಂದರೆ ಎಲ್ಲಾ ಮಾದರಿಯ ಕ್ರಿಕೆಟ್ ತಂಡಕ್ಕೂ ರೋಹಿತ್ ಶರ್ಮಾ ಅವರೇ ನಾಯಕನಾಗಿ ಅಧಿಕೃತವಾಗಿ ನೇಮಕಗೊಂಡಿದ್ದರೂ ಸಹ ಇತ್ತೀಚಿನ ಕೆಲ ಸರಣಿಗಳಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ನಾಯಕರಾಗಿ ಮುನ್ನಡೆಸಿದ್ದಾರೆ.
ಅಷ್ಟು ಮಾತ್ರವಲ್ಲದೇ ಇದೀಗ ಇಂಗ್ಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾವನ್ನು ಜಸ್ ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ. ಹೌದು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಬೇಕಿದ್ದ ನಾಯಕ ರೋಹಿತ್ ಶರ್ಮಾ ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ಇದೀಗ ನಾಯಕತ್ವದ ಜವಾಬ್ದಾರಿ ತಂಡದ ಉಪನಾಯಕನಾಗಿದ್ದ ಜಸ್ ಪ್ರೀತ್ ಬೂಮ್ರಾ ಹೆಗಲಿಗೆ ಬಿದ್ದಿದೆ. ಹೀಗೆ ಮತ್ತೋರ್ವ ನೂತನ ನಾಯಕನನ್ನು ಪಡೆದ ಟೀಮ್ ಇಂಡಿಯಾ ಪಾಳೆಯದಿಂದ ಇದೀಗ ನಾಯಕತ್ವದ ಕುರಿತಾಗಿ ಮತ್ತೊಂದು ಆಶ್ಚರ್ಯಕರ ಸುದ್ದಿ ಹೊರಬಿದ್ದಿದೆ.
ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಪ್ರಥಮ ಟಿ ಟ್ವೆಂಟಿ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಮ್ ಇಂಡಿಯಾ ಕಣಕ್ಕಿಳಿಯಲಿದ್ದು, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಸೇರಿದಂತೆ ಇನ್ನೂ ಮುಂತಾದ ಹಲವಾರು ಪ್ರಮುಖ ಆಟಗಾರರು ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಇದೀಗ ಹೊರಬಿದ್ದಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಮುಂದೆ ಇದೆ ಓದಿ.

ಐರ್ಲೆಂಡ್ ಪ್ರವಾಸ ಕೈಗೊಂಡಿದ್ದ ತಂಡವೇ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ!
ಬಿಸಿಸಿಐನ ಬಲ್ಲ ಮೂಲವೊಂದು ತಿಳಿಸಿರುವ ಪ್ರಕಾರ ಇತ್ತೀಚೆಗಷ್ಟೇ ಐರ್ಲೆಂಡ್ ಪ್ರವಾಸವನ್ನು ಕೈಗೊಂಡು ವೈಟ್ ವಾಷ್ ಬಳಿದಿದ್ದ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿಯಲಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದೆ. ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಯಾವುದೇ ಆಟಗಾರರು ಸಹ ಇಂಗ್ಲೆಂಡ್ ವಿರುದ್ಧದ ಈ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬ ವಿಷಯವೂ ಕೂಡ ಬಹಿರಂಗವಾಗಿದೆ.

ದ್ವಿತೀಯ ಟಿ ಟ್ವೆಂಟಿ ಪಂದ್ಯಕ್ಕೆ ಮರಳಲಿದ್ದಾರೆ ಸ್ಟಾರ್ಸ್
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಎಲ್ಲಾ ಆಟಗಾರರು ಇಂಗ್ಲೆಂಡ್ ವಿರುದ್ಧದ ಪ್ರಥಮ ಟಿ ಟ್ವೆಂಟಿಗೆ ಅಲಭ್ಯರಾಗಲಿದ್ದು, ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಖಚಿತವಾಗಿ ಆಡಲಿದ್ದಾರೆ ಎಂದು ಬಿಸಿಸಿಐನ ಬಲ್ಲ ಮೂಲಗಳ ಮಾಹಿತಿ ತಿಳಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ, ರಿಷಭ್ ಪಂತ್, ಬುಮ್ರಾ ಹಾಗೂ ರವೀಂದ್ರ ಜಡೇಜಾ ಸೇರಿದಂತೆ ಇನ್ನೂ ಹಲವಾರು ಪ್ರಮುಖ ಕ್ರಿಕೆಟಿಗರು ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ ಮತ್ತು ರೋಹಿತ್ ಶರ್ಮಾ ಫಿಟ್ ಆದರೆ ಮಾತ್ರ ತಂಡಕ್ಕೆ ಮರಳಲಿದ್ದಾರೆ ಎಂಬ ಮಾಹಿತಿಯೂ ಕೂಡ ಹೊರ ಬಿದ್ದಿದೆ. ಈ ಮೂಲಕ ರೋಹಿತ್ ಶರ್ಮಾ ಅಲ್ಲಿಯವರೆಗೂ ಚೇತರಿಸಿಕೊಳ್ಳದೇ ಇದ್ದರೆ ತಂಡವನ್ನು ಯಾವ ಆಟಗಾರ ಸರಣಿಯ ಉಳಿದ ಪಂದ್ಯಗಳಲ್ಲಿ ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಇದೀಗ ಮೂಡಿದೆ.

ಆಟಗಾರರು ಹೊರಗುಳಿಯಲು ಕಾರಣವೇನು? ಪಂದ್ಯ ಯಾವಾಗ?
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಜುಲೈ 5ರಂದು ಮುಕ್ತಾಯಗೊಳ್ಳಲಿದ್ದು, 7ರಂದು ಪ್ರಥಮ ಟಿ ಟ್ವೆಂಟಿ ಪಂದ್ಯ ಆಯೋಜನೆಯಾಗಿದೆ. ಹೀಗಾಗಿ ಟೆಸ್ಟ್ ಪಂದ್ಯ ಮುಕ್ತಾಯವಾದ ಎರಡನೇ ದಿನಕ್ಕೆ ಟಿ ಟ್ವೆಂಟಿ ಪಂದ್ಯ ನಡೆಯುವುದರಿಂದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಆಟಗಾರರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದ್ದು ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ, ಹೀಗಾಗಿಯೇ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಮ್ ಇಂಡಿಯಾ ಪ್ರಥಮ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ ಎಂದು ಬಿಸಿಸಿಐನ ಮೂಲಗಳು ತಿಳಿಸಿವೆ.
ಇಂಗ್ಲೆಂಡ್ ಪ್ರವಾಸದ ಸಂಪೂರ್ಣ ವೇಳಾಪಟ್ಟಿ
• ಐದನೇ ಟೆಸ್ಟ್ ಪಂದ್ಯ ( ಮುಂದೂಡಲ್ಪಟ್ಟ ) - ಜುಲೈ 1 - 5: ಬರ್ಮಿಂಗ್ ಹ್ಯಾಮ್
• ಪ್ರಥಮ ಟಿ ಟ್ವೆಂಟಿ ಪಂದ್ಯ - ಜುಲೈ 7 - ಸೌತಾಂಪ್ಟನ್
• ದ್ವಿತೀಯ ಟಿ ಟ್ವೆಂಟಿ ಪಂದ್ಯ - ಜುಲೈ 9 - ಬರ್ಮಿಂಗ್ ಹ್ಯಾಮ್
• ತೃತೀಯ ಟಿ ಟ್ವೆಂಟಿ ಪಂದ್ಯ - ಜುಲೈ 10 - ನಾಟಿಂಗ್ ಹ್ಯಾಮ್
• ಪ್ರಥಮ ಏಕದಿನ ಪಂದ್ಯ - ಜುಲೈ 12 - ಓವಲ್
• ದ್ವಿತೀಯ ಏಕದಿನ ಪಂದ್ಯ - ಜುಲೈ 14 - ಲಾರ್ಡ್ಸ್
• ತೃತೀಯ ಏಕದಿನ ಪಂದ್ಯ - ಜುಲೈ 17 - ಮ್ಯಾಂಚೆಸ್ಟರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications