ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪ್ರಮುಖರಿಲ್ಲದ ಈ ತಂಡವನ್ನು ಇಟ್ಟುಕೊಂಡು ವಿಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆಲ್ಲುತ್ತಾ ಭಾರತ?

Team Indias strongest probable playing XI for the first ODI against West Indies

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಮುಖಭಂಗಕ್ಕೆ ಒಳಗಾಗಿತ್ತು. ಹೀಗೆ ಹರಿಣಗಳ ನೆಲದಲ್ಲಿನ ಹೀನಾಯ ಸೋಲಿನಿಂದ ಕಮ್ ಬ್ಯಾಕ್ ಮಾಡಬೇಕೆಂದರೆ ಇದೀಗ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 6ರಂದು ನಡೆಯಲಿರುವ ಚೊಚ್ಚಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕಾಗಿದೆ.

ಐಪಿಎಲ್ 2022 ಮೆಗಾ ಹರಾಜು: ಇಶಾನ್ ಕಿಶನ್ ಮೇಲೆ ಹಣದ ಹೊಳೆ ಹರಿಸಲಿವೆ ಈ 3 ಫ್ರಾಂಚೈಸಿಗಳುಐಪಿಎಲ್ 2022 ಮೆಗಾ ಹರಾಜು: ಇಶಾನ್ ಕಿಶನ್ ಮೇಲೆ ಹಣದ ಹೊಳೆ ಹರಿಸಲಿವೆ ಈ 3 ಫ್ರಾಂಚೈಸಿಗಳು

ಹೌದು, ಟೀಮ್ ಇಂಡಿಯಾ ತನ್ನ ಕಳೆದ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎಲ್ಲಾ 3 ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಗಿತ್ತು. ಈ ಹೀನಾಯ ಸೋಲಿನಿಂದ ಮರಳಿ ಯಶಸ್ಸಿನ ಹಾದಿಗೆ ಬರಬೇಕೆಂದರೆ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯದಲ್ಲಿ ಜಯ ಸಾಧಿಸಬೇಕಿದೆ ಹಾಗೂ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ 1000 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಪೂರೈಸಲಿದೆ. ಈ ಮೂಲಕ 1000 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ ವಿಶ್ವದ ಮೊದಲ ಕ್ರಿಕೆಟ್ ತಂಡ ಎಂಬ ದಾಖಲೆಯನ್ನು ಕೂಡ ಟೀಮ್ ಇಂಡಿಯಾ ಬರೆಯಲಿದೆ. ಹೀಗೆ ಈ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಟೀಮ್ ಇಂಡಿಯಾ ಈ ದಾಖಲೆಯನ್ನು ಮತ್ತಷ್ಟು ವಿಶೇಷವನ್ನಾಗಿ ಮಾಡಬೇಕಿದೆ. ಆದರೆ ತಂಡದ ಪ್ರಮುಖ ಆಟಗಾರರಾದ ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಮತ್ತು ಶ್ರೇಯಸ್ ಅಯ್ಯರ್ ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ಹಿನ್ನಡೆಯುಂಟಾಗಿದೆ. ಅಷ್ಟೇ ಅಲ್ಲದೆ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಸರಣಿಗೆ ಅಲಭ್ಯರಾಗಿರುವುದು ಹಾಗೂ ಕೆಎಲ್ ರಾಹುಲ್ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿರುವುದು ಕೂಡ ಹಿನ್ನಡೆಯನ್ನುಂಟು ಮಾಡಿದೆ. ಹೀಗೆ ಪ್ರಮುಖ ಆಟಗಾರರಿಲ್ಲದೇ ಕಣಕ್ಕಿಳಿಯಲಿರುವ ಈ ಕೆಳಕಂಡ ಟೀಮ್ ಇಂಡಿಯಾ ಉತ್ತಮ ಪ್ರದರ್ಶನವನ್ನು ನೀಡಿ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಇದೆ.

ಆರಂಭಿಕ ಆಟಗಾರರು

ಆರಂಭಿಕ ಆಟಗಾರರು

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಗೆ ಮರಳಿರುವುದು ತಂಡಕ್ಕೆ ಬಲ ತಂದಂತಾಗಿದೆ. ಈ ಮೂಲಕ ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದು ವಿಂಡೀಸ್ ವಿರುದ್ಧದ ಈ ಪಂದ್ಯಕ್ಕೆ ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಅಲಭ್ಯರಾಗಿರುವ ಕಾರಣ ರೋಹಿತ್ ಶರ್ಮಾ ಜತೆ ಮಯಾಂಕ್ ಅಗರ್ವಾಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ತಂಡದ ಕೆಲ ಪ್ರಮುಖ ಆಟಗಾರರು ಕೊರೊನಾ ಸೋಂಕಿಗೆ ಒಳಗಾದ ನಂತರ ಟೀಮ್ ಇಂಡಿಯಾ ಆಯ್ಕೆಗಾರರು ಮಯಾಂಕ್ ಅಗರ್ವಾಲ್ ಅವರನ್ನು ಭಾರತ ಏಕದಿನ ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

ಮಧ್ಯಮ ಕ್ರಮಾಂಕ

ಮಧ್ಯಮ ಕ್ರಮಾಂಕ

ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟ್ ಬೀಸಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಿದ್ದ ಶ್ರೇಯಸ್ ಅಯ್ಯರ್ ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ, ರಿಷಭ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಆಲ್ ರೌಂಡರ್ಸ್

ಆಲ್ ರೌಂಡರ್ಸ್

ತಂಡದ ಪ್ರಮುಖರು ಅಲಭ್ಯರಾಗಿರುವ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಈ ಏಕದಿನ ಪಂದ್ಯದ ಮೂಲಕ ದೀಪಕ್ ಹೂಡಾ ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನವನ್ನು ಆರಂಭಿಸಲು ಅವಕಾಶ ಲಭಿಸುತ್ತಿದೆ. ತಂಡದ ಪ್ರಮುಖ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಳ್ಳಲಿರುವ ದೀಪಕ್ ಹೂಡಾ ಆಲ್ ರೌಂಡರ್ ಆಟಗಾರನಾಗಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ. ಇನ್ನು ಮತ್ತೋರ್ವ ಆಲ್ ರೌಂಡರ್ ಆಟಗಾರನಾಗಿ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಒಳ್ಳೆಯ ಫಾರ್ಮ್ ಕಂಡುಕೊಂಡಿರುವ ವಾಷಿಂಗ್ಟನ್ ಸುಂದರ್ ವಿಂಡೀಸ್ ವಿರುದ್ಧದ ಈ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಅಬ್ಬರಿಸಬೇಕಿದೆ.

ಬೌಲರ್ಸ್

ಬೌಲರ್ಸ್

ಇನ್ನು ತಂಡದ ಪ್ರಮುಖ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಈ ಸರಣಿಯಿಂದ ವಿಶ್ರಾಂತಿಗೆಂದು ಹೊರಗುಳಿದಿದ್ದು ಟೂರ್ನಿ ಆರಂಭಕ್ಕೂ ಮುನ್ನವೇ ತಂಡದ ಮತ್ತೊಬ್ಬ ಬೌಲರ್ ನವದೀಪ್ ಸೈನಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಉಳಿದ ಬೌಲರ್‌ಗಳನ್ನು ಕಣಕ್ಕಿಳಿಸಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕುವ ಕೆಲಸ ಮಾಡಬೇಕಿದೆ. ಈ ಪಂದ್ಯದಲ್ಲಿ ದೀಪಕ್ ಚಹಾರ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಬೌಲರ್‌ಗಳಾಗಿ ಕಣಕ್ಕಿಳಿಯಲಿದ್ದು ಜವಾಬ್ದಾರಿಯುತ ಪ್ರದರ್ಶನವನ್ನು ನೀಡಲೇಬೇಕಾಗಿದೆ.

Story first published: Saturday, February 5, 2022, 9:47 [IST]
Other articles published on Feb 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X