IND vs SL: ಶ್ರೀಲಂಕಾ ಪ್ರವಾಸದ ಟೀಮ್ ಇಂಡಿಯಾ ವೇಳಾಪಟ್ಟಿ ರಿಲೀಸ್
ಜುಲೈ 11 ಗುರುವಾರ, ಐದು ಟಿ20 ಪಂದ್ಯಗಳ ಸರಣಿಗಾಗಿ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ. ಈಗಾಗಲೇ ಮೂರು ಪಂದ್ಯಗಳು ಮುಗಿದ್ದು, ಇದರಲ್ಲಿ ಭಾರತ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಇನ್ನುಳಿದ ಎರಡು ಪಂದ್ಯಗಳನ್ನೂ ಜಿಂಬಾಬ್ವೆ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇನ್ನೊಂದೆಡೆ ಮೊದಲ ಬಾರಿಗೆ ಶುಭಮನ್ ಗಿಲ್ ನಾಯಕನಾಗಿ ಮುನ್ನಡೆಸುತ್ತಿರುವ ಭಾರತ ಎರಡರಲ್ಲಿ ಒಂದು ಜಯ ಕಂಡರೆ ಸರಣಿ ಗೆಲ್ಲಲಿದೆ.

ಈ ಜಿಂಬಾಬ್ವೆ ಸರಣಿ ನಂತರ ಭಾರತ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿದೆ. ಇನ್ನೊಂದೆಡೆ ಟೀಮ್ ಇಂಡಿಯಾದ ನೂತನ ಹೆಡ್ ಕೋಚ್ ಆಗಿ ನೇಮಕವಾಗಿರುವ ಗೌತಮ್ ಗಂಭೀರ್ ಅವರಿಗೆ ಇದು ಮೊದಲ ಚಾಲೆಂಜ್ ಆಗಿದೆ.
ಈ ಹಿಂದೆ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಮತ್ತು ನಾಯಕನಾಗಿ ಕೆಎಲ್ ರಾಹುಲ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ
ಇದೀಗ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಯ ದಿನಾಂಕಗಳು ಮತ್ತು ಸ್ಥಳಗಳನ್ನು ಮಂಗಳವಾರ ಪ್ರಕಟಿಸಲಾಗಿದೆ. ಶ್ರೀಲಂಕಾ ಪ್ರವಾಸದ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಂಚಿಕೊಂಡಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಎಲ್ಲಾ ಮೂರು ಟಿ20 ಪಂದ್ಯಗಳು ಪಲ್ಲೆಕೆಲೆಯಲ್ಲಿ ನಡೆಯಲಿವೆ. ಬಳಿಕ ಮೂರು ಏಕದಿನ ಪಂದ್ಯಗಳು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿವೆ.
ಈ ಎಲ್ಲಾ ಟಿ20 ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಆರಂಭವಾದರೆ, ಏಕದಿನ ಪಂದ್ಯಗಳು ಮಧ್ಯಾಹ್ನ 2.30 ಗಂಟೆ ಶುರುವಾಗಲಿವೆ.
ಭಾರತ vs ಶ್ರೀಲಂಕಾ ಟಿ20 ಸರಣಿ
ಮೊದಲನೇ ಟಿ20- ಜುಲೈ 26- ಪಲ್ಲಕಲೆ
ಎರಡನೇ ಟಿ20- ಜುಲೈ 27- ಪಲ್ಲಕಲೆ
ಮೂರನೇ ಟಿ20- ಜುಲೈ 29- ಪಲ್ಲಕಲೆ
ಭಾರತ vs ಶ್ರೀಲಂಕಾ ಏಕದಿನ ಸರಣಿ
ಮೊದಲನೇ ಏಕದಿನ ಪಂದ್ಯ- ಆಗಸ್ಟ್ 1- ಕೊಲಂಬೊ
ಎರಡನೇ ಏಕದಿನ ಪಂದ್ಯ- ಆಗಸ್ಟ್ 4- ಕೊಲಂಬೊ
ಮೂರನೇ ಏಕದಿನ ಪಂದ್ಯ- ಆಗಸ್ಟ್ 7- ಕೊಲಂಬೊ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications