ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಓವಲ್‌ನಲ್ಲಿ ಇಂದು ನಡೆಯಲಿದೆ. ಈ ಪಂದ್ಯದಲ್ಲಿನ ಟೀಮ್ ಇಂಡಿಯಾ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಐದನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುತ್ತಿದ್ದಂತೆ ಟೀಮ್ ಇಂಡಿಯಾ ಪರ ಸ್ಟಾರ್ ಆಟಗಾರರು ಹಲವು ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಹಾಗೇ ಭಾರತ ತಂಡದ ಭರವಸೆಯ ಬೌಲರ್ ಒಬ್ಬರು ಈ ಪಂದ್ಯದಲ್ಲಿ ಒಂದು ವಿಕೆಟ್ ಪಡೆಯುತ್ತಿದ್ದಂತೆ ವೈಯಕ್ತಿಕ ಮೈಲುಗಲ್ಲು ಮುಟ್ಟಲಿದ್ದಾರೆ. ಆ ಸಾಧನೆಯ ಬಗ್ಗೆ ವರದಿ ಇಲ್ಲಿದೆ.
ಟೀಮ್ ಇಂಡಿಯಾ ಈ ಸರಣಿ ಸಮನಾಗಿಸುವ ದೃಷ್ಟಿಯಿಂದ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಈ ಸರಣಿಯಲ್ಲಿ ಭಾರತ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪಂದ್ಯದಲ್ಲಿ 336 ರನ್ ಜಯ ದಾಖಲಿಸಿತ್ತು. ಈಗ ಮತ್ತೊಂದು ಗೆಲುವು ದಾಖಲಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆ ಗಿಲ್ ಪಡೆಯದ್ದಾಗಿದೆ. ಟೀಮ್ ಇಂಡಿಯಾದ ಹಲವು ಆಟಗಾರರು ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.

ಈ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಸಿರಾಜ್ ಈಗಾಗಲೇ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಐದನೇ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್ ಪಡೆಯುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 200 ವಿಕೆಟ್ ಪಡೆದ ಸಾಧನೆ ಮಾಡಲಿದ್ದಾರೆ. ಇವರು 2021 ರಲ್ಲಿ ಭಾರತದ ಪರ ಮೊದಲ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದರು.ಇದಕ್ಕೂ ಮೊದಲು ಅವರು 2019ರಲ್ಲಿ ಟಿ20 ಹಾಗೂ ಏಕದಿನ ಸರಣಿಯಲ್ಲಿ ಪದಾರ್ಪಣೆ ಮಾಡಿ ಸೈ ಎನಿಸಿಕೊಂಡಿದ್ದರು.
ಹೈದರಾಬಾದ್‌ನ ಮೊಹಮ್ಮದ್ ಸಿರಾಜ್ ಈಗಾಗಲೇ ಭಾರತದ ಪರ 40 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 114 ವಿಕೆಟ್ ಪಡೆದಿದ್ದಾರೆ. ಅಲ್ಲದೆ ಏಕದಿನ ಕ್ರಿಕೆಟ್‌ನಲ್ಲಿ 71 ವಿಕೆಟ್, 16 ಟಿ20 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿರುವ ಸಿರಾಜ್ ಅವರ ಬುಟ್ಟಿಯಲ್ಲಿ ಸದ್ಯ 199 ವಿಕೆಟ್‌ಗಳು ಇವೆ. ಇನ್ನು ಒಂದು ವಿಕೆಟ್ ಪಡೆದರೆ ಅವರು ದೊಡ್ಡ ದಾಖಲೆಯನ್ನು ಬರೆಯಲಿದ್ದಾರೆ.

ಓವಲ್‌ನಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವುದು ಉಭಯ ತಂಡಗಳಿಗೆ ಮಹತ್ವದಾಗಿದೆ. ಈಗಾಗಲೇ ಇಂಗ್ಲೆಂಡ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾ ಈ ಸರಣಿಯಲ್ಲಿ ಸಮಬಲ ಸಾಧಿಸುವ ಪ್ಲ್ಯಾನ್ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸುವ ನಿಟ್ಟಿನಲ್ಲಿ ಟೀಮ್ ಇಂಡಿಯಾ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಹೀಗಾಗಿ ಐದನೇ ಟೆಸ್ಟ್ ಪಂದ್ಯದಲ್ಲಿ ಕೆಲವು ಬದಲಾವಣೆಗಳೊಂದಿಗೆ ಕಣಕ್ಕೆ ಇಳಿಯಲಿದೆ. ಭಾರತ ತಂಡದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನಗಳು ಇವೆ. ಇನ್ನು ಟಿ20 ಕ್ರಿಕೆಟ್‌ನಲ್ಲಿ ತನ್ನ ಛಾಪು ಮೂಡಿಸಿರುವ ಅರ್ಷದೀಪ್ ಸಿಂಗ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು.