T20 World Cup: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ: ಭಾರತ ತಂಡದಲ್ಲಿ 2 ಬದಲಾವಣೆ
ಕೊಲಂಬೊ: ಟಿ20 ವಿಶ್ವಕಪ್‌ನ ಲೀಗ್ ಹಂತದ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಪಂದ್ಯಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಲೀಗ್‌ನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಲು ಸೂರ್ಯ ಪಡೆ ಪ್ಲ್ಯಾನ್ ಮಾಡಿಕೊಂಡಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ಸೂಪರ್ 8 ಹಂತಕ್ಕೆ ಅರ್ಹತೆ ಪಡೆಯುವ ಕನಸು ಭಾರತ ತಂಡದ್ದಾಗಿದೆ. ಮಹತ್ವ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಟೀಮ್ ಇಂಡಿಯಾ ಈ ಪಂದ್ಯಕ್ಕಾಗಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದೆ. ಕೊಲಂಬೊದ ಪಿಚ್ ಸ್ಪಿನ್ ಸ್ನೇಹಿ ಆಗಿರುವುದರಿಂದ ಈ ಪಂದ್ಯದಲ್ಲಿ ಸ್ಪಿನ್ ಬೌಲಿಂಗ್ ಸಮರ್ಥವಾಗಿ ನಿಭಾಯಿಸುವ ತಂಡ ಪಂದ್ಯವನ್ನು ಗೆಲ್ಲಲಿದೆ. ಹೀಗಾಗಿ ಎರಡೂ ತಂಡಗಳು ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿವೆ.

ನೋ ಹ್ಯಾಂಡ್ ಶೇಕ್
ಭಾರತ ಹಾಗೂ ಪಾಕಿಸ್ತಾನ ತಂಡಗಳು ಇನ್ನೇನು ಕೆಲವೇ ಕ್ಷಣಗಳಲ್ಲಿ ಕೊಲಂಬೊದಲ್ಲಿ ಮುಖಾಮುಖಿಯಾಗಲಿವೆ. ಈ ವೇಳೆ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಪಾಕ್ ಆಟಗಾರರೊಂದಿಗೆ ಹ್ಯಾಂಡ್‌ಶೇಕ್ ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದಕ್ಕೆ ಟಾಸ್ ವೇಳೆ ಉತ್ತರ ಸಿಕ್ಕಿದೆ. ಭಾರತದ ಆಟಗಾರರು ಹ್ಯಾಂಡ್ ಶೇಖ್ ಮಾಡದಿರಲು ನಿರ್ಧರಸಿದ್ದಾರೆ.
ತಂಡದಲ್ಲಿ ಎರಡು ಬದಲಾವಣೆ
ಭಾರತ ತಂಡದಲ್ಲಿ ಮಹತ್ವದ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದೆ. ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆರೋಗ್ಯದ ಸಮಸ್ಯೆಯಿಂದ ಕಣಕ್ಕೆ ಇಳಿಯದಿದ್ದ, ಅಭಿಷೇಕ್ ಶರ್ಮಾ ಪಾಕ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಪಿಚ್ ಮರ್ಮ ಸ್ಪಿನ್ ಬೌಲರ್‌ಗಳಿಗೆ ಸಹಾಯ ನೀಡುತ್ತದೆ ಎಂದು ಗಮಿನಿಸ ಭಾರತ ಅರ್ಶದೀಪ್ ಬದಲಿಗೆ ಕುಲ್‌ದೀಪ್ ಯಾದವ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್,
ಪಾಕಿಸ್ತಾನ ತಂಡ: ಸಾಹಿಬ್ಜಾದಾ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯೂಬ್, ಸಲ್ಮಾನ್ ಆಗಾ (ನಾಯಕ), ಬಾಬರ್ ಅಜಮ್, ಶಾದಾಬ್ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಕ್ ಮತ್ತು ಅಬ್ರಾರ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications