IND vs BAN: ದಕ್ಷಿಣ ಆಫ್ರಿಕಾ ದಾಖಲೆಯನ್ನು ಅಳಿಸುವ ಸನಿಹದಲ್ಲಿ ಟೀಮ್ ಇಂಡಿಯಾ
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಣ ಟೆಸ್ಟ್ ಸರಣಿ ನಡೆಯುತ್ತಿದೆ. ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಈಗ ಎರಡನೇ ಟೆಸ್ಟ್ ಪಂದ್ಯವನ್ನು ಆಡಲು ಟೀಮ್ ಇಂಡಿಯಾ ತಯಾರಿ ನಡೆಸಿದೆ. ಗ್ರೀನ್ ಪಾರ್ಕ್‌ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ ಐತಿಹಾಸಿಕ ಸಾಧನೆ ಮಾಡುವ ಕನಸಿನಲ್ಲಿದೆ.
ಈಗಾಗಲೇ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಕೊಂಡಿರುವ ಭಾರತ ಸಾಧನೆ ಮಾಡಿದೆ. ಈಗ ಟೀಮ್ ಇಂಡಿಯಾದ ಗೆಲುವಿನ ಸಂಖ್ಯೆ, ಸೋಲಿನ ಸಂಖ್ಯೆಗಿಂತ ಹೆಚ್ಚಿದೆ. ಈ ಮೂಲಕ ಟೀಮ್ ಇಂಡಿಯಾ ಹಿಂದೆ ಎಂದು ಮಾಡದ ಸಾಧನೆ ಮಾಡಿದೆ. ಸೆಪ್ಟೆಂಬರ್ 27 ರಿಂದ ಭಾರತ ಹಾಗೂ ಬಾಂಗ್ಲಾದೇಶಗಳ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿದರೆ, ಇತಿಹಾಸ ಸೃಷ್ಟಿಸಲಿದೆ.

ಸೋಲಿಗಿಂತ ಹೆಚ್ಚು ಗೆಲುವು ದಾಖಲಿಸಿರುವ ಕೀರ್ತಿ
ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಕೀರ್ತಿ ಆಸ್ಟ್ರೇಲಿಯಾ ತಂಡದ್ದಾಗಿದೆ. ಆಸೀಸ್ ಒಟ್ಟಾರೆಯಾಗಿ 400ಕ್ಕೂ ಹೆಚ್ಚು ಪಂದ್ಯಗಳನ್ನು ಗೆದ್ದು ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಇದುವರೆಗೆ 397 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಈ ತಂಡಗಳ ಹತ್ತಿರಕ್ಕೂ ಬೇರೆ ಯಾವ ತಂಡಗಳು ಸಹ ಈ ವರ್ಷದಲ್ಲಿ ಬರುವ ಸಾಧ್ಯತೆ ಇಲ್ಲ.
ದಕ್ಷಿಣ ಆಫ್ರಿಕಾ ಸಾಧನೆ ಅಳಿಸುವ ಸನಿಹದಲ್ಲಿ ಭಾರತ
ಇನ್ನು ವೆಸ್ಟ್ ಇಂಡೀಸ್ ಸಹ ಇದುವರೆಗೆ 183 ಪಂದ್ಯಗಳನ್ನು ಗೆದ್ದಿದೆ. ಒಂದು ಸಮಯದಲ್ಲಿ ವೆಸ್ಟ್ ಇಂಡೀಸ್ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ತನ್ನ ಏಕಸ್ವಾಮ್ಯವನ್ನು ಹೊಂದಿತ್ತು. ಈ ಮೂರು ತಂಡಗಳ ಬಳಿಕ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ಕೀರ್ತಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳದ್ದಾಗಿದೆ.

ಉಭಯ ತಂಡಗಳು ಇದುವರೆಗೆ 179 ಪಂದ್ಯಗಳನ್ನು ಗೆದ್ದಿವೆ. ಕಾನ್ಪುರದಲ್ಲಿ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಭಾರತ ತಂಡವು ಗೆದ್ದರೆ, ಟೀಮ್ ಇಂಡಿಯಾದ ಗೆಲುವಿನ ಸಂಖ್ಯೆ 180 ಕ್ಕೆ ತಲುಪುತ್ತದೆ. ಹೀಗೆ ಆದಲ್ಲಿ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ನಾಲ್ಕನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಟೀಮ್ ಇಂಡಿಯಾದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸೋತ ಪಂದ್ಯಗಳಿಗಿಂತ, ಗೆದ್ದ ಪಂದ್ಯಗಳ ಸಂಖ್ಯೆ ಏರಲಿದೆ. ಭಾರತ ಈ ವರೆಗೆ ಒಟ್ಟು 580 ಟೆಸ್ಟ್ ಪಂದ್ಯಗಳನ್ನು ಆಡಿದೆ, ಆದರೆ ದಕ್ಷಿಣ ಆಫ್ರಿಕಾ ತಂಡ 466 ಟೆಸ್ಟ್ ಪಂದ್ಯಗಳನ್ನು ಆಡಿದೆ. ಭಾರತ ತಂಡ ಇತ್ತೀಚೆಗೆ ಚೆನ್ನೈ ಟೆಸ್ಟ್‌ನಲ್ಲಿ ಗೆದ್ದು ಸೋತಿದ್ದಕ್ಕಿಂತ ಹೆಚ್ಚು ಪಂದ್ಯಗಳನ್ನು ಗೆದ್ದ ಹಿರಿಮೆಗೆ ಪಾತ್ರವಾಗಿದೆ. ಬಾಂಗ್ಲಾದೇಶದ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರ ಟೀಮ್ ಇಂಡಿಯಾದ್ದಾಗಿದೆ. ಒಂದು ವೇಳೆ ಈ ಆಸೆ ಫಲಿಸಿದಲ್ಲಿ ದಾಖಲೆಯ ಪುಟಕ್ಕೆ ಎಂಟ್ರಿ ನೀಡುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications