ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಿವೀಸ್ ವಿರುದ್ಧ ಮಾಡಿದ ಆ ತಪ್ಪನ್ನು ಮಾಡಬೇಡಿ; ದ.ಆಫ್ರಿಕಾ ಪ್ರವಾಸ ಕೈಗೊಳ್ಳುವ ಭಾರತಕ್ಕೆ ಲಕ್ಷ್ಮಣ್ ಸಲಹೆ

Team India shouldnt repeat their mistake in South Africa tour says VVS Laxman

ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ಕಿವೀಸ್ ಕಿವಿ ಹಿಂಡಿದ್ದ ಟೀಮ್ ಇಂಡಿಯಾ ಇದೀಗ ಹರಿಣಗಳ ಬೇಟೆಯನ್ನಾಡಲು ಡಿಸೆಂಬರ್ 17ರಂದು ದಕ್ಷಿಣ ಆಫ್ರಿಕಾಕ್ಕೆ ಹಾರಲಿದೆ.

ದ. ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಹಿನ್ನಡೆ; ಈ ಇಬ್ಬರು ಪ್ರಮುಖ ಆಟಗಾರರೇ ಅನುಮಾನ!ದ. ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಹಿನ್ನಡೆ; ಈ ಇಬ್ಬರು ಪ್ರಮುಖ ಆಟಗಾರರೇ ಅನುಮಾನ!

ಹೌದು, ಇತ್ತೀಚೆಗಷ್ಟೇ ಟಿ ಟ್ವೆಂಟಿ ವಿಶ್ವಕಪ್ ಮುಗಿದ ಬಳಿಕ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ವಿರುದ್ಧ ಟಿ ಟ್ವೆಂಟಿ ಮತ್ತು ಟೆಸ್ಟ್ ಎರಡೂ ಸರಣಿಗಳಲ್ಲಿಯೂ ಭಾರತ ಜಯ ಸಾಧಿಸುವುದರ ಮೂಲಕ ನ್ಯೂಜಿಲೆಂಡ್‌ಗೆ ಮಣ್ಣುಮುಕ್ಕಿಸಿದೆ. ಹೌದು, ಟಿ ಟ್ವೆಂಟಿ ವಿಶ್ವಕಪ್ ಮುಗಿಸಿ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ಭಾರತ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಯಿತು. ನಂತರ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲನೇ ಪಂದ್ಯವನ್ನು ಡ್ರಾ ಮಾಡಿಕೊಂಡ ನ್ಯೂಜಿಲೆಂಡ್ ದ್ವಿತೀಯ ಪಂದ್ಯದಲ್ಲಿ 372 ರನ್‌ಗಳ ಬೃಹತ್ ಅಂತರದಲ್ಲಿ ಹೀನಾಯವಾಗಿ ಸೋತಿತು.

ಅಶ್ವಿನ್ ಮಾಡಿದ ಒಂದೇ ಒಂದು ಟ್ವೀಟ್‌ನಿಂದ ಬ್ಲೂ ಬ್ಯಾಡ್ಜ್ ಪಡೆದ ನ್ಯೂಜಿಲೆಂಡ್‌ ಕ್ರಿಕೆಟಿಗಅಶ್ವಿನ್ ಮಾಡಿದ ಒಂದೇ ಒಂದು ಟ್ವೀಟ್‌ನಿಂದ ಬ್ಲೂ ಬ್ಯಾಡ್ಜ್ ಪಡೆದ ನ್ಯೂಜಿಲೆಂಡ್‌ ಕ್ರಿಕೆಟಿಗ

ಹೀಗೆ ಹಾಲಿ ವಿಶ್ವ ಟೆಸ್ಟ್ ಚಾಂಪಿಯನ್ಸ್‌ಗೆ ಮಣ್ಣು ಮುಕ್ಕಿಸಿ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿರುವ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿಯೂ ಕೂಡ ಜಯಭೇರಿ ಬಾರಿಸಲು ಸಜ್ಜಾಗುತ್ತಿದೆ. ಅತ್ತ ಈಗಾಗಲೇ ಭಾರತ ವಿರುದ್ಧದ ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾ 21 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸುವಲ್ಲಿ ವಿಳಂಬ ಮಾಡುತ್ತಿದೆ. ಹೌದು, ಕಳೆದ ಮಂಗಳವಾರವೇ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಬೇಕಿತ್ತು. ಇನ್ನು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪ್ರಕಟವಾಗಲಿರುವ ಭಾರತ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬ ಕುತೂಹಲ ಒಂದೆಡೆ ಮೂಡಿದ್ದರೆ, ಮತ್ತೊಂದೆಡೆ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡಕ್ಕೆ ಈ ಕೆಳಕಂಡಂತೆ ಸಲಹೆಯೊಂದನ್ನು ನೀಡಿದ್ದು ಈ ಹಿಂದೆ ಮಾಡಿದ ತಪ್ಪನ್ನು ಮಾಡಬಾರದೆಂದು ಹೇಳಿದ್ದಾರೆ.

ಮತ್ತೆ ಆ ತಪ್ಪನ್ನು ಮಾಡಬೇಡಿ ಎಂದ ವಿವಿಎಸ್ ಲಕ್ಷ್ಮಣ್

ಮತ್ತೆ ಆ ತಪ್ಪನ್ನು ಮಾಡಬೇಡಿ ಎಂದ ವಿವಿಎಸ್ ಲಕ್ಷ್ಮಣ್

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲು ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ವಿಶೇಷ ಸಲಹೆ ನೀಡಿರುವ ವಿವಿಎಸ್ ಲಕ್ಷ್ಮಣ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಆಟಗಾರರು ಮಾಡಿದ ತಪ್ಪನ್ನು ಮತ್ತೊಮ್ಮೆ ಮಾಡಬಾರದೆಂದು ತಿಳಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ ಮತ್ತು ಶುಬ್ ಮನ್ ಗಿಲ್ ಮೂವರೂ ಸಹ ಪಿಚ್‌ನಲ್ಲಿ ಕೆಲ ಸಮಯ ಆಟವನ್ನಾಡಿ ನೆಲಕಚ್ಚಿ ನಿಂತ ಕೂಡಲೇ ವಿಕೆಟ್ ಒಪ್ಪಿಸಿದರು ಎಂದು ಹೇಳಿಕೆ ನೀಡಿರುವ ಲಕ್ಷ್ಮಣ್ ನೆಲಕಚ್ಚಿ ನಿಂತ ನಂತರ ವಿಕೆಟ್ ಒಪ್ಪಿಸದೇ ಆಟವನ್ನು ಮುಂದುವರಿಸಬೇಕು ಎಂದಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ ಆಟಗಾರರಿಗೆ ನೆಲಕಚ್ಚಿ ನಿಂತ ನಂತರ ವಿಕೆಟ್ ಒಪ್ಪಿಸಬಾರದು, ಬದಲಾಗಿ ಉತ್ತಮ ಆರಂಭವನ್ನು ಪಡೆದುಕೊಂಡ ನಂತರ ದೊಡ್ಡ ರನ್ ಕಲೆ ಹಾಕಬೇಕು ಎಂಬ ಸಲಹೆಯನ್ನು ಲಕ್ಷ್ಮಣ್ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕೆಂದರೆ ರನ್ ಕಲೆ ಹಾಕಲೇಬೇಕು

ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕೆಂದರೆ ರನ್ ಕಲೆ ಹಾಕಲೇಬೇಕು

ನೆಲಕಚ್ಚಿ ನಿಂತ ನಂತರ ಔಟ್ ಆಗದೇ ಉತ್ತಮ ರನ್ ಕಲೆ ಹಾಕಬೇಕು ಎಂದಿರುವ ವಿವಿಎಸ್ ಲಕ್ಷ್ಮಣ್ ಉತ್ತಮ ತಂಡಗಳ ವಿರುದ್ಧ ಜಯ ಸಾಧಿಸಬೇಕೆಂದರೆ ರನ್ ಕಲೆ ಹಾಕಲೇ ಬೇಕು ಎಂದಿದ್ದಾರೆ. ಅದರಲ್ಲಿಯೂ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕೆಂದರೆ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲೇಬೇಕು ಎಂದು ಲಕ್ಷ್ಮಣ್ ಹೇಳಿದ್ದಾರೆ.

ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಹರ್ಭಜನ್ ಸಿಂಗ್ | Oneindia Kannada
ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ

ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದ್ದು ಇದರ ವೇಳಾ ಪಟ್ಟಿ ಈ ಕೆಳಕಂಡಂತಿದೆ

ಮೊದಲ ಟೆಸ್ಟ್‌: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್‌, ಸೆಂಚುರಿಯನ್

ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್

ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್‌ ಟೌನ್

ಹೀಗೆ 3 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಅದರ ವೇಳಾಪಟ್ಟಿ ಹೀಗಿದೆ

ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM

ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM

ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್‌ ಟೌನ್, ಸಮಯ - 2.00 PM

Story first published: Wednesday, December 8, 2021, 16:10 [IST]
Other articles published on Dec 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X