ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್‌ನಲ್ಲೂ ನಂಬರ್ 1 ಸ್ಥಾನದ ಮೇಲೆ ಕಣ್ಣಿಟ್ಟ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ

Team India skipper Rohit Sharma eye on No.1 Test spot after dominating white-ball cricket

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ವೈಟ್‌ವಾಶ್ ಮೂಲಕ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಸಾಧನೆ ಮೂಲಕ ಟೀಮ್ ಇಂಡಿಯಾ ಏಕದಿನ ಕ್ರಿಕೆಟ್ ಮಾದರಿಯಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ವೈಟ್‌ಬಾಲ್‌ನಲ್ಲಿ ಭಾರತ ಮೇಲುಗೈ ಸಾಧಿಸಿದ ಬಳಿಕ ರೆಡ್‌ಬಾಲ್‌ನಲ್ಲಿಯೂ ಇಂಥಾದ್ದೇ ಸಾಧನೆ ಮಾಡುವ ಹುಮ್ಮಸ್ಸಿನಲ್ಲಿ ಟೀಮ್ ಇಂಡಿಯಾ ಇದೆ. ಈ ಬಗ್ಗೆ ನಾಯಕ ರೋಹಿತ್ ಶರ್ಮಾ ಕೂಡ ಮಾತನಾಡಿದ್ದು ಟೆಸ್ಟ್ ಮಾದರಿಯಲ್ಲಿಯೂ ಅಗ್ರಸ್ಥಾಕ್ಕೇರುವತ್ತ ಚಿತ್ತ ನೆಟ್ಟಿರುವುದಾಗಿ ನೇರವಾಗಿ ಹೇಳಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ತವರಿನಲ್ಲಿ ಸತತ ಎರಡು ಏಕದಿನ ಸರಣಿಗಳನ್ನು ವೈಟ್‌ವಾಶ್ ಮಾಡಿದೆ. ಮೊದಲಿಗೆ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಭಾರತ ಬಳಿಕ ಕಿವೀಸ್ ವಿರುದ್ಧದ ಸರಣಿಯಲ್ಲಿಯೂ ಅದೇ ಸಾಧನೆ ಮಾಡಿದೆ. ಇದೀಗ ಭಾರತ ತಂಡದ ಚಿತ್ತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೇಲೆ ಬಿದ್ದಿದ್ದು ಫೆಬ್ರವರಿಯಲ್ಲಿ ನಡೆಯಲಿರುವ ಈ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಟಿ20 ಕ್ರಿಕೆಟ್‌ನಿಂದ ಕೊಹ್ಲಿ, ರೋಹಿತ್‌ಗೆ ವಿಶ್ರಾಂತಿ; ಸ್ಪಷ್ಟನೆ ನೀಡಿದ ಕೋಚ್ ರಾಹುಲ್ ದ್ರಾವಿಡ್ಟಿ20 ಕ್ರಿಕೆಟ್‌ನಿಂದ ಕೊಹ್ಲಿ, ರೋಹಿತ್‌ಗೆ ವಿಶ್ರಾಂತಿ; ಸ್ಪಷ್ಟನೆ ನೀಡಿದ ಕೋಚ್ ರಾಹುಲ್ ದ್ರಾವಿಡ್

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಎರಡು ತಮಡಗಳು ನಾಲ್ಕು ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಈ ಸರಣಿ ನಡೆಯಲಿದ್ದು ಫೆಬ್ರವರಿ 9ರಿಂದ ಆರಂಭವಾಗಲಿದೆ. ಈಗ ತಮ್ಮ ಚಿತ್ತ ಈ ಸರಣಿಯ ಮೇಲೆ ನೆಟ್ಟಿದೆ ಎಂದು ರೋಹಿತ್ ಶರ್ಮಾ ಹೆಳಿಕೆ ನೀಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ ಸೇರಿದಂತೆ ವಿರಾಟ್ ಕೊಹ್ಲಿ ಹೊರಗುಳಿದಿದ್ದು ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಭಾರತ ಸೆಣೆಸಾಡಲಿದೆ.

"ಆಸ್ಟ್ರೇಲಿಯಾ ಗುಣಟ್ಟದ ತಂಡವಾಗಿದ್ದು ಭಾರತಕ್ಕೆ ದು ಸುಲಭದ ಸವಾಲಾಗಿರುವುದಿಲ್ಲ. ಆದರೆ ನಾವು ಅಂದುಕೊಂಡಿದ್ದನ್ನು ಸಾಧಿಸುವ ವಿಶ್ವಾಸವಿದೆ" ಎಂದಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ವೈಟ್‌ವಾಶ್ ಮಾಡಿದ ಬಳಿಕ ರೋಹಿತ್ ಈ ಮಾತುಗಳನ್ನಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾ ಸ್ಕ್ವಾಡ್ ಈಗಾಗಲೇ ಘೋಷಣೆ ಮಾಡಲಾಗಿದೆ. ಇಶಾನ್ ಕಿಶನ್ ಈ ಸರಣಿಯ ಮೂಲಕ ಟೆಸ್ಟ್ ಮಾದರಿಗೆ ಮೊದಲ ಬಾರಿಗೆ ಕರೆ ಸ್ವೀಕರಿಸಿದ್ದು ರವೀಂದ್ರ ಜಡೇಜಾ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಜಡೇಜಾ ಫಿಟ್‌ನೆಸ್ ಖಚಿತಪಡಿಸಿಕೊಳ್ಳಬೇಕಿದೆ.

ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ರಶೀದ್ ಖಾನ್: ಈ ಸಾಧನೆ ಮಾಡಿದ 2ನೇ ಬೌಲರ್ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ರಶೀದ್ ಖಾನ್: ಈ ಸಾಧನೆ ಮಾಡಿದ 2ನೇ ಬೌಲರ್

ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ: : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್, ಸೂರ್ಯಕುಮಾರ್ ಯಾದವ್

ಆಸ್ಟ್ರೇಲಿಯಾದ ಟೆಸ್ಟ್ ತಂಡ: ಆಸ್ಟ್ರೇಲಿಯಾದ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

Story first published: Tuesday, January 24, 2023, 23:08 [IST]
Other articles published on Jan 24, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X