For Quick Alerts
ALLOW NOTIFICATIONS  
For Daily Alerts
 

ಏಷ್ಯಾಕಪ್ 2023: ಪಾಕ್‌ಗೆ ಪ್ರಯಾಣಿಸದ ಭಾರತದ ನಿಲುವಿನ ಬಗ್ಗೆ ರೋಹಿತ್ ಶರ್ಮಾ ಪ್ರತಿಕ್ರಿಯೆ

Team India skipper Rohit Sharma reaction on India Not Touring Pakistan For Asia Cup 2023

ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕದನ ಆರಂಭಕ್ಕೂ ಮುನ್ನ ಮುಂದಿನ ವರ್ಷ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದೆ. ಇತ್ತೀಚೆಗೆ ನಡೆದ ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಯ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮುಂದಿನ ವರ್ಷ ನಡೆಯಲಿರುವ ಏಷ್ಯಾ ಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ ಎಸಿಸಿ ಮುಖ್ಯಸ್ಥರೂ ಆಗಿರುವ ಜಯ್ ಶಾ ಬಳಿಕ ಮುಂಬರುವ ಏಷ್ಯಾ ಕಪ್ ಟೂರ್ನಿ ತಟಸ್ಥ ತಾಣದಲ್ಲಿ ನಡೆಯಲಿದೆ ಎಂದು ಹೇಳಿಕೆ ನೀಡಿದ್ದರು.

ಬಿಸಿಸಿಐ ಕಾರ್ಯದರ್ಶಿ ಹಾಗೂ ಎಸಿಸಿ ಮುಖ್ಯಸ್ಥರಾಗಿರುವ ಜಯ್ ಶಾ ಅವರ ಈ ಹೇಳಕೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಪಾಕಿಸ್ತಾನದ ಸಾಕಷ್ಟು ಮಾಜಿ ಕ್ರಿಕೆಟಿಗರು ಹಾಗೂ ಅಲ್ಲಿನ ಕ್ರಿಕೆಟ್ ಮಂಡಳಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಅಲ್ಲದೆ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಲ್ಲಿ ತಾನು ಭಾಗವಹಿಸುವುದಿಲ್ಲ ಎಂಬ ಬೆದರಿಕೆಯನ್ನು ಕೂಡ ಹಾಕಿದೆ. ಈ ಬೆಳವಣಿಗೆ ಬಗ್ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಪ್ರತಿಕ್ರಿಯೆ

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಪ್ರತಿಕ್ರಿಯೆ

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಮುಂದಿನ ವರ್ಷದ ಎಷ್ಯಾ ಕಪ್ ಟೂರ್ನಿಯ ವಿಚಾರವಾಗಿ ಬಿಸಿಸಿಐ ನಿಲುವಿನ ಬಗ್ಗೆ ಪ್ರಶ್ನೆ ರೋಹಿತ್ ಶರ್ಮಾ ಮುಂದೆ ಬಂತು. ಈ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದ್ದು ನಮ್ಮ ಗುರಿ ಸದ್ಯ ಈ ಬಾರಿಯ ವಿಶ್ವಕೊ್ ಟೂರ್ನಿಯ ಮೇಲೆ ಮಾತ್ರವೇ ಇದೆ ಎಂದಿದ್ದಾರೆ.

ಬಿಸಿಸಿಐ ನಿರ್ಧಾರ ತೆಗೆದುಕೊಳ್ಳುತ್ತದೆ

ಬಿಸಿಸಿಐ ನಿರ್ಧಾರ ತೆಗೆದುಕೊಳ್ಳುತ್ತದೆ

"ನನ್ನ ಈಗಿನ ಗುರಿ ಈ ಬಾರಿಯ ಟಿ20 ವಿಶ್ವಕಪ್ ಮಾತ್ರವೇ ಆಗಿದೆ. ಯಾಕೆಂದರೆ ಇದು ನಮಗೆ ಬಹಳ ಮುಖ್ಯವಾಗಿದೆ. ಅದಾದ ಬಳಿಕ ಏನಾಗಲಿದೆ ಎಂಬುದರ ಬಗ್ಗೆ ನಾವು ಯೋಚನೆ ಮಾಡಿಲ್ಲ. ಆ ಬಗ್ಗೆ ಯೋಚನೆ ಮಾಡುವುದರಲ್ಲಿ ಅರ್ಥವೇ ಇಲ್ಲ. ಆ ವಿಚಾರವಾಗಿ ಬಿಸಿಸಿಐ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಈಗ ನಾವು ಕೇವಲ ನಾಳಿನ ಪಂದ್ಯದ ಮೇಲೆ ಮಾತ್ರವೇ ಗನಹರಿಸಿದ್ದೇವೆ" ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿಕೆ ನೀಡಿದ್ದಾರೆ.

ಎಂಸಿಜಿಯಲ್ಲಿ ಬದ್ಧ ಎದುರಾಳಿ ವಿರುದ್ಧ ಸೆಣೆಸಾಟ

ಎಂಸಿಜಿಯಲ್ಲಿ ಬದ್ಧ ಎದುರಾಳಿ ವಿರುದ್ಧ ಸೆಣೆಸಾಟ

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಭಾನುವಾರ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡಲಿದೆ. ಕಳೆದ ವರ್ಷದ ವಿಶ್ವಕಪ್‌ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸೋಲು ಅನುಭವಿಸಿತ್ತು. ಹೀಗಾಗಿ ಈ ಬಾರಿ ಆ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳು ಇದ್ದಾರೆ. ಭಾರತ ತಂಡದ ಆಟಗಾರರು ಕೂಡ ಉತ್ತಮ ಫಾರ್ಮ್‌ನಲ್ಲಿದ್ದು ಪಂದ್ಯದ ಮೇಲೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ

ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ
ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್

Story first published: Saturday, October 22, 2022, 13:41 [IST]
Other articles published on Oct 22, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+