Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಉಪನಾಯಕನ ಸ್ಥಾನದಿಂದ ಕೆಎಲ್ ರಾಹುಲ್ ವಜಾ: ಮೊದಲ ಬಾರಿಗೆ ರೋಹಿತ್ ಶರ್ಮಾ ಪ್ರತಿಕ್ರಿಯೆ

Team India skipper Rohit Sharmas first reaction to KL Rahul being removed as Indias vice-captain

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೂರನೇ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ. ಮಾರ್ಚ್ 1ರಿಂದ ಇಂದೋರ್ ನ ಹೋಳ್ಕರ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಪಂದ್ಯ ಆರಂಭವಾಗಲಿದೆ.

ಭಾರತ ತಂಡದ ಆಟಗಾರರು ಇಂದೋರ್‍ ನಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಮೂರನೇ ಪಂದ್ಯವನ್ನು ಗೆಲ್ಲುವ ಉತ್ಸಾಹದಲ್ಲಿದೆ. ಈ ಪಂದ್ಯವನ್ನು ಗೆದ್ದರೆ ಭಾರತ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ನೇರವಾಗಿ ಅರ್ಹತೆ ಪಡೆಯಲಿದೆ. ಇಂದೋರ್ ಟೆಸ್ಟ್ ಗೆದ್ದರೆ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೇರಲಿದೆ.

ಮೂರನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್‌ಗೆ ಆಘಾತ ಎದುರಾಗಿದೆ. ಟೆಸ್ಟ್ ಮಾದರಿಯಲ್ಲಿ ಉಪನಾಯಕನಾಗಿದ್ದ ಕೆಎಲ್ ರಾಹುಲ್‌ರನ್ನು ಆ ಸ್ಥಾನದಿಂದ ಕೈ ಬಿಡಲಾಗಿದೆ. ಉಪನಾಯಕನಾಗಿ ಬೇರೆ ಯಾರನ್ನೂ ಆಯ್ಕೆ ಮಾಡಲಾಗಿಲ್ಲ.

ಉಪನಾಯಕನ ಸ್ಥಾನದಿಂದ ಕೆಎಲ್ ರಾಹುಲ್‌ರನ್ನು ಕೈಬಿಟ್ಟಿರುವುದು ಅವರನ್ನು ತಂಡದಿಂದ ಕೈಬಿಡುವ ಮುನ್ಸೂಚನೆ ಎನ್ನಲಾಗಿದೆ. 3ನೇ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಬದಲಾಗಿ ಶುಭಮನ್‌ ಗಿಲ್‌ಗೆ ಅವಕಾಶ ನೀಡಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ರೋಹಿತ್ ಶರ್ಮಾ ಹೇಳಿದ್ದೇನು

ರೋಹಿತ್ ಶರ್ಮಾ ಹೇಳಿದ್ದೇನು

ಕೆಎಲ್ ರಾಹುಲ್‌ರನ್ನು ಉಪನಾಯಕನ ಸ್ಥಾನದಿಂದ ವಜಾ ಮಾಡಿದ್ದರ ಬಗ್ಗೆ ನಾಯಕ ರೋಹಿತ್ ಶರ್ಮಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. "ಕೆಎಲ್ ರಾಹುಲ್‌ರನ್ನು ಉಪನಾಯಕನ ಸ್ಥಾನದಿಂದ ತೆಗೆದುಹಾಕಿರುವುದು ಏನನ್ನೂ ಸೂಚಿಸುವುದಿಲ್ಲ" ಎಂದು ಹೇಳಿದ್ದಾರೆ.

"ಎರಡನೇ ಟೆಸ್ಟ್ ಪಂದ್ಯದ ನಂತರವೂ ನಾನು ಹೇಳಿದ್ದೆ. ಕಠಿಣ ಸಮಯವನ್ನು ಎದುರಿಸುತ್ತಿರುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಸಾಕಷ್ಟು ಸಮಯ ನೀಡಲಾಗುತ್ತದೆ. ಉಪನಾಯನಕಾಗುವುದು ಅಥವಾ ಉಪನಾಯಕನಾಗದಿರುವುದು ಯಾವುದರ ಮುನ್ಸೂಚನೆಯೂ ಅಲ್ಲ." ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ದ್ರಾವಿಡ್, ರೋಹಿತ್ ಬೆಂಬಲ

ದ್ರಾವಿಡ್, ರೋಹಿತ್ ಬೆಂಬಲ

ಕೆಎಲ್ ರಾಹುಲ್‌ಗೆ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಬೆಂಬಲ ಸೂಚಿಸಿದ್ದಾರೆ. ದೆಹಲಿ ಟೆಸ್ಟ್ ನಂತರ ಪ್ರತಿಕ್ರಿಯೆ ನೀಡಿದ್ದ ರಾಹುಲ್ ದ್ರಾವಿಡ್, "ಕೆಎಲ್ ರಾಹುಲ್ ವಿದೇಶಗಳಲ್ಲಿ ಶತಕಗಳನ್ನು ಗಳಿಸಿದ್ದಾರೆ. ಅವರು ಅತ್ಯುತ್ತಮ ಸಾಮರ್ಥ್ಯ ಹೊಂದಿರುವ ಆಟಗಾರ, ಅವರಿಗೆ ತಂಡದ ಮ್ಯಾನೇಜ್‌ಮೆಂಟ್ ಯಾವಾಗಲೂ ಬೆಂಬಲ ನೀಡುತ್ತದೆ" ಎಂದು ಹೇಳಿದ್ದಾರೆ.

ಮೂರನೇ ಟೆಸ್ಟ್‌ಗೆ ಮುನ್ನ ಶುಭಮನ್‌ ಗಿಲ್ ದೀರ್ಘಾವಧಿಯವರೆಗೆ ಬ್ಯಾಟಿಂಗ್ ಅಭ್ಯಾಸ ಮಾಡಿದರು. ಇದೆಲ್ಲವೂ ಅವರು 3ನೇ ಟೆಸ್ಟ್‌ನಲ್ಲಿ ತಂಡಕ್ಕೆ ಸೇರ್ಪಡೆಯಾಗುವ ಮುನ್ಸೂಚನೆ ಎಂದು ಹೇಳಲಾಗಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಕಣಕ್ಕಿಳಿಯುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೋಹಿತ್, ಟಾಸ್‌ ನಂತರ ಮಾತ್ರ ಪ್ಲೇಯಿಂಗ್ ಇಲೆವೆನ್ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

"ಶುಭಮನ್ ಗಿಲ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಪ್ರತಿ ಪಂದ್ಯಕ್ಕೆ ಮುನ್ನ ಮಾಮೂಲಿನಂತೆ ಅಭ್ಯಾಸ ಮಾಡುತ್ತಿದ್ದಾರೆ. ತಂಡದ ಎಲ್ಲಾ ಸದಸ್ಯರಿಗೂ ಐಚ್ಛಿಕ ತರಬೇತಿಯಾಗಿದೆ. ಎಲ್ಲಾ 17-18 ಆಟಗಾರರು ಅಭ್ಯಾಸದಲ್ಲಿ ಪಾಲ್ಗೊಂಡಿದ್ದಾರೆ. ನಮ್ಮ ಪ್ಲೇಯಿಂಗ್ ಇಲೆವೆನ್ ಬಗ್ಗೆ ನಾವು ಇನ್ನೂ ನಿರ್ಧಾರ ಮಾಡಿಲ್ಲ. ಟಾಸ್‌ನಲ್ಲಿ ಪ್ಲೇಯಿಂಗ್ ಇಲೆವೆನ್‌ ಅನ್ನು ಬಹಿರಂಗಪಡಿಸಲಾಗುವುದು" ಎಂದು ರೋಹಿತ್ ಹೇಳಿದ್ದಾರೆ.

ಭಾರತ ಟೆಸ್ಟ್ ತಂಡ

ಭಾರತ ಟೆಸ್ಟ್ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಸೂರ್ಯಕುಮಾರ್ ಯಾದವ್ , ಜಯದೇವ್ ಉನದ್ಕತ್, ಉಮೇಶ್ ಯಾದವ್.

Story first published: Tuesday, February 28, 2023, 15:21 [IST]
Other articles published on Feb 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+