ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 10 ವರ್ಷ

Team India skipper Virat Kohli completes 10 years in Test Format

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಜೂನ್ 20 (ಭಾನುವಾರ)ಕ್ಕೆ ಭರ್ತಿ 10 ವರ್ಷಗಳಾಗಿದೆ. 2011ರ ಜೂನ್ 20ರಂದು ವಿರಾಟ್ ಕೊಹ್ಲಿ ಮೊದಲ ಬಾರಿಗೆ ಕ್ರಿಕೆಟ್‌ನ ಸುದೀರ್ಘ ಮಾದರಿಯಲ್ಲಿ ಆಡಲು ಇಳಿದಿದ್ದರು. ವೆಸ್ಟ್ ಇಂಡೀಸ್ ವಿರುದ್ಧ ಜಮೈಕಾದ ಕಿಂಗ್‌ಸ್ಟನ್‌ನಲ್ಲಿ ಈ ಪಂದ್ಯ ನಡೆದಿತ್ತು.

ಅಲ್ಲಿಂದ ಇಲ್ಲಿಯವರೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಟ್ಟು 92 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಸದ್ಯ ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತೀಯ ತಂಡವನ್ನು ಕೊಹ್ಲಿ ಮುನ್ನಡೆಸುತ್ತಿದ್ದಾರೆ.

WTC Final: ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲುWTC Final: ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 27 ಶತಕವನ್ನು ಬಾರಿಸಿದ್ದು 7 ದ್ವಿಶತಕ ಸಿಡಿಸಿದ್ದಾರೆ. ಸದ್ಯ ಸಕ್ರಿಯವಾಗಿರುವ ಆಟಗಾರರ ಪೈಕಿ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕನೇ ಅತಿ ಹೆಚ್ಚು ದ್ವಿಶತಕವನ್ನು ಬಾರಿಸಿದ ಕ್ರಿಕೆಟಿಗ ಎನಿಸಿದ್ದಾರೆ. ಒಟ್ಟಾರೆ ದ್ವಿಶತಕಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನು ಸತತ ನಾಲ್ಕು ಸರಣಿಗಳಲ್ಲಿ ದ್ವಿಶತಕಗಳನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಈವರೆಗೆ ಆಡಿದ 92 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 52.32ರ ಸರಾಸರಿಯಲ್ಲಿ 7534 ರನ್‌ಬಾರಿಸಿದ್ದಾರೆ.

2014-15ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿಯಲ್ಲಿ ನಾಯಕನಾಗಿದ್ದ ಧೋನಿ ನಿವೃತ್ತಿ ಪಡೆದ ನಂತರ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಸ್ಟ್ ತಂಡದ ನಾಯಕನಾಗಿ ಚುಕ್ಕಾಣಿ ಹಿಡಿದರು. ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾಗಿಯಾಗುವ ಮೂಲಕ ಭಾರತ ತಂಡವನ್ನು ಅತಿ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ ನಾಯಕ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಾಯಕನಾಗಿ 36 ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತ್ಯಂತ ಯಶಸ್ವಿ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Story first published: Sunday, June 20, 2021, 21:06 [IST]
Other articles published on Jun 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X