For Quick Alerts
ALLOW NOTIFICATIONS  
For Daily Alerts
 

ಭಾರತ vs ದಕ್ಷಿಣ ಆಫ್ರಿಕಾ: ಕೋಚ್ ದ್ರಾವಿಡ್ ದಾಖಲೆ ಹಿಂದಿಕ್ಕಲು ಸಜ್ಜಾದ ವಿರಾಟ್ ಕೊಹ್ಲಿ

Team India skipper Virat Kohli is on his way to breaking coach Rahul Dravids record

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26ರಿಂದ ಆರಂಭವಾಗಲಿದೆ. ಈವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆಲ್ಲಲು ವಿಫಲವಾಗಿರುವ ಕಾರಣ ಭಾರತ ಕ್ರಿಕೆಟ್ ತಂಡಕ್ಕೆ ಈ ಸರಣಿ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಟೀಮ್ ಇಂಡಿಯಾ ಈ ಹಿಂದಿನ ದಾಖಲೆಯನ್ನು ಅಳಿಸಿ ಹೊಸ ಇತಿಹಾಸ ಬರೆಯಲಿದೆ ಎಂಬ ವಿಶ್ವಾಸದಲ್ಲಿ ಭಾರತೀಯ ಕ್ರಿಕೆಟ್ ತಮಡದ ಅಭಿಮಾನಿಗಳಿದ್ದಾರೆ.

ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕೆಲ ಮೈಲಿಗಲ್ಲನ್ನು ಸಾಧಿಸುವ ನಿರೀಕ್ಷೆಯಿದೆ. ಅದರಲ್ಲೂ ಕಳೆದ ಎರಡು ವರ್ಷಗಳಿಂದ ಶತಕ ಬಾರಿಸಲು ವಿಫಲವಾಗಿರುವ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಶತಕದ ಬರವನ್ನು ನೀಗಿಸಲಿದ್ದಾರ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಮಧ್ಯೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮೈಲಿಗಲ್ಲನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಅದರ ನೆಲದಲ್ಲಿ ರಾಹುಲ್ ದ್ರಾವಿಡ್ ಗಳಿಸಿರುವ ರನ್‌ಗಳನ್ನು ಹಿಂದಿಕ್ಕುವ ಅವಕಾಶವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕೋಚ್ ದ್ರಾವಿಡ್ ಅವರನ್ನು ವಿರಾಟ್ ಕೊಹ್ಲಿ ಮೀರಿ ನಿಲ್ಲುವುದು ನಿಶ್ಚಿತ.

ಟೀಮ್ ಇಂಡಿಯಾದ ಮಾಜಿ ನಾಯಕನೂ ಆಗಿರುವ ರಾಹುಲ್ ದ್ರಾವಿಡ್ ಇತರ ಭಾಗಗಳಲ್ಲಿ ಹೊಂದಿರುವ ಬ್ಯಾಟಿಂಗ್ ಸಾಧನೆಗಳಿಗೆ ಹೋಲಿಸಿದರೆ ದಕ್ಷಿಣ ಆಫ್ರಿಕಾದಲ್ಲಿ ಸಾಧನೆ ಅಷ್ಟೇನೂ ಉತ್ತಮವಾಗಿಲ್ಲ. ದಕ್ಷಿಣ ಆಫ್ರಿಕಾದಲ್ಲಿ ಆಡಿದ 22 ಇನ್ನಿಂಗ್ಸ್‌ಗಳಲ್ಲಿ ರಾಹುಲ್ ದ್ರಾವಿಡ್ ಗಳಿಸಿದ್ದು 624 ರನ್‌ಗಳು. 29.71ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿರುವ ಅವರು ಒಂದು ಶತಕ ಹಾಗೂ ಎರಡು ಅರ್ಧ ಶತಕಗಳನ್ನು ಹರಿಣಗಳ ನಾಡಿನಲ್ಲಿ ಸಿಡಿಸಿದ್ದಾರೆ.

ಇತ್ತಮ ಟೀಮ್ ಇಂಡಿಯಾ ಹಾಲಿ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ ಈವರೆಗೆ ಕೇವಲ 10 ಇನ್ನಿಂಗ್ಸ್‌ಗಳಲ್ಲಿ ಮಾತ್ರವೇ ಆಡಿದ್ದು 55.80 ಸರಾಸರಿಯಲ್ಲಿ 558 ರನ್‌ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಹಾಗೂ ಎರಡು ಅರ್ಧ ಶತಕ ಸೇರಿದೆ. ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಲು ವಿರಾಟ್ ಕೊಹ್ಲಿಗೆ ಇನ್ನು ಕೇವಲ 66 ರನ್‌ಗಳ ಅಗತ್ಯವಿದೆ.

ಇನ್ನು ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಸದ್ಯ ನಾಲ್ಕನೇ ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದರೆ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ತಲುಪಲಿದ್ದಾರೆ. ಮೂರನೇ ಸ್ಥಾನದಲ್ಲಿ ವಿವಿಎಸ್ ಲಕ್ಷ್ಮಣ್ ಇದ್ದಾರೆ.

ಆದರೆ ದಕ್ಷಿಣ ಆಫ್ರಿಕಾದಲ್ಲಿ ಭಾರತದ ಪರವಾಗಿ ಅತಿ ಹೆಚ್ಚು ರನ್‌ ರನ್‌ಗಳನ್ನು ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕಿಂತ ಬಹಳ ದೂರವಿದ್ದಾರೆ ವಿರಾಟ್ ಕೊಹ್ಲಿ. ಮೊದಲ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ ಇದ್ದು ಸಚಿನ್ ದಕ್ಷಿಣ ಆಫ್ರಿಕಾದಲ್ಲಿ ಒಟ್ಟು 15 ಟೆಸ್ಟ್ ಪಂದ್ಯಗಳನ್ನು ಆಡಿದ್ದು 46.44ರ ಸರಾಸರಿಯಲ್ಲಿ 1161 ರನ್‌ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ದಕ್ಷಿಣ ಆಫ್ರಿಕಾದಲ್ಲಿ ಒಟ್ಟು 5 ಶತಕಗಳನ್ನು ಸಿಡಿಸಿದ್ದರೆ ಮೂರು ಅರ್ಧ ಶತಕ ಸಿಡಿಸಿದ್ದಾರೆ.

ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಮಡಗಳು ಪರಸ್ಪರ ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾದ ಒಟ್ಟಾರೆ ಪಂದ್ಯಗಳ ಅಂಕಿಅಂಶಗಳನ್ನು ಗಮನಿಸಿದಾಗ ವಿರಾಟ್ ಕೊಹ್ಲಿ ಕೋಚ್ ರಾಹುಲ್ ದ್ರಾವಿಡ್ ಅವರಿಗಿಂತ ಕೇವಲ 177 ರನ್‌ಗಳಷ್ಟು ಹಿಂದಿದ್ದಾರೆ. ವಿರಾಟ್ ಕೊಹ್ಲಿ ಒಟ್ಟಾರೆಯಾಗಿ ದಕ್ಷಿಣ ಆಫ್ರಿಕಾ ವಿರುದ್ಧ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಅದರಲ್ಲಿ 59.72ರ ಸರಾಸರಿಯಲ್ಲಿ 1075 ರನ್‌ಗಳಿಸಿದ್ದಾರೆ. ಇನ್ನು ರಾಹುಲ್ ದ್ರಾವಿಡ್ 33.83ರ ಸರಾಸರಿಯಲ್ಲಿ 1252 ರನ್‌ಗಳಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿಯೂ ಸಚಿನ್ ತೆಂಡೂಲ್ಕರ್ ಅಗ್ರ ಸ್ಥಾನದಲ್ಲಿದ್ದು 25 ಟೆಸ್ಟ್ ಪಂದ್ಯಗಳಲ್ಲಿ 1741 ರನ್‌ಗಳಿಸಿದ್ದಾರೆ. ಇನ್ನು ವಿರೇಂದ್ರ ಸೆಹ್ವಾಗ್ ಎರಡನೇ ಸ್ಥಾನದಲ್ಲಿದ್ದು 15 ಪಂದ್ಯಗಳಲ್ಲಿ 1306 ರನ್‌ಗಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಟೆಸ್ಟ್ ತಂಡ: ಡೀನ್ ಎಲ್ಗರ್ (ನಾಯಕ), ಟೆಂಬಾ ಬವುಮಾ (ಉಪನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್-ಕೀಪರ್), ಕಗಿಸೊ ರಬಾಡ, ಸರೆಲ್ ಎರ್ವೀ, ಜಾರ್ಜ್ ಲಿಂಡೆ, ಬ್ಯೂರಾನ್ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ವಿಯಾನ್ ಮುಲ್ಡರ್, ಏಡೆನ್ ಮಾರ್ಕ್ರಂ,ಕೀಗನ್ ಪೀಟರ್‌ಸೆನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್ನೆ, ಮಾರ್ಕೊ ಜಾನ್ಸೆನ್, ಗ್ಲೆಂಟನ್ ಸ್ಟೌರ್‌ಮನ್, ಸಿಸಂಡಾ ಮಗಾಲಾ, ಪ್ರೆನೆಲನ್ ಸುಬ್ರಾಯೆನ್, ರಿಯಾನ್ ರಿಕೆಲ್ಟನ್, ಡುವಾನ್ನೆ ಒಲಿವಿಯರ್

ಟೀಮ್ ಇಂಡಿಯಾ ಸ್ಕ್ವಾಡ್: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿ ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಷಬ್ ಪಂತ್ (ವಿಕೆಟ್ ಕೀಪರ್),ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ,ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಿಯಾಂಕ್ ಪಾಂಚಾಲ್
ಮೀಸಲು ಆಟಗಾರರು: ಸೌರಭ್ ಕುಮಾರ್, ನವದೀಪ್ ಸೈನಿ, ದೀಪಕ್ ಚಾಹರ್, ಅರ್ಜನ್ ನಾಗ್ವಾಸ್ವಾಲ್ಲಾ.

Story first published: Wednesday, December 22, 2021, 10:10 [IST]
Other articles published on Dec 22, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+