For Quick Alerts
ALLOW NOTIFICATIONS  
For Daily Alerts
 

ಕೊರೊನಾ ಲಸಿಕೆ ಹಾಕಿಸಿಕೊಂಡ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

Team India skipper Virat Kohli vaccinated on monday
Virat Kohli England ಸರಣಿಗು ಮುನ್ನ ಲಸಿಕೆ ಹಾಕಿಸಿಕೊಂಡರು | Oneindia Kannada

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸುತ್ತಿನ ಕೊರೊನಾ ಲಸಿಕೆಯನ್ನು ಸೋಮವಾರ ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ಲಸಿಕೆಯನ್ನು ಹಾಕಿಸಿಕೊಂಡಿದ್ದು ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಸಾಧ್ಯವಾದಷ್ಟಯ ಬೇಗ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲು ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಶೀಘ್ರವೇ ಇಂಗ್ಲೆಂಡ್‌ಗೆ ಪ್ರಯಾಣವನ್ನು ಬೆಳೆಸಲಿದೆ. ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಆರಂಭವಾಗಲಿದೆ.

ವಿರಾಟ್ ಕೊಹ್ಲಿ ಮಾತ್ರವಲ್ಲದೆ ಟೀಮ್ ಇಂಡಿಯಾದ ಅನುಭವಿ ಬೌಲರ್ ಇಶಾಂತ್ ಶರ್ಮಾ ಕೂಡ ಸೋಮವಾರ ಕೊರೊನಾ ವೈರಸ್‌ನ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಪತ್ನಿ ಪ್ರತಿಮಾ ಸಿಂಗ್ ಜೊತೆಗೆ ಇರುವ ಫೋಟೋವನ್ನು ಶರ್ಮಾ ಹಂಚಿಕೊಂಡಿದ್ದು ಫ್ರಂಟ್‌ಲೈನ್ ವಾರಿಯರ್ಸ್‌ಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಅನುಭವಿ ಕ್ರಿಕೆಟಿಗರಾದ ಶಿಖರ ಧವನ್ ಹಾಗೂ ಅಜಿಂಕ್ಯ ರಹಾನೆ ಕೂಡ ಮೊದಲ ಹಂತದ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದರು. ಅವರು ಕೂಡ ಅಭಿಮಾನಿಗಳಲ್ಲಿ ಕೊರೊನಾ ವೈರಸ್‌ಗೆ ಲಸಿಕೆಯನ್ನು ಹಾಕಿಸಿಕಒಳ್ಳುವಂತೆ ಮನವಿ ಮಾಡಿದ್ದರು.

Story first published: Monday, May 10, 2021, 15:55 [IST]
Other articles published on May 10, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+