ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಪಾಂಡ್ಯ ನಾಯಕ

Team India Squad Announce For T20 Series Against Ireland; Hardik Pandya Captain

ಜೂನ್ 26 ರಂದು ಮಲಾಹೈಡ್‌ನಲ್ಲಿ ಪ್ರಾರಂಭವಾಗಲಿರುವ ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗಾಗಿ ಭಾರತ ತಂಡವನ್ನು 17 ಆಟಗಾರರ ತಂಡವನ್ನು ಬುಧವಾರ ಬಿಸಿಸಿಐ ಪ್ರಕಟಿಸಿದೆ.

ಭಾರತ ಮತ್ತು ಐರ್ಲೆಂಡ್‌ಗಳು ಕ್ರಮವಾಗಿ ಜೂನ್ 26 ಮತ್ತು ಜೂನ್ 28 ರಂದು ಡಬ್ಲಿನ್‌ನಲ್ಲಿ ಎರಡು ಟಿ20 ಪಂದ್ಯಗಳನ್ನು ಆಡಲಿವೆ.

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗೆ ಪ್ರಕಟಿಸಲಾದ ತಂಡವನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತಂಡವನ್ನು ಮುನ್ನಡೆಸಲಿದ್ದರೆ, ವೇಗಿ ಭುವನೇಶ್ವರ್ ಕುಮಾರ್ ಉಪ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಈ ಮಧ್ಯೆ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಮಹಾರಾಷ್ಟ್ರದ ಬ್ಯಾಟರ್ ರಾಹುಲ್ ತ್ರಿಪಾಠಿ ಅವರು ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಆಯ್ಕೆಯಿಂದ ಹೊರಗುಳಿದ ನಂತರ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದಿಂದ ಕರೆ ಬಂದಿದೆ.

ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಮರಳಿ ಸ್ಥಾನ ಪಡೆದಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ಕೆಎಲ್ ರಾಹುಲ್, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ಐರ್ಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ.

ಗುಜರಾತ್ ಟೈಟನ್ಸ್ ತಂಡವನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ರ ಪ್ರಶಸ್ತಿಯನ್ನು ತಮ್ಮ ಚೊಚ್ಚಲ ಋತುವಿನಲ್ಲಿ ಮುನ್ನಡೆಸಿದ ನಂತರ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸಲಿದ್ದಾರೆ. ಅವರು ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಗಾಗಿ ತಂಡದ ಉಪ ನಾಯಕರಾಗಿದ್ದಾರೆ.

15 ಪಂದ್ಯಗಳಲ್ಲಿ 487 ರನ್ ಗಳಿಸಿದ್ದ ಹಾರ್ದಿಕ್ ಪಾಂಡ್ಯ, ಐಪಿಎಲ್ ಪಂದ್ಯಾವಳಿಯಲ್ಲಿ ಎಂಟು ವಿಕೆಟ್‌ಗಳನ್ನು ಪಡೆದರು, ಇದು ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತವು 1-2 ರಿಂದ ಹಿನ್ನಡೆ ಅನುಭವಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಸೋತ ನಂತರ, ವಿಶಾಖಪಟ್ಟಣದಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತೀಯ ತಂಡವು 48 ರನ್‌ಗಳಿಂದ ಗೆದ್ದಿತು.

ಭಾರತ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಆರ್. ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.

Story first published: Thursday, June 16, 2022, 10:00 [IST]
Other articles published on Jun 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X