ಬಾಂಗ್ಲಾದೇಶ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಏಕದಿನ ತಂಡಕ್ಕೆ ಸ್ಟಾರ್‌ಆಲ್‌ರೌಂಡರ್ ಕಮ್‌ಬ್ಯಾಕ್

ಡಿಸೆಂಬರ್ ತಿಂಗಳಿನಲ್ಲಿ ಭಾರತ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಳಿದ್ದು ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಭಾಗಿಯಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾ ಬಳಗವನ್ನು ಇಂದು ಆಯ್ಕೆ ಸಮಿತಿ ಪ್ರಕಟಿಸಿದ್ದು ಎರಡು ಸರಣಿಯಲ್ಲಿಯೂ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದು ಕೆಎಲ್ ರಾಹುಲ್ ಉಪ ನಾಯಕನಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಸರಣಿಯಲ್ಲಿ ಭಾರತ ಮೂರು ಪಮದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
ಈ ಸರಣಿಗೆ ಟೀಮ್ ಇಂಡಿಯಾದಲ್ಲಿ ವಿರಾಟ್ ಕೊಹ್ಲಿ ರಿಷಭ್ ಪಂತ್ ಸೇರಿದಂತೆ ಪ್ರಮುಖ ಆಟಗಾರರು ಭಾಗವಹಿಸಲಿದ್ದು ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್‌ಗೆ ವಿಶ್ರಾಂತಿ ನೀಡಲಾಗಿದೆ. ಮತ್ತೊಂದೆಡೆ ಗಾಯದಿಂದಾಗಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದ ರವೀಂದ್ರ ಜಡೇಜಾ ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು ಕಮ್‌ಬ್ಯಾಕ್ ಮಾಡಿದ್ದಾರೆ. ಜಡೇಜಾ ಅವರ ಫಿಟ್‌ನೆಸ್ ಪರೀಕ್ಷೆಯ ಫಲಿತಾಂಶ ಈ ಸರಣಿಯಲ್ಲಿ ಜಡ್ಡು ಭಾಗಿಯಾಗುವುದನ್ನು ದೃಢಪಡಿಸಲಿದೆ.

ಟೆಸ್ಟ್ ತಂಡದಿಂದ ಹೊರಬಿದ್ದ ಹನುಮ ವಿಹಾರಿ!
ಇನ್ನು ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಹೀರೋ ಆಗಿ ಮಿಂಚಿದ ಹನುಮ ವಿಹಾರಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಮಾತನಾಡಿದ್ದು ಬಾಂಗ್ಲಾದೇಶ ವಿರುದ್ಧದ ಸರಣಿಗೆ ಭಾರತದ ಸಂಯೋಜನೆಯಲ್ಲಿ ವಿಹಾರಿಗೆ ಸೂಕ್ತ ಸ್ಥಾನ ದೊರೆಯುತ್ತಿಲ್ಲ ಎಂದು ವಿವರಿಸಿದ್ದಾರೆ. ಮತ್ತೊಂದೆಡೆ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರದ ಪ್ರದರ್ಶನ ನೀಡಿ ಮಿಂಚುತ್ತಿರುವ ಪೃಥ್ವಿ ಶಾ ಹಾಗೂ ಸರ್ಫರಾಜ್ ಖಾನ್ ಕೂಡ ಈ ಪ್ರವಾಸದಲ್ಲಿ ಅವಕಾಶ ಪಡೆಯದೆ ನಿರಾಸೆ ಅನುಭವಿಸಿದ್ದಾರೆ.

ಸ್ಥಾನ ಉಳಿಸಿಕೊಂಡ ಪೂಜಾರ, ರಹಾನೆಗಿಲ್ಲ ಅವಕಾಶ
ಇನ್ನು ತಂಡದಿಂದ ಹೊರಬಿದ್ದಿದ್ದ ಚೇತೇಶ್ವರ್ ಪೂಜಾರ ಮತ್ತೆ ತಂಡದಲ್ಲಿ ಸ್ಥಾನವನ್ನು ಗಳಿಸಿದ ಬಳಿಕ ಈ ಸರಣಿಯಲ್ಲಿಯೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಆದರೆ ಮತ್ತೊಂದೆಡೆ ಮಾಜಿ ಉಪ ನಾಯಕ ಅಜಿಂಕ್ಯಾ ರಹಾನೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಮತ್ತೊಮ್ಮೆ ವಿಫಲವಾಗಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿಯೂ ರಹಾನೆ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದು ರಹಾನೆ ಕಮ್‌ಬ್ಯಾಕ್‌ಗ ಹಾದಿ ದುರ್ಗಮವಾಗಿದೆ.

ಭಾರತದ ಏಕದಿನ ಸ್ಕ್ವಾಡ್ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ರವೀಂದ್ರ ಜಡೇಜಾ (ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಶಿಖರ್ ಧವನ್, ರಿಷಭ್ ಪಂತ್

ಭಾರತದ ಟೆಸ್ಟ್ ಸ್ಕ್ವಾಡ್ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಉಮೇಶ್ ಯಾದವ್, ಶಾರ್ದೂಲ್ ಠಾಕೂರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications