ಟೀಮ್ ಇಂಡಿಯಾದ ಆಟಗಾರರು ಸದ್ಯ ಐಪಿಎಲ್‌ನಲ್ಲಿ ಬ್ಯೂಸಿ ಆಗಿದ್ದಾರೆ. ಈ ವೇಳೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಒಂದು ಬಿಗ್ ಅಪ್‌ಡೇಟ್ ಸಿಕ್ಕಿದೆ. ಈ ಸರಣಿಯನ್ನು ಗೆಲ್ಲಲೇ ಬೇಕು ಎಂಬ ಕನಸಿನಲ್ಲಿ ಟೀಮ್ ಇಂಡಿಯಾ ಹೊಂದಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲು, ಆಸ್ಟ್ರೇಲಿಯಾ ಪ್ರವಾಸದಲ್ಲಿ ಹೀನಾಯ ಸೋಲುಗಳು ಟೆಸ್ಟ್ ತಂಡದ ಮೇಲೆ ಪ್ರಶ್ನೆಗಳು ಏಳುವಂತೆ ಮಾಡಿವೆ. ಈ ವೇಳೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.
ಇಂಗ್ಲೆಂಡ್ ಪ್ರವಾಸದಲ್ಲಿ ಸರಣಿ ಗೆಲ್ಲಲೇ ಬೇಕು ಎಂಬ ಲೆಕ್ಕಾಚಾರದಲ್ಲಿ ಬಿಸಿಸಿಐ ಈ ಬಾರಿ ತಂಡವನ್ನು ಕಟ್ಟುವ ಪ್ಲ್ಯಾನ್ ಮಾಡಿಕೊಂಡಿದೆ. ಇದರಂತೆ ರೋಹಿತ್ ಶರ್ಮಾ ಅವರಿಗೆ ಟೆಸ್ಟ್ ಸರಣಿಯಲ್ಲಿ ನಾಯಕತ್ವ ನೀಡಲಾಗುತ್ತದೋ ಇಲ್ಲವೋ ಎಂಬ ಬಗ್ಗೆಯೂ ಇನ್ನೇನು ಕೆಲವೇ ದಿನಗಳಲ್ಲಿ ಉತ್ತರ ಲಭಿಸಲಿದೆ. ಪ್ರತಿಷ್ಠಿತ ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಮೇಯಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.

ಮೇ ತಿಂಗಳ ಯಾವುದೇ ಸಮಯದಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ. ವರದಿಗಳಲ್ಲಿ ಇಂಗ್ಲೆಂಡ್ ಸರಣಿಗೆ ಐಪಿಎಲ್ ಮಧ್ಯದಲ್ಲಿ ತಂಡವನ್ನು ಪ್ರಕಟಿಸಲಾಗುತ್ತದೋ, ಐಪಿಎಲ್ ಮುಗಿದ ಬಳಿಕ ತಂಡವನ್ನು ಪ್ರಕಟಿಸಲಾಗುತ್ತದೋ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ಇತ್ತೀಚಿನ ದಿನಗಳಲ್ಲಿ ಟೀಮ್ ಇಂಡಿಯಾ ಟೆಸ್ಟ್‌ನಲ್ಲಿ ನೀಡಿರುವ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸುವ ಸಾಧ್ಯೆ ಇದೆ. ಈ ವೇಳೆ ಟೀಮ್ ಇಂಡಿಯಾವನ್ನು ಮುನ್ನಡೆಸುವುದು ಯಾರಯ? ಎಂಬ ಪ್ರಶ್ನೆಗಳು ಉದ್ಭವಿಸಿದೆ. ಇನ್ನು ಬಿಸಿಸಿಐ ನಡೆಸುವ ಸಭೆಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆಯೂ ಚರ್ಚೆಗಳನ್ನು ನಡೆಸುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಪ್ರವಾಸದ ಬಳಿಕ ರೋಹಿತ್ ಶರ್ಮಾ ಅವರ ನಾಯಕತ್ವ ಟೀಕೆಗೆ ಗುರಿಯಾಗಿದೆ.

ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಸೋಲು, ಆಸ್ಟ್ರೇಲಿಯಾದಲ್ಲಿ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಹೀನಾಯ ಸೋಲು ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಮಾಡಿತ್ತು. ಆದರೆ ಪಾಕ್ ಆಯೋಜಿತ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಅಮೋಘ ಪ್ರದರ್ಶನವನ್ನು ನೀಡಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಚಾಂಪಿಯನ್ಸ್ ಟ್ರೋಫಿ ಮುಗಿಯುತ್ತಿದ್ದಂತೆ ಟೀಮ್ ಇಂಡಿಯಾ ಆಟಗಾರರು ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಹೀಗಾಗಿ ಟೆಸ್ಟ್ ಸರಣಿಯಲ್ಲಿ ಯಾವೆಲ್ಲಾ ಆಟಗಾರರಿಗೆ ಅವಕಾಶ ಲಭಿಸುತ್ತದೆ ಎಂಬ ಪ್ರಶ್ನೆಗಳು ಮೂಡಿವೆ. ಇಂಗ್ಲೆಂಡ್ ವಿರುದ್ಧ ಮಹತ್ವದ ಟೆಸ್ಟ್ ಸರಣಿಗೆ ಯಾವೆಲ್ಲಾ ಆಟಗಾರರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂಬುದೇ ಕುತೂಹಲ ಮೂಡಿಸಿದೆ.