ಇಂಗ್ಲೆಂಡ್ ವಿರುದ್ಧ ಟಿ20, ಏಕದಿನ ಸರಣಿಗೆ ಟೀಂ ಇಂಡಿಯಾ ಸ್ಕ್ವಾಡ್ ಘೋಷಣೆ

ಶುಕ್ರವಾರದಿಂದ ಪ್ರಾರಂಭಗೊಳ್ಳಲಿರುವ ಏಕೈಕ ಟೆಸ್ಟ್ ಪಂದ್ಯದ ಬಳಿಕ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾ ಸ್ಕ್ವಾಡ್ ಅನ್ನು ಬಿಸಿಸಿಐ ಗುರುವಾರ ಘೋಷಣೆ ಮಾಡಿದೆ. ಕೋವಿಡ್-19 ಕಾರಣದಿಂದ ಅಂತಿಮ ಟೆಸ್ಟ್ ಪಂದ್ಯವನ್ನ ಮಿಸ್ ಮಾಡಿಕೊಂಡಿರುವ ರೋಹಿತ್ ಶರ್ಮಾ ಮುಂಬರುವ ಟಿ20 ಸರಣಿ ಮತ್ತು ಏಕದಿನ ಸರಣಿಯಲ್ಲಿ ಭಾರತವನ್ನ ಮುನ್ನಡೆಸಲಿದ್ದಾರೆ.
ಮೂರು ಏಕದಿನ ಪಂದ್ಯ ಮತ್ತು ಮೂರು ಟಿ20 ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದ್ದು, ಜುಲೈ 7ರಂದು ಸೌತಾಂಪ್ಟನ್‌ನಲ್ಲಿ ಮೊದಲ ಟಿ20 ಪಂದ್ಯವನ್ನಾಡಲಿದೆ. ಇದಕ್ಕೂ ಮೊದಲು ನಾರ್ಥಾಂಪ್ಟನ್‌ಶೈರ್ ವಿರುದ್ಧ ಎರಡು ಟಿ20 ಅಭ್ಯಾಸ ಪಂದ್ಯಗಳನ್ನೂ ಸಹ ಆಡಲಿದೆ.
ಭಾರತ ಪರ ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಟಿ20 ಸರಣಿಯಲ್ಲಿ ಆಡಿದ ಬಹುತೇಕ ಆಟಗಾರರು ಸ್ಕ್ವಾಡ್‌ನಲ್ಲಿ ಸ್ಥಾನ ಪಡೆದಿದ್ದು, ಏಕದಿನ ತಂಡದಲ್ಲಿ ಮೊದಲ ಬಾರಿಗೆ ಅರ್ಷ್‌ದೀಪ್ ಸಿಂಗ್ ಕರೆ ನೀಡಲಾಗಿದೆ. ಮೊದಲ ಟಿ20 ಪಂದ್ಯದಲ್ಲಿ ಸ್ಥಾನ ಪಡೆದಿರುವ ಅರ್ಷ್‌ದೀಪ್‌ಗೆ, ನಂತರದ ಎರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ. ಅದೇ ರೀತಿಯಲ್ಲಿ ಅದಲು ಬದಲಾಗಿ ಮೊದಲ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್
ಭಾರತ vs ಇಂಗ್ಲೆಂಡ್ 4 ಮತ್ತು 5ನೇ ಟೆಸ್ಟ್ ನಡುವಿನ 10 ಪ್ರಮುಖ ಬದಲಾವಣೆಗಳು

2 ಮತ್ತು 3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್
Ind vs Eng 5th Test: ಭಾರತವನ್ನ ಮುನ್ನಡೆಸಲಿರುವ ಬುಮ್ರಾ, ರೋಹಿತ್ ಶರ್ಮಾ ಔಟ್

ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications